ರಾಜ್ಯ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ವೆಂಕಟೇಶ್‌ ಪ್ರಸಾದ್‌ ಬಣ ಬೆಂಗಳೂರು: ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್‌ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಸೋಮಸುಂದರ್, ಖಜಾಂಚಿ ಆಗಿ ಮಧುಕರ್, ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆ ಆಗಿದ್ದಾರೆ. ಬ್ರಿಜೇಶ್ ಪಟೇಲ್ ಬಣದ ಬಿ.ಕೆ ರವಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಚಿನ್ನಸ್ವಾಮಿ […]

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ Read More »

ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಸರ್ಕಾರದ ಮೇಲೆ ದಾಳಿ ಮಾಡಲು ವಿಪಕ್ಷ ಸರ್ವಸನ್ನದ್ಧ ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷದ ಕೈಯಲ್ಲಿ ಸಾಕಷ್ಟು ವಿಷಯಗಳು ಇದ್ದು, ಈ ಅಧಿವೇಶನವೂ ಕಾವೇರುವ ಎಲ್ಲ ಸಾಧ್ಯತೆ ಇದೆ. ಬೆಳೆಗಳಿಗೆ ಬೆಂಬಲ ಬೆಲೆ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಯಾಗಿದ್ದು, ಈ ಸಲ ಅಧಿವೇಶನಕ್ಕೂ ಮೊದಲೇ ಇದು ಬಹಳಷ್ಟು

ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ Read More »

ನಿರ್ಮಲಾ ಸೀತಾರಾಮನ್‌ಗೆ ಏಕವಚನ ಪ್ರಯೋಗ : ಸಿದ್ದರಾಮಯ್ಯ ವಿರುದ್ಧ ಅಶೋಕ್‌ ಕಿಡಿ

ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿಯನ್ನು ಹೀಗೆ ಕರೆಯುತ್ತೀರಾ ಎಂದು ಪ್ರಶ್ನೆ ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಖಂಡನೆ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ಗೌರವಾನ್ವಿತ ಹಣಕಾಸು ಸಚಿವೆ ಅವರನ್ನು ಹೀಗೆ ಏಕವಚನದಲ್ಲಿ, ಅಗೌರವದಿಂದ ಸಂಬೋಧನೆ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ? ಇದು ಮನುವಾದನಾ? ಅಥವಾ ಸಿದ್ದರಾಮಯ್ಯವಾದನಾ? ಅಥವಾ ರಾಹುಲ್

ನಿರ್ಮಲಾ ಸೀತಾರಾಮನ್‌ಗೆ ಏಕವಚನ ಪ್ರಯೋಗ : ಸಿದ್ದರಾಮಯ್ಯ ವಿರುದ್ಧ ಅಶೋಕ್‌ ಕಿಡಿ Read More »

ಮತಾಂತರವಾಗದಿದ್ದರೆ 32 ತುಂಡು ಮಾಡುವ ಬೆದರಿಕೆಯೊಡ್ಡಿದ ಲಿವಿಂಗ್‌ ಪಾರ್ಟ್ನರ್‌ : ಯುವತಿಯಿಂದ ದೂರು

ಲವ್‌ ಜಿಹಾದ್‌ ಮಾಡಿದ್ದಾನೆಂದು ಅಳಲು ತೋಡಿಕೊಂಡ ಯುವತಿ ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದ್ದು ತಾನು ಪ್ರೀತಿಸಿದ್ದ ಹಿಂದೂ ಯುವತಿ ಮುಸ್ಲಿಂ ಮತಕ್ಕೆ ಮತಾಂತರವಾಗದಿದ್ರೆ ಆಕೆಯನ್ನು ಕೊಂದು 32 ತಂಡು ಮಾಡುತ್ತೇನೆ ಎಂದು ಮುಸ್ಲಿಂ ಯುವಕನೋರ್ವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವತಃ ಸಂತ್ರಸ್ತ ಹಿಂದೂ ಯುವತಿ ಮಾಧ್ಯಮಗಳೊಂದಿಗೆ ತನ್ನ ಅಳಲು ತೋಡಿಕೊಂಡಿದ್ದು, ಮತಾಂತರಗೊಂಡರಷ್ಟೇ ಮದುವೆಯಾಗ್ತೀನಿ, ಇಲ್ಲವಾದ್ರೆ ದೆಹಲಿ ಮಾದರಿಯಲ್ಲಿ ಕೊಂದು 32 ಪೀಸ್​ ಮಾಡಿ ಬಳಿಕ ಎರಡನೇ ಮದುವೆಯಾಗ್ತೀನಿ

ಮತಾಂತರವಾಗದಿದ್ದರೆ 32 ತುಂಡು ಮಾಡುವ ಬೆದರಿಕೆಯೊಡ್ಡಿದ ಲಿವಿಂಗ್‌ ಪಾರ್ಟ್ನರ್‌ : ಯುವತಿಯಿಂದ ದೂರು Read More »

ಕರ್ನಾಟಕ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಿಂಚಿದ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನ

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರಪರಿನಿರ್ವಾಣ ದಿನಾಚರಣೆಯ ಉದ್ಘಾಟನ ಕಾರ್ಯಕ್ರಮದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನದ ಮೂಲಕ ಅಪಾರ ಮೆಚ್ಚುಗೆ ಗಳಿಸಿದರು. ಮೈಸೂರಿನ ದಸರಾ ವಸ್ತು ಪ್ರದರ್ಶನ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಅವರನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ

ಕರ್ನಾಟಕ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಿಂಚಿದ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನ Read More »

ಆಘಾತದ ಅಲೆಯೆಬ್ಬಿಸಿದ ಖ್ಯಾತ ವೈದ್ಯೆ, ಮಗನ ಆತ್ಮಹತ್ಯೆ

ಒಂದೇ ಮನೆಯಲ್ಲಿ 10 ವರ್ಷಗಳಲ್ಲಿ 4 ಮಂದಿ ಆತ್ಮಹತ್ಯೆ ಶಿವಮೊಗ್ಗ : ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ರಾಜ್ಯದಲ್ಲಿ ಆಘಾತದ ಅಲೆ ಎಬ್ಬಿಸಿದೆ. ಶಿವಮೊಗ್ಗ ನಗರದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಪ್ರತ್ಯೇಕ ರೂಮ್‌ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ಜಯಶ್ರೀ (57) ಮತ್ತು ಮಗ ಆಕಾಶ್(32) ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ

ಆಘಾತದ ಅಲೆಯೆಬ್ಬಿಸಿದ ಖ್ಯಾತ ವೈದ್ಯೆ, ಮಗನ ಆತ್ಮಹತ್ಯೆ Read More »

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ

ತನಿಖೆ ಇನ್ನೂ ಮುಂದುವರಿಯಲಿದೆ ಎಂದು ಎಸ್‌ಐಟಿ ಮುಖ್ಯಸ್ಥ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ಚಾಜ್‌ರ್ಶೀಟ್ ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾಜ್‌ರ್ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರು ಯಾರು? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ Read More »

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ

ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ ಕೊಲೆಯಾದ ದುರ್ದೈವಿ. ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10.30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ Read More »

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ದುರಂತ ಬೆಂಗಳೂರು : ಧಾರವಾಡದಲ್ಲಿ ಶುಕ್ರವಾರ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ ಭೀಕರ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್​​​ ಪಂಚಾಕ್ಷರಿ ಸಾಲಿಮಠ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸಾಲಿಮಠ ಅವರು ಇಂದು ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ Read More »

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ

ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್​ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ.

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ Read More »

error: Content is protected !!
Scroll to Top