ರಾಜ್ಯ

ಮುಡಾ ಹಗರಣ : ಮೈತ್ರಿ ನಾಯಕರಿಂದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಮೈಸೂರು ಚಲೋ ಆರಂಭಿಸಿದ್ದಾರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಕೆಂಗೇರಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ […]

ಮುಡಾ ಹಗರಣ : ಮೈತ್ರಿ ನಾಯಕರಿಂದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ Read More »

ವಯನಾಡು ಗುಡ್ಡ ಕುಸಿತ | ಕರ್ನಾಟಕದ 8 ಜನರ ಮೃತದೇಹ ಪತ್ತೆ

ಕೇರಳ :   ವಯನಾಡು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ 9 ಜನರ ಪೈಕಿ 8 ಜನರ ಶವ ಪತ್ತೆಯಾಗಿದೆ. ದುರಂತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದ ಗುರುಮಲ್ಲನ್ (60), ಸಾವಿತ್ರಿ (54), ಶಿವಣ್ಣ(50), ಅಪ್ಪಣ್ಣ (39), ಅಶ್ವಿನಿ ( 13 ), ಜೀತು (11), ದಿವ್ಯಾ(35),  ಶ್ರೇಯಾ(19) ಎಂಬುವರ ಮೃತದೇಹ ಪತ್ತೆ ಆಗಿದೆ. ಮೃತರ ಸಾವಿನ ಬಗ್ಗೆ ಗುಂಡ್ಲುಪೇಟೆ ತಹಸೀಲ್ದಾ‌ರ್ ರಮೇಶ್‌ ಬಾಬು ಖಚಿತ ಪಡಿಸಿದ್ದಾರೆ. ಸುಮಾರು 60 ವರ್ಷಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದ ಮಾದೇವಿ

ವಯನಾಡು ಗುಡ್ಡ ಕುಸಿತ | ಕರ್ನಾಟಕದ 8 ಜನರ ಮೃತದೇಹ ಪತ್ತೆ Read More »

ಪಿಎಸ್ ಐ ಪರಶುರಾಮ ಹಠಾತ್ ಮೃತ್ಯು | ನಿಯಮಬಾಹಿರ ವರ್ಗಾವಣೆ ಆರೋಪ ಮಾಡಿರುವ ಕುಟುಂಬಸ್ಥರು

ಬೆಂಗಳೂರು : ಪಿಎಸ್‌ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್‌ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್‌ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್‌ ಕ್ವಾಟರ್ಸ್‌ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಿಎಸ್‌ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಪಿಎಸ್ ಐ ಪರಶುರಾಮ ಹಠಾತ್ ಮೃತ್ಯು | ನಿಯಮಬಾಹಿರ ವರ್ಗಾವಣೆ ಆರೋಪ ಮಾಡಿರುವ ಕುಟುಂಬಸ್ಥರು Read More »

ವಯನಾಡು : 190 ಅಡಿ ಉದ್ದದ ಸೇತುವೆಯನ್ನು 16 ಗಂಟೆಯಲ್ಲಿ ನಿರ್ಮಿಸಿದ ಸೈನಿಕರು | 24 ಟನ್‌ ತೂಕದ ಸಾಮರ್ಥ್ಯವನ್ನು ಹೊಂದಿದ ಸೇತುವೆ

