ಉಡುಪಿ

ಮಹಿಳೆಗೆ ಕಿರುಕುಳ : ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ಕೇಸ್‌

ಉಡುಪಿ: ರಾಷ್ಟ್ರೀಯಕೃತ ಬ್ಯಾಂಕ್ ಒಂದರ ಆದಿ ಉಡುಪಿ ಶಾಖೆಯ ಮ್ಯಾನೇಜರ್ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮ್ಯಾನೇಜರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಜ್ಯೋತಿ ಎಂಬ ಮಹಿಳೆ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 19ರಂದು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 74ರ ಅಡಿಯಲ್ಲಿ ಕೇಸ್‌ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಫೆ.7ರಂದು ಸಂಜೆ ಸುಮಾರು 5.30ಕ್ಕೆ ನಡೆದಿದೆ. ಸಾಲದ ವಿಷಯದ ಬಗ್ಗೆ ಚರ್ಚಿಸಬೇಕೆಂದು ಹೇಳಿ ಮ್ಯಾನೇಜರ್ ತಮ್ಮನ್ನು […]

ಮಹಿಳೆಗೆ ಕಿರುಕುಳ : ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ಕೇಸ್‌ Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ

ಉಡುಪಿ: ಸರಕು ಸಾಗಿಸುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ಗುರುವಾರ ತಡರಾತಿ ಬೈಂದೂರು ಸಮೀಪ ಸಂಭವಿಸಿದೆ. ಗುರುವಾರ ಮಧ್ಯರಾತ್ರಿ ಸುಮಾರಿಗೆ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66 ಸೇತುವೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಧಾರವಾಡದಿಂದ ಕುಂದಾಪುರಕ್ಕೆ ಪಶು ಆಹಾರವನ್ನು ಸಾಗಿಸುತ್ತಿದ್ದ ಲಾರಿ ಇದಾಗಿದ್ದು ರಾತ್ರಿ 1 ಗಂಟೆ ಸುಮಾರಿಗೆ ಯಡ್ತರೆ ಬೈಪಾಸ್‌ನಿಂದ ಮುಂದಕ್ಕೆ ಸಾಗಿ ಬಿಜೂರು ಬಳಿ ಆಗಮಿಸುವಾಗ ಹಿಂಬದಿಯ ಟಯರ್ ಸ್ಫೋಟಗೊಂಡು ಲಾರಿಗೆ ಬೆಂಕಿ ತಗುಲಿದೆ. ಭಾಗಶಃ ಲಾರಿ ಸಹಿತ ಒಳಗಿದ್ದ ಪಶು ಆಹಾರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ Read More »

ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ

ಕೇರಳದ ವಯನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದ ಪೊಲೀಸರು ಉಡುಪಿ: ನೌಕಾ ನೆಲೆಯ ರಹಸ್ಯ ಮಾಹಿತಿಗಳನ್ನು ವಿದೇಶಕ್ಕಡ ರವಾನಿಸಿದ ಇನ್ನೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಕೇರಳದ ವಯನಾಡಿನಲ್ಲಿ ಬಂಧಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ರವಾನಿಸಿದ ಪ್ರಕರಣದಲ್ಲಿ ಸೆರೆಯಾಗಿರುವ ಐದನೇ ಆರೋಪಿ ಈತ. ಬಂಧಿತ ಆರೋಪಿಯನ್ನು ದಿ.ಇಜಾಜುಲ್ ಇಸ್ಲಾಂ ಎಂಬವರ ಪುತ್ರ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ. ಮೂಲತಃ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಬರ್ಗರಿಯಾ ಗ್ರಾಮದ ನಿವಾಸಿಯಾಗಿದ್ದ ಈತ ಪ್ರಸ್ತುತ

ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ Read More »

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು

ಹೆದ್ದಾರಿ ಬಿಟ್ಟು ಒಳ ರಸ್ತೆಗಳಲ್ಲಿ ಹೋಗಿ ಅಪಘಾತ ಉಡುಪಿ: ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಘಟನೆ ಶುಕ್ರವಾರ ರಾತ್ರಿ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ಸಂಭವಿಸಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ ತೋರಿದ ಡೈವರ್ಶನ್‌ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು Read More »

