ಉಡುಪಿ

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್ […]

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್ Read More »

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್ Read More »

ಒಂದೇ ಕುಟುಂಬದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಹತ್ಯೆಯಾದವರನ್ನು ಹಸೀನಾ (46), ಮಕ್ಕಳಾದ ಅಫ್ನಾನ್ (23), ಆಯ್ಣಾಝ್ (21)  ಹಾಗೂ ಅಸೀಮ್ (14) ಎಂದು ತಿಳಿದು ಬಂದಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಅಪರಿಚಿತ ವ್ಯಕ್ತಿಗಳು ಮಾಸ್ಕ್   ಧರಿಸಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್‍ ಪಿ ಸ್ಥಳಕ್ಕೆ ಆಗಮಿಸಿ

ಒಂದೇ ಕುಟುಂಬದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

ಉಡುಪಿ: ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪದಲ್ಲಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ. 15 ವರ್ಷಗಳ ಹಿಂದೆ ನಡೆದ ಈ ಪ್ರಕರಣದಲ್ಲಿ ಸಿಒಡಿ ಪರ ವಿಶೇಷ ಸರಕಾರಿ ಅಭಿಯೋಜಕರಾಗಿ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಪುತ್ತೂರಿನ ಕೆ.ಶಿವಪ್ರಸಾದ್ ಆಳ್ವ ಅವರು ವಾದ ಮಂಡನೆ ಮಾಡಿ

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ Read More »

ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು

ಕಾರ್ಕಳ : ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯೋರ್ವಳು ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾದ ವಿದ್ಯಾರ್ಥಿನಿ. ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿರುತ್ತಾಳೆ. ಆದರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ದೂರಿನಂತೆ

ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು Read More »

ಫ್ಲ್ಯಾಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಉಡುಪಿ: ಬಾಲಕಿಯೊಬ್ಬಳು ಫ್ಲ್ಯಾಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಫ್ಲ್ಯಾಟ್ ಒಂದರಲ್ಲಿ ನಡೆದಿದೆ. ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮಣಿಪಾಲದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ, ಬಾಲಕಿ ಇತ್ತೀಚಿನ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ. ಫ್ಲ್ಯಾಟ್ ಒಂದರ ಎಂಟನೇ ಮಹಹಡಿಯಿಂದ ಜಿಗಿದ ಬಾಲಕಿ ನೆಲಕ್ಕೆ ಅಪ್ಪಳಿಸಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಪೋಷಕರು ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಫ್ಲ್ಯಾಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ Read More »

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠದ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಗಳು ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ ತುಲಾಭಾರ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿ ಬಿದ್ದಿದ್ದು, ತಲೆಗೆ ತರಚಿದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಗಾಯಗಳಾಗಿಲ್ಲ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು Read More »

ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ

ಕಾರ್ಕಳ: ತಾಲೂಕಿನ ಅಜೆಕಾರು ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ನಿಧನರಾದರು. ಶೇಖರ್ ಅಜೆಕಾರ್ ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿದ್ದು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ Read More »

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಡುಪಿ: ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ‘ಬಂಟರ ಅಭಿವೃದ್ಧಿ ನಿಗಮ’ದ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ ಸಮಾಜಕ್ಕೆ ಭರವಸೆ ನೀಡಿದ್ದಾರೆ. ನಗರದ ಅಜ್ಜರಕಾಡು ಕ್ರೀಡಾಂಗಣದ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆದ ನಾಲ್ಕನೇ ವಿಶ್ವ ಬಂಟರ ಸಮ್ಮೇಳನ-2023ನ್ನು ದೀಪ ಪ್ರಜ್ವಲನಗೊಳಿಸಿ, ಹಿಂಗಾರ ಅರಳಿಸಿ, ತೆಂಗಿನ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಬಂಟ ಸಮಾಜದ ಅಭಿವೃದ್ಧಿಗಾಗಿ ಕಳೆದ ನಮ್ಮಚುನಾವಣಾ ಪ್ರಣಾಳಿಕೆ ಯಲ್ಲೇ ಬಂಟರ ಅಭಿವೃದ್ಧಿ

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

error: Content is protected !!
Scroll to Top