ಕೇರಳ :  ಚೂರಲ್ಮಲ ಮತ್ತು ಮುಂಡಕ್ಕೈಗೆ  ಸಂರ್ಪಕ್ಕೆ ಕಲ್ಪಿಸುವ ಚಾರಲ್‌ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ. ಜುಲೈ 31 ರ ರಾತ್ರಿ 9 ಗಂಟೆಗೆ ನಿರ್ಮಾಣಕ್ಕೆ ಕೈ ಹಾಕಿದ ಸೇನೆಯ ಎಂಜಿನಿಯರ್‌ಗಳು ಆಗಸ್ಟ್ 01 ರ ಸಂಜೆ 5:30ಕ್ಕೆ ಪೂರ್ಣಗೊಳಿಸಿದರು. ಈ ಸೇತುವೆ 24 ಟನ್‌ ತೂಕದ ಸಾಮರ್ಥ್ಯವನ್ನು ಹೊಂದಿದೆ. ಎಲ್ಲಾ ರೀತಿಯ ಸವಾಲುಗಳನ್ನು ಮೀರಿ ಮದ್ರಾಸ್ ಎಂಜಿನಿಯರ್ಸ್ ಗ್ರೂಪ್‌ನ ಮೇಜ್ ಸೀತಾ ಶೆಲ್ಕೆ

ವಯನಾಡು : 190 ಅಡಿ ಉದ್ದದ ಸೇತುವೆಯನ್ನು 16 ಗಂಟೆಯಲ್ಲಿ ನಿರ್ಮಿಸಿದ ಸೈನಿಕರು | 24 ಟನ್‌ ತೂಕದ ಸಾಮರ್ಥ್ಯವನ್ನು ಹೊಂದಿದ ಸೇತುವೆ Read More »

ವಯನಾಡು ಭೂಕುಸಿತ 308ಕ್ಕೇರಿದ ಸಾವಿನ ಸಂಖ್ಯೆ

 ಕೇರಳ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಇನ್ನೂ ನೂರಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ಭಾರತೀಯ ಸೇನೆ, ಎನ್‌ಡಿಆರ್‌ಎಫ್‌ ಸೇರಿದಂತೆ 40ಕ್ಕೂ ಹೆಚ್ಚು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಭಾರತೀಯ ಸೇನೆಯು 190 ಅಡಿ ಉದ್ದದ ಸೇತುವೆಯನ್ನು ನಿರ್ಮಿಸಿದೆ. ಈ ಸೇತುವೆಯು ಇರುವಂಜಿಪ್ಪುಳ ನದಿಯ ಮೇಲೆ ಮುಂಡಕ್ಕೆ ಮತ್ತು ಚೂರಲ್ಮಲದ ನೆರೆ ಪೀಡಿತ ಪ್ರದೇಶಗಳನ್ನು ಸಂಪರ್ಕಿಸಲು ಸಹಾಯ ಮಾಡುತ್ತದೆ. ಮಂಗಳವಾರ ಸಂಭವಿಸಿದ ಭೀಕರ

ವಯನಾಡು ಭೂಕುಸಿತ 308ಕ್ಕೇರಿದ ಸಾವಿನ ಸಂಖ್ಯೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಸಹಿತ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್  ಹಾಗೂ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 14ರವರೆಗೂ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿತು. ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಮತ್ತು ತುಮಕೂರು ಜೈಲಿನ 24 ಜೈಲು ಸಿಬ್ಬಂದಿಯೂ ಹಾಜರಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಸಹಿತ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ Read More »

ಶಿರಾಡಿ ಘಾಟ್ ಮತ್ತೆ ಸಂಚಾರ ಆರಂಭ  

ನೆಲ್ಯಾಡಿ : ಆ.1 ರಂದು ಮಧ್ಯಾಹ್ನದ ವೇಳೆ ಶಿರಾಡಿ ಘಾಟ್ ನಲ್ಲಿ ವಾಹನಗಳ ಸಂಚಾರ ಪುನರಾರಂಭಗೊಂಡಿದೆ. ಕಳೆದ ರಾತ್ರಿ ಶಿರಾಡಿ ಘಾಟ್ ನ ದೊಡ್ಡ ತಪ್ಲು ಬಳಿ ಗುಡ್ಡ ಜರಿದು ವಾಹನಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಶಿರಾಡಿ ಘಾಟ್ ನಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಗೆ ಬಿದ್ದ ಮಣ್ಣು ತೆರವುಗೊಳಿಸಲಾಗಿದೆ. ಕೆಸರು ಮಣ್ಣಿನಲ್ಲಿ ಸಿಲುಕಿಕೊಂಡಿದ್ದ 2 ಕಂಟೈನರ್ ಹಾಗೂ 1‌ ಡಾಮರು ಸಾಗಾಟದ ಟ್ಯಾಂಕರ್ ತೆರವುಗೊಳಿಸಲಾಗಿದ್ದು ಮಧ್ಯಾಹ್ನದ ಬಳಿಕ ಸಂಚಾರ ಪುನರಾರಂಭಗೊಂಡಿದೆ. ಆದರೂ ಮಣ್ಣು ಕುಸಿಯುತ್ತಲೇ

