ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.20) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.
ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »