ರಾಜ್ಯ

ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಯೋಗೀ ಸರ್ಕಾರದ ಮಾದರಿ ಕ್ರಮ

15,000 ಎನ್‌ಕೌಂಟರ್, 30,000ಕ್ಕೂ ಅಧಿಕ ಅಪರಾಧಿಗಳು ಅಂದರ್ ಲಕ್ನೋ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಖಡಕ್ ಕ್ರಮಗಳನ್ನು ತೆಗೆದುಕೊಂಡಿರುವ ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಈ ವರೆಗೆ 15 ಸಾವಿರ ಎನ್‌ಕೌಂಟರ್ ನಡೆಸಿದ್ದು, ಇದರಲ್ಲಿ 238 ಮಂದಿ ಹತರಾಗಿದ್ದಾರೆ ಎಂದು ಮೂಲಗಳು ಹೇಳಿವೆ. 2017 ರಿಂದೀಚೆಗೆ 30 ಸಾವಿರಕ್ಕೂ ಅಧಿಕ ಅಪರಾಧಿಗಳನ್ನು ಜೈಲಿಗಟ್ಟಲಾಗಿದೆ. 9 ಸಾವಿರಕ್ಕೂ ಅಧಿಕ ಆರೋಪಿಗಳಿಗೆ ಗುಂಡೇಟು ತಗುಲಿದೆ. ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದವರ ಮೇಲೆ ನಡೆಸಲಾದ ಎನ್‌ಕೌಂಟರ್‌ನಲ್ಲಿ […]

ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಯೋಗೀ ಸರ್ಕಾರದ ಮಾದರಿ ಕ್ರಮ Read More »

ವಾಹನಗಳ ಮೇಲೆ ರಾಷ್ಟ್ರ ಧ್ವಜ, ಇನ್ನಿತರ ಚಿಹ್ನೆಗಳ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವಾಹನಗಳ ಮೇಲೆ ಅನಧಿಕೃತವಾಗಿ ರಾಷ್ಟ್ರಧ್ವಜ ಅಥವಾ ಚಿಹ್ನೆಗಳನ್ನು ಬಳಕೆ ಮಾಡಿದಲ್ಲಿ ತಕ್ಷಣವೇ ಜಪ್ತಿ ಮಾಡಿ, ದಂಡ ವಸೂಲಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಹೈಕೋರ್ಟ್ ನೀಡಿರುವ ತೀರ್ಪಿಗೆ ಅನುಗುಣವಾಗಿ ಮಹತ್ವವಾದ ಚಿಹ್ನೆಗಳು, ಧ್ವಜಗಳು, ಹೆಸರು, ಲೊಗೋ, ಲಾಂಛನ, ಮೊಹರು‌ಗಳನ್ನು ಅನಧಿಕೃತವಾಗಿ ದುರ್ಬಳಕೆ ಮಾಡುವುದನ್ನು ತಡೆಯಲು ಈ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ ಈ ಹಿಂದೆಯೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಸರ್ಕಾರದ ಅಧಾನದಲ್ಲಿರುವ ಎಲ್ಲಾ ಇಲಾಖೆಗಳು, ಸಂಸ್ಥೆಗಳು, ನಿಗಮ ಮಂಡಳಿಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು,

ವಾಹನಗಳ ಮೇಲೆ ರಾಷ್ಟ್ರ ಧ್ವಜ, ಇನ್ನಿತರ ಚಿಹ್ನೆಗಳ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ Read More »

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರದಿಂದ ತಡೆ : ಎಸ್ಮಾ ಜಾರಿ

ಜುಲೈ 1ರಿಂದ ಡಿಸೆಂಬರ್​ 12ರವರೆಗೆ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್​ಟಿಸಿ ಅಧಿಸೂಚನೆ ಬೆಂಗಳೂರು : ಆಗಸ್ಟ್​ 5ರಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಕೆಎಸ್ಆರ್​​ಟಿಸಿ ಸಾರಿಗೆ ನೌಕರರ ವಿರುದ್ಧ ಸರ್ಕಾರ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ಅಡಿ (ಎಸ್ಮಾ) ಕಾಯಿದೆ ಜಾರಿ ಮಾಡಿ ಎಚ್ಚರಿಕೆ ನೀಡಿದೆ. ಈ ಕಾಯಿದೆಯಡಿ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗುವಂತಿಲ್ಲ. ಜುಲೈ 1ರಿಂದ ಡಿಸೆಂಬರ್​ 12ರವರೆಗೆ ನಿಗಮದಲ್ಲಿ‌ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್​ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ತಮ್ಮ ಬೇಡಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರದಿಂದ ತಡೆ : ಎಸ್ಮಾ ಜಾರಿ Read More »