ಶಿರಾಡಿ ಘಾಟ್ ಮತ್ತೆ ಸಂಚಾರ ಆರಂಭ   Read More »

ಶಿರಾಡಿಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ

ಶಿರಾಡಿ ಘಾಟಿ :  ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತದ ತೆರವು ಕಾರ್ಯ ನಡೆಯುತ್ತಿದ್ದಂತೆ,  ಮತ್ತೆ ಗುಡ್ಡ ಕುಸಿತ ಗುರುವಾರ ಸಂಭವಿಸಿದೆ.  ಪರಿಣಾಮ ಕೆಲವೇ ನಿಮಿಷಗಳ ಹಿಂದೆಯಷ್ಟೇ ತೆರವಾಗಿದ್ದ ರಸ್ತೆ ಮತ್ತೆ ಬಂದ್‌ ಆಗಿದೆ.  ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.

ಶಿರಾಡಿಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ Read More »

ವಯನಾಡು ಭೂಕುಸಿತ : 200 ಕ್ಕೇರಿದ ಸಾವಿನ ಸಂಖ್ಯೆ l ಮತ್ತಷ್ಟು ಹೆಚ್ಚಾಗುವ ಸಂಭವ

ವಯನಾಡು : ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 200 ಕ್ಕೆ ಏರಿಕೆಯಾಗಿದೆ.  ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಮೆಪ್ಪಾಡಿ ಪಟ್ಟಣದ ಸಮೀಪದ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ 130 ಜನರು ಗಾಯಗೊಂಡಿದ್ದಾರೆ. ಸಾಕಷ್ಟು ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮಲಪ್ಪುರಂ ಜಿಲ್ಲೆಯ ಪೋಥುಕಲ್‌ನಲ್ಲಿ ಕೆಲವರ ಶವಗಳು ಪತ್ತೆಯಾಗಿವೆ. ಗುರುತು ಪತ್ತೆ ಕಾರ್ಯ

ವಯನಾಡು ಭೂಕುಸಿತ : 200 ಕ್ಕೇರಿದ ಸಾವಿನ ಸಂಖ್ಯೆ l ಮತ್ತಷ್ಟು ಹೆಚ್ಚಾಗುವ ಸಂಭವ Read More »

ರಾಜ್ಯದಲ್ಲಿ ಆ.3 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಇಂದಿನಿಂದ ಆಗಸ್ಟ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಇಂದು ಮತ್ತು ನಾಳೆ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್‌ ಅಲರ್ಟ್, ಅ.2, 3ರಂದು ಯಲ್ಲೋ ಅಲರ್ಟ್‍ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಜು. 31, ಆಗಸ್ಟ್ 1 ರಂದುಆರೆಂಜ್ ಅಲರ್ಟ್, ಉತ್ತರಕನ್ನಡ ಜಿಲ್ಲೆಯಲ್ಲಿಆ.2, 3ರಂದು ಯಲ್ಲೋ ಅಲರ್ಟ್‍ ಘೋಷಣೆ

ರಾಜ್ಯದಲ್ಲಿ ಆ.3 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮಾಹಿತಿ Read More »

error: Content is protected !!
Scroll to Top