ರಾಜ್ಯ

ಕಪ್ಪೆಚಿಪ್ಪು ಹೆಕ್ಕಲು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ಹೊಳೆಗೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಮೃತಪಟ್ಟ ವ್ಯಕ್ತಿ ರಾಜು ಮರಕಾಲ ಅವರು ಶುಕ್ರವಾರ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋಗಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಬೆಳಿಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಸ್ಥಳೀಯರು ತೇಲುತ್ತಿರುವ ಶವವೊಂದನ್ನು ಗಮನಿಸಿದ್ದಾರೆ. ತಕ್ಷಣ ಕೋಟ ಪೊಲೀಸ್ ಠಾಣೆಗೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ಗೆ […]

ಕಪ್ಪೆಚಿಪ್ಪು ಹೆಕ್ಕಲು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು Read More »

ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ- ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತವಾಗಿದೆ. ಕಲ್ಲು,ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ, ಯಡಕುಮೇರಿ, ಶಿರವಾಗಿಲು, ಆಲೂರು ಸೇರಿ 6 ಕಡೆಗಳಲ್ಲಿ  6 ರೈಲುಗಳು ನಿಂತಿವೆ.

ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ Read More »

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ | ದ.ಕ.ಜಿಲ್ಲೆಯ ವಸಂತ್ ಅಮೀನ್ ವಾರ್ಷಿಕ ಪ್ರಶಸ್ತಿ, ನಟಿ ಉಮಾಶ್ರೀ ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ನಾಟಕ ಅಕಾಡೆಮಿ ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಸಂತ್ ಅಮೀನ್ ವಾರ್ಷಿಕ ಪ್ರಶಸ್ತಿಗೆ, ನಟಿ ಉಮಾಶ್ರೀ, ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ ಕೋಟಿಗಾನಹಳ್ಳಿ ರಾಮಯ್ಯ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ (ಗೌರವ ಪ್ರಶಸ್ತಿ) ಆಯ್ಕೆಯಾಗಿದ್ದಾರೆ. ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಪತ್ರಿಕಾಗೋಷ್ಠಿಯಲ್ಲಿ 93 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದರು. ‘ಜೀವಮಾನ ಸಾಧನೆ ಪ್ರಶಸ್ತಿಯು ತಲಾ 50 ಸಾವಿರ ನಗದು ಹಾಗೂ ನಟರಾಜ ವಿಗ್ರಹ ಒಳಗೊಂಡಿದೆ. ವಾರ್ಷಿಕ ಪ್ರಶಸ್ತಿಗೆ 75

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ | ದ.ಕ.ಜಿಲ್ಲೆಯ ವಸಂತ್ ಅಮೀನ್ ವಾರ್ಷಿಕ ಪ್ರಶಸ್ತಿ, ನಟಿ ಉಮಾಶ್ರೀ ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ Read More »

ಮುಡಾ ಸೈಟ್ ಹಂಚಿಕೆ ಪ್ರಕರಣ | ನಾಳೆ (ಆ.9) ಸಿ.ಎಂ.ಸಿದ್ಧರಾಮಯ್ಯ ಸಹಿತ ಇನ್ನಿತರರ ಮೇಲೆ ದಾಖಲಾದ ಪ್ರಕರಣದ ವಿಚಾರಣೆ

ಬೆಂಗಳೂರು: ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದ್ದು, ಆ.9 ನಾಳೆ ವಿಚಾರಣೆ ನಡೆಯಲಿದೆ. ಸ್ನೇಹಮಯಿ ಕೃಷ್ಣ ಎಂಬುವರು ನೀಡಿದ ದೂರಿನಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ, ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ. ಅರ್ಜಿಯ ವಿಚಾರಣೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ. ದಾಖಲೆಗಳ ಪರಿಶೀಲನೆ ನಡೆದಿದ್ದು, ನಾಳೆಗೆ ವಾದ ಮಂಡನೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.

