ರಾಜ್ಯ

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್‌ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ Read More »

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅವಹೇಳನ ಮಾಡಿದ ಆರೋಪ ಧರ್ಮಸ್ಥಳ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಡಿಯೋ ಮಾಡಿ ಸದ್ಯ ಜಾಮೀನು ಪಡೆದು ಬಂಧನದಿಂದ ಪಾರಾಗಿರುವ ಯೂಟ್ಯೂಬರ್ ಮೊಹಮ್ಮದ್‌ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ಬಂಧನದ ಭೀತಿಯಲ್ಲಿದ್ದ ಸಮೀರನಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ AI ವಿಡಿಯೋ ಮಾಡಿ ಸಮಾಜದ ದಾರಿ ತಪ್ಪಿಸಿದ ಆರೋಪದಲ್ಲಿ ಪೊಲೀಸರ ಬಂಧನದ ಭೀತಿಯಲ್ಲಿದ್ದ ದೂತ ಸಮೀರನಿಗೆ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳದ ವಿರುದ್ಧ ಸಮೀರ್ ಮಾಡಿದ್ದ AI ವಿಡಿಯೋ ಸಮಾಜದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಈ ಹಿನ್ನೆಲೆ ಆತನ ವಿರುದ್ಧ ಸುಮೋಟೋ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದರು. ಆತನನ್ನು ಬಂಧಿಸುವುದಕ್ಕಾಗಿ ಪೊಲೀಸರು ಬನ್ನೇರುಘಟ್ಟದ ಆತನ ಬಾಡಿಗೆ ಮನೆಯ ಬಳಿಗೂ ತೆರಳಿದ್ದರು. ಬಂಧನದ ಭೀತಿ

ಬಂಧನದ ಭೀತಿಯಲ್ಲಿದ್ದ ಸಮೀರನಿಗೆ ನಿರೀಕ್ಷಣಾ ಜಾಮೀನು Read More »

ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ತಾಲೂಕು ಸಂಚಾರಿ ಪೀಠ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ತಿಮರೋಡಿಗೆ ಎರಡು ಬಾರಿ ನೊಟೀಸ್ ‌ನೀಡಲಾಗಿತ್ತು. ಆದರೆ ಅದಕ್ಕೆ ಯಾವುದೇ ಉತ್ತರ ನೀಡದ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದರು. ತಿಮರೋಡಿ ಬಂಧನದ ಸಮಯದಲ್ಲಿ ಅವರ ನಿವಾಸದ ಸಮೀಪ ಹೈಡ್ರಾಮಾ ನಡೆದಿದ್ದು, ಕೊನೆಗೆ ಅವರ ಖಾಸಗಿ ವಾಹನದಲ್ಲಿ

ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ Read More »

ಕರಾವಳಿಯಲ್ಲಿ ಅಗ್ನಿಶಾಮಕ ದಳ ಬಲವರ್ಧನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಇಂದು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ 2025 ಕುರಿತು ನಡೆದ ಚರ್ಚೆಯಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಅವರು, “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ಮಳೆಯ ಸಮಯದಲ್ಲಿ ಭಾರೀ ಹಾನಿ ಸಂಭವಿಸುತ್ತಿದೆ. ಆದರೆ ಅಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ದಳವು ಫಸ್ಟ್ ರೆಸ್ಪಾಂಡರ್ ಆಗಿ ಸೂಕ್ತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು. ಈ ವೇಳೆ ಮೊದಲು ಮಾತನಾಡಿದ ಕಾಂಗ್ರೆಸ್ ಶಾಸಕ ಐವನ್ ಡಿಸೋಜಾ “ಅಗ್ನಿಶಾಮಕ ದಳದ

ಕರಾವಳಿಯಲ್ಲಿ ಅಗ್ನಿಶಾಮಕ ದಳ ಬಲವರ್ಧನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು Read More »

ಗ್ಯಾರಂಟಿಗೆ ಪರಿಶಿಷ್ಟರ ನಿಧಿಯಿಂದ 13,433 ಕೋ.ರೂ. ಬಳಕೆ

ಉಪಯೋಜನೆ ಮೀಸಲು ಅನುದಾನ ಬಳಸಿರುವುದನ್ನು ಒಪ್ಪಿಕೊಂಡ ಸರ್ಕಾರ ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನದಲ್ಲಿ 13,433 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ ಮಹದೇವಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಪರಿಶಿಷ್ಟರ ಕಲ್ಯಾಣಕ್ಕೆ ಉಪಯೋಜನೆಯ ಸೆಕ್ಷನ್ 7ಸಿ ಅಡಿ ಸಮುದಾಯದ ಕಾರ್ಯಕ್ರಮಗಳನ್ನು ರೂಪಿಸುವ ವೇಳೆ ಜನಸಂಖ್ಯೆಗೆ ಅನುಗುಣವಾಗಿ ಹಣ ಬಳಕೆಗೆ ಅವಕಾಶವಿದೆ. ಅದರಂತೆ ಗ್ಯಾರಂಟಿ ಯೋಜನೆಗಳಿಗೆ

ಗ್ಯಾರಂಟಿಗೆ ಪರಿಶಿಷ್ಟರ ನಿಧಿಯಿಂದ 13,433 ಕೋ.ರೂ. ಬಳಕೆ Read More »

