ವಿದ್ಯಾರ್ಥಿನಿ ನಯನಾ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಪಿಯುಸಿ ವಿದ್ಯಾರ್ಥಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿಡಿಯಡ್ಕದಲ್ಲಿ ನಡೆದಿದೆ. ಹಿರಿಯಡ್ಕ ನಿವಾಸಿ ನಯನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪೆರ್ಡೂರು ಪ್ರಥಮದ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ನಯನಾ ಮನೆಯಲ್ಲಿ ಒಬ್ಬಳೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಕೆಯ ತಾಯಿ ಶೋಭಾ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ೀ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿ ನಯನಾ ನೇಣು ಬಿಗಿದು ಆತ್ಮಹತ್ಯೆ Read More »