ಮುಡಾ ಸೈಟ್ ಹಂಚಿಕೆ ಪ್ರಕರಣ | ನಾಳೆ (ಆ.9) ಸಿ.ಎಂ.ಸಿದ್ಧರಾಮಯ್ಯ ಸಹಿತ ಇನ್ನಿತರರ ಮೇಲೆ ದಾಖಲಾದ ಪ್ರಕರಣದ ವಿಚಾರಣೆ Read More »

ದರೋಡೆ ಪ್ರಕರಣ : ಆರೋಪಿಗಳ ಬಂಧನ

ಮಡಿಕೇರಿ : ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಹಾಗೂ  ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾ‌ರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತರು. ಆರೋಪಿಗಳ ಬಳಿಯಿಂದ 3.2

ದರೋಡೆ ಪ್ರಕರಣ : ಆರೋಪಿಗಳ ಬಂಧನ Read More »

ಶಿರೂರು ಗುಡ್ಡ ಕುಸಿತ : ಮುಂದುವರಿದ ಶೋಧ ಕಾರ್ಯಾಚರಣೆ | ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆ | ಅರ್ಜುನ್ ಶವ ಶಂಕೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ

ಶಿರೂರು ಗುಡ್ಡ ಕುಸಿತ : ಮುಂದುವರಿದ ಶೋಧ ಕಾರ್ಯಾಚರಣೆ | ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆ | ಅರ್ಜುನ್ ಶವ ಶಂಕೆ Read More »

ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ

ಸುಳ್ಯ: ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ಅವರ ಮನೆಯ ಸಮೀಪದಲ್ಲಿರುವ ರಬ್ಬರ್ ಸ್ಟೋಕ್ ಹೌಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ರಬ್ಬರ್ ಸ್ಕಾಪ್, ಶೀಟು ಸೇರಿದಂತೆ ಸ್ಟೋಕ್ ಹೌಸ್ ಪೆಟ್ಟಿಗೆಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಮಾದೇವಿ ಕಳಗಿ ಅವರು  ಕೂಡಲೇ ಈ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದು, ಗ್ರಾ.ಪಂ. ಸದಸ್ಯ ನವೀನ ರಬ್ಬರ್ ಟ್ಯಾಪರ್ ಗಳು ಸೇರಿ ಬೆಂಕಿ

ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ Read More »

ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಯಾಣಿಕರು ಅನಾಹುತದಿಂದ ಪಾರು  

ಶಿವಮೊಗ್ಗ : ಚಲಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಕೆ.ಎಸ್.ಆ‌ರ್.ಟಿ.ಸಿ ಬಸ್ ಸಂಪೂರ್ಣ ಹಾನಿಯಾಗಿದೆ. ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಾಯುವ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಮಧ್ಯೆದಲ್ಲೇ ಬಸ್ ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಯಾಣಿಕರು ಅನಾಹುತದಿಂದ ಪಾರು   Read More »

ಬಿಡದಿ ಪೊಲೀಸ್ ಇನ್‍ ಸ್ಪೆಕ್ಟರ್ ತಿಮ್ಮೇಗೌಡ ನೇಣಿಗೆ ಶರಣು

ಬೆಂಗಳೂರು: ಪೊಲೀಸ್ ಇನ್‍ ಸ್ಪೆಕ್ಟರ್ ತಿಮ್ಮೇಗೌಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್‍ ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ಬಿಡದಿಯಲ್ಲಿರುವ ತಮ್ಮ ನಿವಾಸದ ಸಮೀಪ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಿಡದಿ ಪೊಲೀಸ್ ಇನ್‍ ಸ್ಪೆಕ್ಟರ್ ತಿಮ್ಮೇಗೌಡ ನೇಣಿಗೆ ಶರಣು Read More »

ವಯನಾಡು ದುರಂತವನ್ನು “ರಾಷ್ಟ್ರೀಯ ವಿಪತ್ತು’’ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ

ವಯನಾಡು : ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದು, ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ ಪ್ರದೇಶ’ ಎಂದು ಕೇರಳ ರಾಜ್ಯ ಸರ್ಕಾರ ಶುಕ್ರವಾರ ಘೋಷಿಸಿ ಅದೇಶ ಹೊರಡಿಸಿದೆ. ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕೇರಳ ರಾಜ್ಯ ಸಚಿವ ಸಂಪುಟ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ ಕಾನೂನಾತ್ಮಕ ಸಮಸ್ಯೆಗಳಿರುವ

ವಯನಾಡು ದುರಂತವನ್ನು “ರಾಷ್ಟ್ರೀಯ ವಿಪತ್ತು’’ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ Read More »

error: Content is protected !!
Scroll to Top