ಅಂದರ್‌ ಬಾಹರ್‌ ಜುಗಾರಿ : 11 ಮಂದಿ ಸೆರೆ

ಮನೆಯನ್ನೇ ಜುಗಾರಿ ಅಡ್ಡೆ ಮಾಡಿಕೊಂಡು ಆಟ ಕಾರ್ಕಳ : ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಇಸ್ಪೀಟ್ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿ ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಉಮ್ಮರ ಫಾರೂಕ್ (62), ಅಬ್ದುಲ್ ಅಜೀಜ್ (40), ಸತೀಶ ಎಸ್. ಪ್ರಭು (49), ಅಬ್ದುಲ್ ರಹಿಮಾನ್ (49), ಸಮೀರ್ (46), ಸುಲೇಮಾನ್ (45), ಇರ್ಫಾನ್ (26) ಹಾಗೂ ಚೇತಕ್ (38) ಬಂಧಿತ ಆರೋಪಿಗಳು. ಅಶೋಕ ಎಂಬುವರಿಗೆ

ಅಂದರ್‌ ಬಾಹರ್‌ ಜುಗಾರಿ : 11 ಮಂದಿ ಸೆರೆ Read More »

ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು

ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆತ್ನಿಸಿದಾಗ ಬೇರ್ಪಟ್ಟ ರುಂಡ ಉಡುಪಿ : ನಿವೃತ್ತಿಯ ಅಂಚಿನಲ್ಲಿ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆಯೇ ಅವರ ರುಂಡ ಬೇರ್ಪಟ್ಟು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಅಂಬಾಗಿಲು ವಾರ್ಡ್‌ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು

ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು Read More »

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೆ ಸುದೀರ್ಘ ಕಾಲ ಬಸ್ರೂರಿನ ಶ್ರೀ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ Read More »

ಪ್ರಚೋದನಕಾರಿ ಪೋಸ್ಟ್‌ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ

ಕಳೆದ ವರ್ಷ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಪೋಸ್ಟ್‌ ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಂಟ್ವಾಳ ಮತ್ತು ಕಡಬದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆ ನಿವಾಸಿ ನಿತೇಶ್ ಕೆ. (20) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ನಿವಾಸಿ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿ ನಿತೇಶ್‌ನನ್ನು ಜನವರಿ 30ರಂದು ಪುತ್ತೂರು ತಾಲೂಕಿನ ಕಲಾಬ

ಪ್ರಚೋದನಕಾರಿ ಪೋಸ್ಟ್‌ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ Read More »

ಉಡುಪಿ ಮೂಲದ ಯುವಕನಿಗೆ ಒಲಿದ 45 ಕೋ. ರೂ. ಲಾಟರಿ

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಯುವಕ ಅಬುಧಾಬಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ‘ಸರಣಿ 283’ರ ಈ ಬೃಹತ್ ಮೊತ್ತ ಒಲಿದಿದೆ. ಇದು

ಉಡುಪಿ ಮೂಲದ ಯುವಕನಿಗೆ ಒಲಿದ 45 ಕೋ. ರೂ. ಲಾಟರಿ Read More »

ಗ್ರಾಹಕನ ಸೋಗಿನಲ್ಲಿ ಚಿನ್ನ ಕದ್ದವ ಸೆರೆ

ಬಂಟ್ವಾಳ : ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯ ಚಿನ್ನದ ಅಂಗಡಿಯೊಂದರಿಂದ ಒಂದು ವಾರದ ಹಿಂದೆ ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ಗ್ರಾಮದ ನಿವಾಸಿ ರಮೇಶ್ (42) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 1.25 ಲಕ್ಷ ರೂಪಾಯಿ ಮೌಲ್ಯದ 9 ಗ್ರಾಂ ತೂಕದ ಚಿನ್ನದ ಸರ ಮತ್ತು 33,000 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗ್ರಾಹಕನ ಸೋಗಿನಲ್ಲಿ ಚಿನ್ನ ಕದ್ದವ ಸೆರೆ Read More »

error: Content is protected !!
Scroll to Top