ರಾಜ್ಯ

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಹಾಗೆ ಸಿ ಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ R. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಸಚಿವ ಚೆಲುವರಾಯಸ್ವಾಮಿ ಅವರಿಗೆ ಅನುದಾನಕ್ಕೆ ಸಂಬಂಧಿಸಿದ ಹಾಗೆ ಸಿದ್ದರಾಮಯ್ಯ ಮನವಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷಿ ಸಚಿವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿಗಾಗಿ ಸಿಎಂ ಬಳಿ […]

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್ Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ

136 ಶಾಸಕರು ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಎಂದು ಸವಾಲು ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಯಂತ್ರಗಳ ಬದಲಾಗಿ ಹಿಂದಿನ ಕಾಲದ ಮತಪತ್ರಗಳನ್ನು ಬಳಸುವ ರಾಜ್ಯ ಸರ್ಕಾರದ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಇದು ನಮ್ಮ ಅನುಭವದ ಮೇಲೆ ಕೈಗೊಂಡ ನಿರ್ಧಾರ ಎಂದು ಸಮರ್ಥಿಸಿದ್ದರೂ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸಿದ್ದರಾಮಯ್ಯ ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ಬಿಜೆಪಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ Read More »

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ

ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿದ್ದ ಕಾನ್ಸ್‌ಸ್ಟೆಬಲ್‌ ಬೆಂಗಳೂರು: ವಕೀಲೆಯಾಗಿರುವ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಸ್‌ಎಎಫ್‌ನ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸಿದ್ದೇಗೌಡ ಅಲಿಯಾಸ್ ಸಿದ್ದು ಬಂಧಿತ ಕಾನ್‌ಸ್ಟೆಬಲ್‌ ಎಂದು ಗುರುತಿಸಲಾಗಿದೆ. ಸಿದ್ದೇಗೌಡ ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಕಾರ್ಯನಿರ್ವಹಿಸುತ್ತಿದ್ದ. ಬೆಂಗಳೂರಿನಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಕೀಲೆ ಬಸವೇಶ್ವರ ನಗರ ಪೊಲೀಸ್

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ Read More »

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣವೂ ವಾಪಸ್‌ ಬೆಂಗಳೂರು : ವಿವಿಧ ಸಂದರ್ಭಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆ ಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಾರಿ ನಿರ್ದೇಶನಾಲಯ(ಇ.ಡಿ) 2019 ಜೂನ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಕಾಂಗ್ರೆಸ್‌

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ Read More »

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ ಪರ ಇದ್ದ ವಕೀಲರುಗಳ ‌ಮೇಲೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ಎಂಬವರು ದೂರು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ. ಧನಂಜಯ್ ಮತ್ತು ತಂಡದ ವಿರುದ್ಧ ದೂರು ನೀಡಲಾಗಿದೆ. ಆರೋಪಿ ಚೆನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಧನಂಜಯ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದು, ಆ ದಾಖಲೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಆರಂಭದಲ್ಲಿ

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು Read More »

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಅನನ್ಯಾ ಭಟ್ ಸುಳ್ಳು ಕೇಸ್ ದಾಖಲಿಸಿದ ಸುಜಾತ ಭಟ್ ಅವರ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬರ್ ಅಭಿಷೇಕ್‌ನನ್ನು SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸೆ. 3 ರಂದು ದಾಖಲೆಗಳ ಸಮೇತ ಸಂಜೆ SIT ಕಚೇರಿಗೆ ಆಗಮಿಸಿದ ಅಭಿಷೇಕ್‌ನನ್ನು ಸೆ. 4 ರ ಬೆಳಗ್ಗಿನ ವರೆಗೆ SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ಕೂಡಾ ಅಭಿಷೇಕ್ ವಿಚಾರಣೆ ಮುಂದುವರೆದಿದೆ. ಅಭಿಷೇಕ್ ಬುರುಡೆಗಾಗಿ ಬಂಗ್ಲೆಗುಡ್ಡದಲ್ಲಿ ಜಯಂತ್ ಜೊತೆಗೆ ರಾತ್ರಿಯಿಡೀ ಹುಡುಕಾಟ ನಡೆಸಿದ್ದು, ಇದನ್ನು