ಹಿಂದುಳಿದ ವರ್ಗದ ಅಭಿವೃದ್ಧಿ ಬಾಯಿ ಮಾತಿನ ಘೋಷಣೆಯಿಂದ ಆಗುವುದಿಲ್ಲ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಾಯಿ ಮಾತಿನ ಅಭಿವೃದ್ಧಿಯ ಘೋಷಣೆಯಿಂದ ದಲಿತರು, ಹಿಂದುಳಿದ ವರ್ಗದವರ ಹೊಟ್ಟೆ ತುಂಬುವುದಿಲ್ಲ. ಆದರೆ ಸಿಎಂ ‌ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರೆ ಅಭಿವೃದ್ಧಿ ಆಗುತ್ತದೆ ಎಂದು ತಿಳಿದುಕೊಂಡಿದ್ದಾರೆಂದು ‌ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ‌ಜೊತೆಗೆ ಮಾತನಾಡಿದ ಅವರು, ಸಿಎಂ ದಲಿತರ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ. ಮೊದಲು ಅವರಿಗೆ ಮೀಸಲಿಟ್ಟ ಹಣವನ್ನು ನೀಡುವತ್ತ ಗಮನ ನೀಡಲಿ. ಹಿಂದುಳಿದ ವರ್ಗದವರನ್ನು ಅಭಿವೃದ್ಧಿ ಮಾಡುವುದಾಗಿ ಹೇಳುತ್ತಾರೆ. ಆದರೆ ಅವುಗಳ ಅಭಿವೃದ್ಧಿಗೆ ಮೀಸಲಿಟ್ಟ ಯೋಜನೆಗಳಿಗೆ ಹಣ ನೀಡುವುದಿಲ್ಲ ಎಂದು

ಹಿಂದುಳಿದ ವರ್ಗದ ಅಭಿವೃದ್ಧಿ ಬಾಯಿ ಮಾತಿನ ಘೋಷಣೆಯಿಂದ ಆಗುವುದಿಲ್ಲ : ಬಸವರಾಜ ಬೊಮ್ಮಾಯಿ Read More »

ಮೃತ ವ್ಯಕ್ತಿಯ ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ

ಕಾರ್ಕಳ: ಮೃತನ ಕಿಡ್ನಿ, ಹೃದಯ, ಕಣ್ಣುಗಳನ್ನು ದಾನ ಮಾಡುವ ಮೂಲಕ ನಂದಳಿಕೆಯ ಕುಟುಂಬವೊಂದು ಸಾವಿನ ನೋವಿನಲ್ಲೂ ಮತ್ತೊಂದಷ್ಟು ಜನರಿಗೆ ಸಾಂತ್ವನವಾಗುವ ಮೂಲಕ ಮಾದರಿಯಾಗಿದ್ದಾರೆ. ಬೆಂಗಳೂರು ಮೂಲದ ಕಂಪನಿಯೊಂದರಲ್ಲಿ ಬಾಂಗ್ಲಾದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳ್ಮಣ್ಣಿನ ನಂದಳಿಕೆಯ ನಿತೀಶ್ ಎನ್(46) ಮೃತಪಟ್ಚಿದ್ದರು. ಇವರ ಪತ್ನಿ ಮತ್ತು ತಾಯಿ ಮೃತರ ಕಣ್ಣು, ಕಿಡ್ನಿ, ಹೃದಯವನ್ನು ದಾನ ಮಾಡುವಂತೆ ವಿನಂತಿಸಿಕೊಂಡಿದ್ದಾರೆ. ನಿತೀಶ್ ಅವರು ಒಂದು ಕಣ್ಣಿನ ದೃಷ್ಟಿಯ ತೊಂದರೆ ಅನುಭವಿ ಸುತ್ತ ಬಿದ್ದು, ತಪಾಸಣೆಗಾಗಿ ಬೆಂಗಳೂರಿಗೆ ಬಂದಿದ್ದರು. ತಪಾಸಣೆಯ ಸಂದರ್ಭದಲ್ಲಿ ತೊಂದರೆಯಾಗಿ ಆ್ಯಂಜಿಯೋಪ್ಲಾಸ್ಟ್

ಮೃತ ವ್ಯಕ್ತಿಯ ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ Read More »

ಸುರ್ಜೆವಾಲಾ ಕರ್ನಾಟಕದ ಸೂಪರ್‌ ಸಿಎಂ: ಬಿಜೆಪಿ-ಜೆಡಿಎಸ್‌ ಟೀಕೆ

ಶಾಸಕರು ಈಗ ಕ್ಷೇತ್ರದ ಅಭಿವೃದ್ಧಿಗೆ ಸುರ್ಜೇವಾಲ ಅವರನ್ನು ಸುತ್ತುತ್ತಿದ್ದಾರೆ ಎಂದು ವ್ಯಂಗ್ಯ ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಪದೇ ಪದೆ ಬಂದು ಶಾಸಕರ, ಸಚಿವರ ಸಭೆ ನಡೆಸುತ್ತಿರುವುದನ್ನು ಬಿಜೆಪಿ ಮತ್ತು ಜೆಡಿಎಸ್‌ ಟೀಕಿಸಿವೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಸುರ್ಜೆವಾಲಾ ಸೂಪರ್‌ ಸಿಎಂ ಆಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ @rssurjewala ಅವರಿಗೆ ಅಭಿನಂದನೆಗಳು, ಚುನಾಯಿತ ಮುಖ್ಯಮಂತ್ರಿಗಳು ಸರ್ಕಾರ ನಡೆಸಲು

