ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ
ಉಡುಪಿ : ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಷ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ. ಉದ್ಯಮಿ ಶ್ರೇಯಸ್ ನಾಯ್ಕ (25) ಅರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ […]