ರಾಜ್ಯ

ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ: ಆರೋಪಿಗಳು ಪೊಲೀಸರ ವಶಕ್ಕೆ

ಶಿವಮೊಗ್ಗ: ಮನೆಯ ಮುಂದೆ ಕಸ ಹಾಕದಂತೆ‌ ಸೂಚಿಸಿದ ‌ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಸಾಗರದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಹುಚ್ಚಮ್ಮ (67) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಪ್ರೇಮ, ಆಕೆಯ ಪತಿ ಮಂಜುನಾಥ್, ಪುತ್ರ  ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಜೂ. 24 ರಂದು ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ ಕಸ ಎಸೆಯದಂತೆ ನೆರೆಮನೆಯ ಪ್ರೇಮ ಅವರಿಗೆ ಹೇಳಿದ್ದಾರೆ. ಇದರಿಂದ ಸಿಟ್ಟಾದ ಪ್ರೇಮ ಅವರು ಹುಚ್ಚಮ್ಮ ಅವರನ್ನು ಮನೆಯಿಂದ […]

ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ: ಆರೋಪಿಗಳು ಪೊಲೀಸರ ವಶಕ್ಕೆ Read More »

ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರಿಗೆ ಎತ್ತಿನ ಭುಜ ಚಾರಣಕ್ಕೆ ನಿರ್ಬಂಧ

ಚಿಕ್ಕಮಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಮಂಜು ಕವಿಯುತ್ತಿರುವ ಕಾರಣದಿಂದ ಎತ್ತಿನ ಭುಜ ಪ್ರವಾಸಿ ತಾಣಕ್ಕೆ ಜನರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಇಲಾಖೆ, ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ದೇಶ ವಿದೇಶಗಳ ಪ್ರವಾಸಿಗರು ಎತ್ತಿನ ಭುಜಕ್ಕೆ ಚಾರಣಕ್ಕೆ ಬರುತ್ತಾರೆ. ಮಳೆಗಾಲದಲ್ಲಿ ಪ್ರವಾಸಿಗರಿಗೆ ಅನಾಹುತ ಎದುರಾದರೆ ಅವರನ್ನು ರಕ್ಷಣೆ ಮಾಡುವುದು ಕಷ್ಟಸಾಧ್ಯವಾಗುತ್ತದೆ. ಎತ್ತಿನ ಭುಜದ ಮೇಲ್ಭಾಗಕ್ಕೆ ಯಾವುದೇ ವಾಹನಗಳ ಸಂಚಾರ ಇಲ್ಲ. ಹಾಗಾಗಿ ಪ್ರವಾಸಿಗರಿಗೆ ಅಪಾಯವಾದರೆ

ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರಿಗೆ ಎತ್ತಿನ ಭುಜ ಚಾರಣಕ್ಕೆ ನಿರ್ಬಂಧ Read More »

ತುಂಬಿದ ಕೆಆರ್‌ಎಸ್: ಸಿ.ಎಂ. ಸಿದ್ದರಾಮಯ್ಯ ಅವರಿಂದ ಬಾಗಿನ ಸಮರ್ಪಣೆ

ಬೆಂಗಳೂರು: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರು ಭರ್ತಿಯಾಗಿದ್ದು, ಸಿ.ಎಂ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಇನ್ನಿತರರ ಜೊತೆಗೆ ಸೋಮವಾರ ಜಲಾಶಯಕ್ಕೆ ಆಗಮಿಸಿ ಕಾವೇರಿ ನದಿಗೆ ಬಾಗಿನ ಸಮರ್ಪಿಸಿದರು. ಬಾಗಿನ ಸಮರ್ಪಣೆ ಹಿನ್ನೆಲೆಯಲ್ಲಿ ಜಲಾಶಯಕ್ಕೆ ವೈದಿಕರ ತಂಡ ಬೆಳಗ್ಗಿನಿಂದಲೇ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳನ್ನು ನಡೆಸಿತು. ಜಲಾಶಯದ ಕೆಳಗಿನ ಕಾವೇರಿಯ ಪ್ರತಿಮೆಗೂ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಕೆಆರ್‌ಎಸ್‌ನಲ್ಲಿ ಇದೆ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಡ್ಯಾಂ ಭರ್ತಿಯಾಗಿದ್ದು, ಇದೊಂದು ದಾಖಲೆಯಾಗಿದೆ. ಈ