ಸುರ್ಜೆವಾಲಾ ಕರ್ನಾಟಕದ ಸೂಪರ್‌ ಸಿಎಂ: ಬಿಜೆಪಿ-ಜೆಡಿಎಸ್‌ ಟೀಕೆ Read More »

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಡ್ರಗ್ಸ್‌, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕಾಲೇಜುಗಳಲ್ಲಿ ಡ್ರಗ್ಸ್‌, ರ‍್ಯಾಗಿಂಗ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರ ಆದೇಶ ಮಾಡಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್,

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ Read More »

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಹೆಸರಿನಲ್ಲಿ ಕರೆ ಮಾಡಿ ನಿವೃತ್ತ ವಿಜ್ಞಾನಿಗೆ ವಂಚನೆ

ಕಾಂಬೋಡಿಯಾದ ಸೈಬರ್‌ ವಂಚಕರ ಹೊಸ ತಂತ್ರ ಬೆಂಗಳೂರು: ಮುಂಬಯಿಯ ಎನ್‌ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್‌ ಅಧಿಕಾರಿ ಕನ್ನಡಿಗ ದಯಾ ನಾಯಕ್ಹೆಸರು ಹೇಳಿ ಚಿಕ್ಕಬಳ್ಳಾಪುರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿವೃತ್ತ ಭೂ ವಿಜ್ಞಾನಿಗೆ ಸೈಬರ್​ ವಂಚಕರು ಲಕ್ಷಾಂತರ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ದಯಾ ನಾಯಕ್ ಹೆಸರಿನಲ್ಲಿ ಸೈಬರ್ ವಂಚಕರು ಕರೆ ಮಾಡಿದ್ದಾರೆ. ಮುಂಬೈಯ ಕೆನರಾ ಬ್ಯಾಂಕ್​ನಲ್ಲಿ

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಹೆಸರಿನಲ್ಲಿ ಕರೆ ಮಾಡಿ ನಿವೃತ್ತ ವಿಜ್ಞಾನಿಗೆ ವಂಚನೆ Read More »

ಕಲ್ಲೇಗ ಟೈಗರ್ಸ್ ಅಕ್ಷಯ್ ಕಲ್ಲೇಗ ‌ಕೊಲೆ ಪ್ರಕರಣ: ಹೈಕೋರ್ಟ್‌ನಿಂದ ಆರೋಪಿಗಳ ಜಾಮೀನು ಅರ್ಜಿ ರದ್ದು

ಬೆಂಗಳೂರು: ಪುತ್ತೂರಿನ ಜೊತೆಗೆ ಹತ್ತೂರನ್ನು ಬೆಚ್ಚಿ ಬೀಳಿಸಿದ್ದ ಕಲ್ಲೇಗ ಟೈಗರ್ಸ್ ಹುಲಿ ಕುಣಿತ ತಂಡದ ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಎರಡನೇ ಬಾರಿಯೂ ತಿರಸ್ಕರಿಸಿದೆ. ಹಾಗೆಯೇ ಈ ಪ್ರಕರಣದ ವಿಚಾರಣೆಯನ್ನು ನಾಲ್ಕು ತಿಂಗಳುಗಳೊಳಗೆ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಕಟ್ಟುನಿಟ್ಟಾಗಿ ಗಡುವು ವಿಧಿಸಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಆರೋಪಿಗಳಾದ ಚೇತನ್, ‌ಮನಿಶ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ರದ್ದು ಮಾಡಿರುವುದಾಗಿದೆ. ಮೃತ ಕುಟುಂಬದ

ಕಲ್ಲೇಗ ಟೈಗರ್ಸ್ ಅಕ್ಷಯ್ ಕಲ್ಲೇಗ ‌ಕೊಲೆ ಪ್ರಕರಣ: ಹೈಕೋರ್ಟ್‌ನಿಂದ ಆರೋಪಿಗಳ ಜಾಮೀನು ಅರ್ಜಿ ರದ್ದು Read More »

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬೆಂಗಳೂರು: ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಾದನಾಯಕನಹಳ್ಳಿಯ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಅಟೋ ಚಾಲಕ ದೀಪು (26) ಎಂದು ಗುರುತಿಸಲಾಗಿದೆ. ಈತ ಬಾಲಕಿಯ ನೆರೆಮನೆಯ ನಿವಾಸಿಯಾಗಿದ್ದು ರಾತ್ರಿ ವೇಳೆ ಆಟೋ ಓಡಿಸಿ, ಹಗಲು ಮನೆಯಲ್ಲೇ ಇರುತ್ತಿದ್ದ. ನೆರೆಮನೆಯ ಬಾಲಕಿಯ ಜೊತೆಗೆ ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿ ಆಕೆಯ ವಿರೋಧದ ನಡುವೆಯೂ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಆಕೆ ಗರ್ಭಿಣಿ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ Read More »

error: Content is protected !!
Scroll to Top