ರಾಜ್ಯ

ಧರ್ಮಸ್ಥಳ ಪ್ರಕರಣ: ಹೇಳಿಕೆ ನೀಡದಂತೆ ಸಂಪುಟ ಸಹೊದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಹೇದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಅಭಿಪ್ರಾಯ ಮತ್ತು ಸಚಿವರ ಅಭಿಪ್ರಾಯದ ನಡುವೆ ವ್ಯತ್ಯಾಸವಿದೆ ಎನ್ನುವುದು ಗಮನದಲ್ಲಿ ಇರಬೇಕು. ಸರ್ಕಾರದ ನಿಲುವಿನ ಬಗ್ಗೆ ವಿಧಾನಸೌಧದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಗೃಹ ಸಚಿವ ಪರಮೇಶ್ವರ್ ಈ ಬಗ್ಗೆ ಉತ್ತರ ನೀಡಬೇಕು. ಉಳಿದ ಸಚಿವರು ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.

ಧರ್ಮಸ್ಥಳ ಪ್ರಕರಣ: ಹೇಳಿಕೆ ನೀಡದಂತೆ ಸಂಪುಟ ಸಹೊದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ Read More »

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ

ಬೆಂಗಳೂರು: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ‌ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ‌. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ AI ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ Read More »

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ?

ನವದೆಹಲಿ: ಸೆ. 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್‌ನ ‌ಮಾಜಿ ಜಡ್ಜ್ ಜಸ್ಟೀಸ್ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಎನ್.ಡಿ.ಎ. ಯು ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷ, ಮಹಾರಾಷ್ಟ್ರ ಗವರ್ನರ್ ಸಿ.ಪಿ.‌ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ವಿಪಕ್ಷಗಳು ‌ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದಾಗಿದೆ. ಆಗಸ್ಟ್ 21 ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ ಬಳಿಕ ನಾಮ ಪತ್ರ ಪರಿಶೀಲನೆ,

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ? Read More »

ಕರಾವಳಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಸರ್ಕಾರದ ನಿರ್ಲಕ್ಷ್ಯ – ವಿಧಾನ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ಬೆಂಗಳೂರು: ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ತಮ್ಮ ಚುಕ್ಕಿ ಗುರುತಿನ ಪ್ರಶ್ನೆಯಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಗೃಹ ಸಚಿವರಿಗೆ ಪ್ರಶ್ನೆ ಕೇಳಿದರು. ಕರಾವಳಿಯಲ್ಲಿ ನಡೆಯುತ್ತಿರುವ ಕೋಮು ಅಶಾಂತಿ ಪ್ರಕರಣಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೋರಿಸುತ್ತಿರುವ ನಿರ್ಲಕ್ಷ್ಯವನ್ನು ಅವರು ತೀವ್ರವಾಗಿ ಟೀಕಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕರಾವಳಿಯಲ್ಲಿ ಕೋಮು ಸೌಹಾರ್ದತೆ ಬೇಕು ಎನ್ನುವ ಆಸಕ್ತಿ ಏಕಿಲ್ಲ ಎನ್ನುವುದು ವಿಪರ್ಯಾಸವಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ತಾರು ಜನರು ಸುತ್ತುವರಿದು

ಕರಾವಳಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಸರ್ಕಾರದ ನಿರ್ಲಕ್ಷ್ಯ – ವಿಧಾನ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ Read More »

ಸುಜಾತ ಭಟ್‌ ತೋರಿಸಿದ ಫೋಟೊ ಅನನ್ಯಾಳದ್ದಲ್ಲ, ವಾಸಂತಿ ಎಂಬ ಮಹಿಳೆಯದ್ದು!

ಒಂದೇ ದಿನದಲ್ಲಿ ಬಹಿರಂಗವಾಯಿತು ಫೋಟೊ ಅಸಲಿಯತ್ತು ಬೆಂಗಳೂರು: ಧರ್ಮಸ್ಥಳ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಿದೆ. ನಿನ್ನೆ ಸುಜಾತ ಭಟ್‌ ಎಂಬ ವೃದ್ಧೆ ಧರ್ಮಸ್ಥಳದಲ್ಲಿ 40 ವರ್ಷದ ಹಿಂದೆ ನಾಪತ್ತೆಯಾಗಿರುವ ತನ್ನ ಪುತ್ರಿ ಅನನ್ಯಾ ಭಟ್‌ ಇವಳೇ ಎಂದು ಹೇಳಿ ತೋರಿಸಿದ್ದ ಕಲರ್‌ ಫೋಟ್‌ ಯಾರದ್ದು ಎನ್ನುವುದನ್ನು ಸುದ್ದಿವಾಹಿನಿಯೊಂದು ಪತ್ತೆ ಹಚ್ಚಿ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಆರೋಪಕ್ಕೆ ಇನ್ನೊಂದು ಪುರಾವೆ ಒದಗಿಸಿದೆ. 2007ರಲ್ಲಿ ಸಾವಿಗೀಡಾಗಿರುವ ಕೊಡಗು ಮೂಲದ ವಾಸಂತಿ ಎಂಬ ಯುವತಿಯ ಕಾಲೇಜು ದಿನಗಳ