ಮೋದಿ ಫ್ರಾಡ್‌ ಎಂದ ಕಾಂಗ್ರೆಸ್‌ ಸದಸ್ಯ : ವಿಧಾನ ಪರಿಷತ್‌ನಲ್ಲಿ ತಡರಾತ್ರಿ ತನಕ ಕೋಲಾಹಲ

ಬಿಜೆಪಿಯ ಭಾರಿ ಪ್ರತಿಭಟನೆಗೆ ಮಣಿದು ಕ್ಷಮೆ ಕೇಳಿದ ನಜೀರ್‌ ಅಹ್ಮದ್‌ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ನಜೀರ್‌ ಅಹ್ಮದ್‌ ಹೇಳಿದ ನಿಂದನೆಯ ಮಾತು ನಿನ್ನೆ ತಡರಾತ್ರಿ ತನಕ ವಿಧಾನ ಪರಿಷತ್‌ನಲ್ಲಿ ಹೈಡ್ರಾಮಾಕ್ಕೆ ಕಾರಣವಾಯಿತು. ಪ್ರಧಾನಿ ನರೇಂದ್ರ ಮೋದಿ ಈ ದೇಶದ ದೊಡ್ಡ ಫ್ರಾಡ್‌ ಎಂದು ನಜೀರ್‌ ಅಹ್ಮದ್‌ ನಿಂದಿಸಿದ್ದು, ಬಿಜೆಪಿಯ ಆಕ್ರೋಶಭರಿತ ಪ್ರತಿಭಟನೆಯಿಂದಾಗಿ ಕೋಲಾಹಲಕ್ಕೆ ಕಾರಣವಾಯಿತು. ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ನಡುವೆ ಭಾರಿ ವಾಗ್ವಾದ ನಡೆದು ತಡರಾತ್ರಿವರೆಗೂ ಬಿಜೆಪಿ

ಮೋದಿ ಫ್ರಾಡ್‌ ಎಂದ ಕಾಂಗ್ರೆಸ್‌ ಸದಸ್ಯ : ವಿಧಾನ ಪರಿಷತ್‌ನಲ್ಲಿ ತಡರಾತ್ರಿ ತನಕ ಕೋಲಾಹಲ Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ

ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಬರುತ್ತಿರುವ ಕುರಿತು ಹಲವು ದೂರು ದಾಖಲು ಧರ್ಮಸ್ಥಳ : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂಬ ಆರೋಪದ ಬಗ್ಗೆ ಪರಿಶೀಲನೆ ನಡೆಸಲು ಜಾರಿ ನಿರ್ದೇಶನಾಲಯ ಮುಂದಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಯೂಟ್ಯೂಬರ್‌ಗಳಿಗೆ ವಿದೇಶಗಳಿಂದ ಭಾರಿ ಮೊತ್ತದ ಹಣ ಬಂದಿರುವ ಅನುಮಾನವಿದೆ ಎಂದು ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ Read More »

ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು

ಗಾಂಧಿ ಕುಟುಂಬವನ್ನು ಮೆಚ್ಚಿಸಲು ಸಿದ್ದರಾಮಯ್ಯನವರ ಕೊಡುಗೆ ಎಂಬ ಆರೋಪ ಬೆಂಗಳೂರು: ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಘಟನೆಯ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ 10 ಕೋ. ರೂ. ನೆರವು ನೀಡಿರುವುದು ಭಾರಿ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಾಂಧಿ ಕುಟುಂಬವನ್ನು ಮೆಚ್ಚಿಸಲು ಕರ್ನಾಟಕದ ಹಿತವನ್ನು ಕಡೆಗಣಿಸಿ ಪಕ್ಕದ ಕೇರಳಕ್ಕೆ ಕೋಟಿಗಟ್ಟಲೆ ನೆರವು ನೀಡಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ. ವಯನಾಡು ಪ್ರಿಯಾಂಕ ಗಾಂಧಿ ಗೆದ್ದಿರುವ ಲೋಕಸಭಾ ಕ್ಷೇತ್ರ. ನಮ್ಮ ದುಡ್ಡು ಕೇರಳಕ್ಕೆ ನೆರವು. ಇದು ರಾಜ್ಯ

ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು Read More »

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಳಿ | ಎಲಿಫೆಂಟ್‍ ಟಾಸ್ಕ್ ಪೋರ್ಸ್‍ ರಚನೆ ಅಗತ್ಯ | ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು

ಸುಳ್ಯ, ಕಡಬ ಹಾಗು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆ ದಾಳಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆ ಕುರಿತು ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭಾರತೀಯ ಕಿಸಾನ್ ಮಜ್ದೂರ್ ಸಂಘದ ನಿಯೋಗದೊಂದಿಗೆ ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಕಾಡಾನೆ ದಾಳಿಯಿಂದ ಕೃಷಿಕರ ಬೆಳೆಗಳಿಗೆ ಭಾರಿ ಹಾನಿ

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಳಿ | ಎಲಿಫೆಂಟ್‍ ಟಾಸ್ಕ್ ಪೋರ್ಸ್‍ ರಚನೆ ಅಗತ್ಯ | ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು Read More »

error: Content is protected !!
Scroll to Top