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT Read More »

ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್‌

ಬೆಂಗಳೂರು : ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಶಾಮನೂರು ಮನೆತನದ ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದ ಮೇರೆಗೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಶಾಸಕ ಬಿ.ಪಿ. ಹರೀಶ್‌ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸ್ವತಃ ಎಸ್ಪಿ ಉಮಾ ಪ್ರಶಾಂತ್‌ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌) ಕಾಲಂ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ

ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್‌ Read More »

ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರ ಆರೋಪಿ ಚೆನ್ನಯ್ಯನ SIT ಕಸ್ಟಡಿ ಅಂತ್ಯವಾಗಿದ್ದು, ಆತನನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಆತನನ್ನು ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಹೆಚ್ಚುವರಿ ಮಾಹಿತಿ ಪಡೆಯಲು ಮತ್ತೆ SIT ಅಧಿಕಾರಿಗಳು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು Read More »

ಕುಂಕುಮ ಹಚ್ಚುವ ಪದ್ದತಿ ಮುಸ್ಲಿಮರಲ್ಲಿಲ್ಲ: ಸಿ ಎಂ ಸಿದ್ದರಾಮಯ್ಯ

ಮೈಸೂರು: ಬಾನು ಮುಷ್ತಾಕ್ ಮುಸ್ಲಿಮ್ ಮಹಿಳೆ ಯಾಗಿದ್ದು, ಅವರ ಧರ್ಮದಲ್ಲಿ ಕುಂಕುಮ ಹಚ್ಚುವ ಪದ್ಧತಿ ಇಲ್ಲ. ನಾವು ದಸರಾವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಅದಕ್ಕೆ ಬೇರೆ ಧರ್ಮದವರು ಉದ್ಘಾಟಕರಾದರೆ ಕುಂಕುಮ ಹಚ್ಚಿ ಬನ್ನಿ, ಹಿಂದೂಗಳಾಗಿ ಬನ್ನಿ ಎನ್ನುವುದು ಸರಿಯಲ್ಲ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿಯ ವಿರೋಧಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ಬಾನು ಮುಷ್ತಾಕ್ ಅವರ ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಅವರು ಕನ್ನಡದ ಬರಹಗಾರ್ತಿ.

ಕುಂಕುಮ ಹಚ್ಚುವ ಪದ್ದತಿ ಮುಸ್ಲಿಮರಲ್ಲಿಲ್ಲ: ಸಿ ಎಂ ಸಿದ್ದರಾಮಯ್ಯ Read More »

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬುರುಡೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಕಳೆದ ಒಂದು ವರ್ಷದಿಂದಲೇ ತಯಾರಿ ನಡೆದಿತ್ತು. ಚೆನ್ನಯ್ಯನ ಮೂಲಕ ಕಾಡಿನಲ್ಲಿ ಕೆಲವು ಸ್ಥಳಗಳನ್ನು ಗುರುತು ಮಾಡಿ ಅಲ್ಲಿ ಗಿಡಗಳನ್ನು ನೆಡಲಾಗಿತ್ತು ಎಂಬ ಅಂಶ SIT ಗೆ ಗೊತ್ತಾಗಿದೆ. ದೂರುದಾರ ಆರೋಪಿ ಚೆನ್ನಯ್ಯ‌ನನ್ನು ಕಳೆದ ಕೆಲ ದಿನಗಳಿಂದಲೂ SIT ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಚೆನ್ನಯ್ಯನ ಪಾತ್ರ ಸೃಷ್ಟಿಯಾದಾಗಿಂದ ಈ ವರೆಗಿನ ಎಲ್ಲಾ ವಿಚಾರಗಳನ್ನು ಕ್ರಮಬದ್ಧವಾಗಿ ಜೋಡಿಸುವ ಕಾರ್ಯ ನಡೆಯುತ್ತಿದೆ. ಗಿರೀಶ್ ಮಟ್ಟಣ್ಣನವರ್ ತಂಡ ಕಳೆದ ಒಂದು ವರ್ಷದ

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್ Read More »

error: Content is protected !!
Scroll to Top