ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ | ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಂಭವ | ಹವಾಮಾನ ಇಲಾಖೆ ವರದಿ
ಪುತ್ತೂರು: ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಸ್ಥಳೀಯರು, ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಧಿಕಾರಿಯವರು ಪ್ರಕಟಣೆ ನೀಡಿದ್ದಾರೆ. ಮಕ್ಕಳು, ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡದ ಕೆಳಗೆ, ಬಳಿ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ಸೇರಬೇಕು […]