ತುಂಬಿದ ಕೆಆರ್‌ಎಸ್: ಸಿ.ಎಂ. ಸಿದ್ದರಾಮಯ್ಯ ಅವರಿಂದ ಬಾಗಿನ ಸಮರ್ಪಣೆ Read More »

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು

ಡ್ಯೂಟಿ ಡಾಕ್ಟರ್‌ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ರೋಗಿಗಳು ಮತ್ತು ಸಿಬ್ಬಂದಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟ್ರರ್ ಬುಕ್, ಬೆಡ್ ಎಲ್ಲ ಸುಟ್ಟುಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು Read More »

ಹಾಸನದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹೃದಯಾಘಾತ : ಮತ್ತೆ ಮೂವರು ಬಲಿ

40 ದಿನಗಳಲ್ಲಿ 21 ಯುವಕ-ಯುವತಿಯರನ್ನು ಬಲಿತೆಗೆದುಕೊಂಡ ಹೃದಯಾಘಾತ ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ನಿನ್ನೆ ಮತ್ತೆ ಒಂದೇ ದಿನದಲ್ಲಿ ಮೂವರು ಇದೇ ಕಾರಣದಿಂದ ಮೃತಪಟ್ಟಿರುವುದು ವ್ಯಾಪಕ ಕಳವಳಕ್ಕೆ ಕಾರಣವಾಗಿದೆ. ಸಂಸದ ಡಾ.ಸಿ.ಎನ್‌. ಮಂಜುನಾಥ ಅವರು ಹಾಸನದ ಸರಣಿ ಹೃದಯಾಘಾತದ ಕಳವಳಕಾರಿ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ ದಿನವೇ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಹಾಸನದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹೃದಯಾಘಾತ : ಮತ್ತೆ ಮೂವರು ಬಲಿ Read More »

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ

ತ್ಯಾಜ್ಯದ ಲಾರಿಯಲ್ಲಿ ಶವ ಎಸೆದು ಹೋಗಿದ್ದ ಕೊಲೆ ಪಾತಕಿ ಬೆಂಗಳೂರು : ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಕೊನೆಗೂ ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಮಕ್ಕಳ ತಾಯಿಯ ಜೊತೆ ವಿವಾಹಿತನ ಲಿವಿಂಗ್ ಟುಗೆದರ್​​ ಕೊಲೆಯ ಹಿಂದಿನ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಬಯಲು ಮಾಡಿದ್ದಾರೆ.

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ Read More »

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಕಾರಿಗೆ ಕ್ಯಾಂಟರ್‌ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ದುರಂತ ಬೆಂಗಳೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ​ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16) ಮತ್ತು ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು. ಇವರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

ವಸತಿ ಶಾಲೆ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.ಶಮಿತಾ (15) ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಸತಿ ಶಾಲೆ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ

ಸಾಕುನಾಯಿಯನ್ನು ಕೊಂದು ಮಾಟಮಂತ್ರ ಮಾಡಿದ ಗುಮಾನಿ ಬೆಂಗಳೂರು: ನಗರದ ಮಹದೇವಪುರದ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯ ಕೊಳೆತು ನಾರುತ್ತಿದ್ದ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘ ಆಕೆಯ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿತ್ತು. ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ

ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ Read More »

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ

ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ ‌ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದು, ದಸರಾ ಆಚರಣೆಯಲ್ಲಿ ಪ್ರವಾಸಿಗರಿಗೆ ನೂಕುನುಗ್ಗಲು ಆಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ನಾಡ ಹಬ್ಬ ದಸರಾ ವೀಕ್ಷಣೆಗೆ ದೇಶ ವಿದೇಶಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪ್ರವಾಸಿಗರಿಗೆ ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ Read More »

error: Content is protected !!
Scroll to Top