ಉಡುಪಿ

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ

ಉಡುಪಿ: ಏಪ್ರಿಲ್‍ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟ‌ರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ Read More »

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಣಿಪಾಲದ ಡಬ್ಲ್ಯೂಜಿಎಸ್‍ ಎಚ್‍ ಎ ಕಾಲೇಜು ಬಳಿ ನಡೆದಿದಿದೆ. ಪರ್ಕಳದ ಹೇರ್ಗಾ ನಿವಾಸಿ ವಸಂತಿ (51)  ಸುಮಾರು 45 ಗ್ರಾಂ ತೂಕದ, ಅಂದಾಜು 3,50,000 ರೂ. ಮೌಲ್ಯದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಮಣಿಪಾಲದ ಖಾಸಗಿ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವಸಂತಿ ಅವರು ಸಂಜೆ 5:30 ರ ಸುಮಾರಿಗೆ ತಮ್ಮ ಕರ್ತವ್ಯ ಮುಗಿಸಿ

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ Read More »

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ

ಬ್ರಹ್ಮಾವರ: ಬ್ರಹ್ಮಾವರ ಮಾರ್ಕೆಟ್ ಬಳಿಯಲ್ಲಿರುವ ಎಸ್.ಎಲ್.ಆರ್.ಎಮ್ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ  ಸುಮಾರು 1 ಗಂಟೆ ಹೊತ್ತಿಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಪ್ರಯತ್ನದ ನಡುವೆಯೂ ಘಟಕ ಸಂಪೂರ್ಣ ಹೊತ್ತಿಕೊಂಡಿದೆ. ಘಟಕದ ಒಳಗೆ ನಿಲ್ಲಿಸಿದ ಮೂರು ಎಎಸ್ ಗಾಡಿಗಳು, ಒಂದು ಪಿಕಪ್, ಲಕ್ಷಾಂತರ ಮೌಲ್ಯದ ಕಸ, ಎರಡು ಬೇಲಿಂಗ್ ಮೆಶಿನ್, ಒಂದು ಬರ್ನಿಂಗ್ ಮೆಶಿನ್ , 6

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ Read More »

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ

ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿಗೂ ಅತ್ಯಾಧುನಿಕ ಕೋಚ್‌ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ Read More »

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ

ಬಂಡೆಗೆ ಬಡಿದು ಮುಳುಗಿ 50 ಲ.ರೂ. ನಷ್ಟ ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ದೋಣಿಯೊಂದು ಕಾರವಾರ ಸಮೀಪ ಅವಘಡಕ್ಕೀಡಾಗಿ ಮುಳುಗಿದೆ. ದೋಣಿಯಲ್ಲಿದ್ದ ಆರು ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿ ದಡಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ. ಭಟ್ಕಳದ ಬಂದರು ಬಳಿ ಬೋಟ್ ಕಲ್ಲಿಗೆ ತಾಗಿ ಮುಳುಗಡೆಯಾಗಿದೆ ಎನ್ನಲಾಗಿದೆ. ಉಡುಪಿ ಸಮೀಪದ ಬ್ರಹ್ಮಾವರದ ಸುರೇಶ್ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು, ಕುಮಟಾ ಭಾಗದಲ್ಲಿ ಮೀನುಗಾರಿಕೆ ನಡೆಸಿ ಭಟ್ಕಳ ಬಂದರಿಗೆ ಬರುವಾಗ ಅವಘಡ ಸಂಭವಿಸಿದೆ. ಮೀನು ಇಳಿಸಲು ಬರುತ್ತಿದ್ದಾಗ ಭಟ್ಕಳ ಬಂದರು ಭಾಗದ

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ Read More »

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ

ಡಿಜಿಟಲ್‌ ಅರೆಸ್ಟ್‌ ಮಾಡಿರುವುದಾಗಿ ಹೇಳಿ ಹಣ ಲಪಟಾಯಿಸಿದ್ದ ಖದೀಮ ಉಡುಪಿ : ಉಡುಪಿಯ ಉದ್ಯಮಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89‌ ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ 7 ಲಕ್ಷ ರೂ. ನಗದು ಮತ್ತು ಮೊಬೈಲ್‌ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರಿಗೆ ಸೆ.11ರಂದು ಕರೆ ಮಾಡಿ ಅಕ್ರಮ ಜಾಹೀರಾತು, ಸಂದೇಶ ಕಳುಹಿಸಿರುವುದಕ್ಕೆ

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ Read More »

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ

ಒಂದೂವರೆ ದಶಕದಿಂದ ಆಂಧ್ರದಲ್ಲಿರುವ ನಕ್ಸಲ್‌ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗತಿಗೆ ಸಿದ್ಧತೆ ಉಡುಪಿ : ಕಳೆದ ಸುಮಾರು ಎರಡು ದಶಕದಿಂದ ನಕ್ಸಲ್‌ ಚಟುವಟಿಕೆಯಿಂದ ದೂರವಾಗಿ ನಾಗರಿಕ ಜೀವನ ನಡೆಸುತ್ತಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಪೊಲೀಸರಿಗೆ ಶರಣಾಗಲಿದ್ದಾಳೆ. ಮೋಸ್ಟ್ ವಾಂಟೆಡ್ ಆರು ನಕ್ಸಲರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾಳೆ ಎಂದು ಮೂಲಗಳು

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ Read More »

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ

ಸೇಲ್ಸ್‌ಮ್ಯಾನ್‌ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ ಉಡುಪಿ : ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಅಂಗಳದಲ್ಲಿದ್ದ ಕರುವಿನ ಬಾಲ ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಬುಧವಾರ ಸಂಭವಿಸಿದೆ. ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಕೆಲವು ಘಟನೆಗಳು ನಡೆದಿದ್ದು, ಇದು ಇದೇ ಮಾದರಿಯ ಇನ್ನೊಂದು ಘಟನೆ ಎಂದು ಹಿಂದು ಸಂಘಟನೆಗಳು ಆಕ್ರೋಶ ವ್ದಯಕ್ತಪಡಿಸಿವೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ Read More »

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು Read More »

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ

ಆರೋಪಿಯನ್ನು ಶೀಘ್ರ ಬಂಧಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ ಉಡುಪಿ: ಉಡುಪಿ ನಗರದಲ್ಲಿ ಹಾಡಹಗಲೇ ಯುವಕನೊಬ್ಬ ಐದು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಯನ್ನು ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚಿಸಿದ್ದಾರೆ. ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪದ ಓಣಿಯಲ್ಲಿ ಸುಮಾರು 30 ವರ್ಷದ ಯುವಕ ಗುರುವಾರ ಮಧ್ಯಾಹ್ನ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯ

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ Read More »

error: Content is protected !!
Scroll to Top