ಸುಜಾತ ಭಟ್‌ ತೋರಿಸಿದ ಫೋಟೊ ಅನನ್ಯಾಳದ್ದಲ್ಲ, ವಾಸಂತಿ ಎಂಬ ಮಹಿಳೆಯದ್ದು! Read More »

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ

ಸುಳ್ಳು ಸುದ್ದಿ, ಭಾವನೆಗಳನ್ನು ಕೆರಳಿಸುವ ವೀಡಿಯೊ ಮಾಡದಂತೆ ಯೂಟ್ಯೂಬರ್‌ಗಳಿಗೆ ಖಡಕ್‌ ಎಚ್ಚರಿಕೆ ಮಂಗಳೂರು: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ದೂರುದಾರ ಮುಸುಕುಧಾರಿ ವ್ಯಕ್ತಿ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೆ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ Read More »

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ

ಎರಡು ವರ್ಷದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26 ಏರಿಕೆ ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ ಸರ್ಕಾರವೇ ತಿಳಿಸಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022ರಲ್ಲಿ 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024ರ ವೇಳೆಗೆ 4,064ಕ್ಕೆ ಏರಿಕೆಯಾಗಿದೆ. 2025ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ,

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ Read More »

ಧರ್ಮಸ್ಥಳ ಪ್ರಕರಣ : ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್​ಐಟಿ ನೋಟಿಸ್

ಸೋಷಿಯಲ್‌ ಮೀಡಿಯಾ ವಿಡಿಯೋಗಳ ತೀವ್ರ ಪರಿಶೀಲನೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣ ಸಂಬಂಧ ಕಳೆದ ಒಂದೂವರೆ ತಿಂಗಳಿನಿಂದ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ ಸಾವಿರಾರು ಎಲ್ಲ ವಿಡಿಯೋಗಳನ್ನು ಎಸ್​ಐಟಿ ಸಂಗ್ರಹಿಸಿ ಪರಿಶೀಲಿಸುತ್ತಿದೆ. ಸೋಶಿಯಲ್ ಮೀಡಿಯಾವನ್ನು ಸಂಪೂರ್ಣವಾಗಿ ಮಾನಿಟರ್ ಮಾಡಲಾಗುತ್ತಿದ್ದು ಎಲ್ಲರ ಮೇಲೂ ಎಸ್‌ಐಟಿ ಕಣ್ಣಿಟ್ಟಿದೆ. ಧರ್ಮಸ್ಥಳ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್​ಐಟಿ ನೋಟಿಸ್ ನೀಡಲು ಆರಂಭಿಸಿದೆ. ಈ ಸಂಬಂಧ ವಿಶೇಷ ತಂಡ ರಚಿಸಿರುವ ಎಸ್​​ಐಟಿ, ತನಿಖೆ ಕುರಿತು ಬಾಯಿಗೆ ಬಂದಂತೆ ಮಾತನಾಡಿದವರ ಪಟ್ಟಿ

ಧರ್ಮಸ್ಥಳ ಪ್ರಕರಣ : ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್​ಐಟಿ ನೋಟಿಸ್ Read More »

ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆ : ಆರ್‌. ಅಶೋಕ್‌ ಆಗ್ರಹ

ಟಿಪ್ಪು ಗ್ಯಾಂಗ್ ಒತ್ತಡಕ್ಕೆ ಮಣಿದು ಎಸ್‌ಐಟಿ ರಚನೆ ಎಂದು ಆರೋಪ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಿಲ್ಲಿಸದೆ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವಂತೆ ವಿಧಾನಸಭೆ ವಿರೋಧ ಪಕ್ಷಧ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಧರ್ಮಸ್ಥಳದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಟಿಪ್ಪು ಗ್ಯಾಂಗ್ ಒತ್ತಡ ಹಾಕಿ ಯಾವನೋ ದೂರು ಕೊಟ್ಟಿದ್ದನ್ನು ಇಟ್ಟುಕೊಂಡು ದೊಡ್ಡದಾಗಿ ಬಿಂಬಿಸುತ್ತಿದೆ. ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಆಗಿದೆ ಎನ್ನುವಂತೆ ಮಾಡಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಷಡ್ಯಂತ್ರ ಮಾಡುತ್ತಿದೆ. ಒಂದೊಮ್ಮೆ ಮಸೀದಿಯಲ್ಲಿ

ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆ : ಆರ್‌. ಅಶೋಕ್‌ ಆಗ್ರಹ Read More »

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದ ಅತಿಥಿ ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎ‌ಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ. ಇದು ರಾಷ್ಟ್ರಪತಿಗಳು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು 2022ರ ಸೆಪ್ಟೆಂಬರ್ 26 ರಂದು ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದರು.

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ Read More »

error: Content is protected !!
Scroll to Top