Uncategorized

ಶತಮಾನ ಕಂಡ RSS: ಪ್ರಧಾನಿ ಮೋದಿ ಹರ್ಷ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಅವರು 100 ವರ್ಷಗಳ ಸೇವೆಯನ್ನು ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಶ್ಲಾಘಿಸಿದ್ದಾರೆ. ಶತಮಾನಗಳ ಇತಿಹಾಸ ಹೊಂದಿದ RSS ದೇಶ ಕಟ್ಟುವಲ್ಲಿ ಸಲ್ಲಿಸಿದ ಸೇವೆ ಅಪಾರವಾದುದು ಎಂದು ತಿಳಿಸಿದ್ದಾರೆ. ಈ ಸ್ವಾತಂತ್ರ್ಯ ಸಂಭ್ರಮದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಉಲ್ಲೇಖಿಸಲು ನಾನು ಹೆಮ್ಮೆ ಪಡುತ್ತೇನೆ. ನೂರು ವರ್ಷಗಳಿಂದ ಸಲ್ಲಿಸುತ್ತಿರುವುದು ಹೆಮ್ಮೆಯ ಮತ್ತು ಸುವರ್ಣ ಅಧ್ಯಾಯವಾಗಿದೆ. ವ್ಯಕ್ತಿ‌ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎಂಬ ಸಂಕಲ್ಪ ಮತ್ತು ಭಾರತದ ಕಲ್ಯಾಣ ಗುರಿಗಳ ಜೊತೆಗೆ […]

ಶತಮಾನ ಕಂಡ RSS: ಪ್ರಧಾನಿ ಮೋದಿ ಹರ್ಷ Read More »

ರಾಷ್ಟ್ರಪತಿ ಮುರ್ಮು ಅವರಿಂದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ‌ಗೌರವಾರ್ಪಣೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಧೈರ್ಯಶಾಲಿಗಳಿಗೆ ಗೌರವ ಸಲ್ಲಿಸಿ, ಭಾರತದ ಸಶಸ್ತ್ರ ಸಂಘರ್ಷಗಳಲ್ಲಿ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವಾರ್ಪಣೆ ಮಾಡಿದರು. ಈ‌ಸಂದರ್ಭದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್‌ ಚೌಹಾಣ್‌, ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ರಾಷ್ಚ್ರಪತಿಗಳ ಜೊತೆಗಿದ್ದರು. ವಾಯುಪಡೆಯ ಇಬ್ಬರು ಮಹಿಳಾ ಅಧಿಕಾರಿಗಳು ಮಾಲಾರ್ಪಣೆ ಮಾಡಿದರು. ರಕ್ಷಣಾ

ರಾಷ್ಟ್ರಪತಿ ಮುರ್ಮು ಅವರಿಂದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ‌ಗೌರವಾರ್ಪಣೆ Read More »

ನನ್ನ ರಾಜೀನಾಮೆಗೆ ಮೂವರು ಪಿತೂರಿ ಮಾಡಿದ್ದಾರೆ: ಕೆ. ಎನ್.‌ರಾಜಣ್ಣ

ಬೆಂಗಳೂರು: ನಾನು ರಾಜೀನಾಮೆ ನೀಡುವಂತಾಗಲು ದೆಹಲಿಯಲ್ಲಿ ಮೂರು ಜನರು ಪಿತೂರಿ ನಡೆಸಿದ್ದಾರೆ ಎಂದು ಶಾಸಕ ಕೆ. ಎನ್. ರಾಜಣ್ಣ ಹೇಳಿದ್ದಾರೆ. ಮುಖ್ಯಮಂತ್ರಿಗಳಿಗೆ ‌ನನ್ನ ಸಚಿವ ಸ್ಥಾನ ಹೋಗುವುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರಲಿಲ್ಲ. ಆದರೆ ಮೂವರು ಸೇರಿ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ. ಹೈಕಮಾಂಡ್ ಮನವೊಲಿಸಲು ಸಿಎಂ ‌ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆ. ಸಿದ್ದರಾಮಯ್ಯ ವಿಧಾನಸೌಧದಲ್ಲಿ ಇರುವಾಗ ರಾಹುಲ್ ಗಾಂಧಿ ಕರೆ ಮಾಡಿದ್ದರು. ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇದು ಹೇಳಿಕೆ ಅಲ್ಲ, ಸತ್ಯ ವಿಷಯ ಎಂದು

ನನ್ನ ರಾಜೀನಾಮೆಗೆ ಮೂವರು ಪಿತೂರಿ ಮಾಡಿದ್ದಾರೆ: ಕೆ. ಎನ್.‌ರಾಜಣ್ಣ Read More »

ಪ್ರಧಾನಿ ಮೋದಿ ಅವರ ಭಾಷಣವನ್ನು ಕೊಂಡಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಪ್ರಧಾನಿ ಮೋದಿ ಅವರ ಸ್ವಾತಂತ್ರ್ಯ ದಿನದ ಭಾಷಣವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಅತ್ಯುತ್ತಮ ಮತ್ತು ಸ್ಪೂರ್ತಿದಾಯಕ ಎಂದು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಭಾಷಣ ರಾಷ್ಟ್ರೀಯ ಪ್ರಗತಿ, ಭದ್ರತಾ ಯೋಜನೆಗಳು ಮತ್ತು ವೀಕ್ಷಿತ್ ಭಾರತ್ ಸಾಧಿಸಲು ಮಾರ್ಗಗಳನ್ನು ಎತ್ತಿ ತೋರಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಿಂದ ಮಾಡಿದ ಭಾಷಣ ಅತ್ಯುತ್ತಮ ಮತ್ತು ಸ್ಪೂರ್ತಿದಾಯಕ. ಈ ಭಾಷಣದಲ್ಲಿ ಹಲವಾರು ವಿಷಯಗಳ

ಪ್ರಧಾನಿ ಮೋದಿ ಅವರ ಭಾಷಣವನ್ನು ಕೊಂಡಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ Read More »

ರೈತರ ಹಿತಾಸಕ್ತಿ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತವನ್ನು ಸ್ವಾವಲಂಬಿಯಾಗಿ ಮಾಡಿದ ರೈತರ ಹಿತಾಸಕ್ತಿಯ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಮೆರಿಕಾ ಅಧ್ಯಕ್ಷ ಡ್ರೊನಾಲ್ಡ್ ಟ್ರಂಪ್ ಅವರಿಗೆ ಇದು ನನ್ನ ನೇರ ಸಂದೇಶ ಎಂದು ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಪ್ರತಿಯೊಬ್ಬರಿಗೂ ಆಹಾರ ಒದಗಿಸುವುದು ಸವಾಲಿನ ಕೆಲಸವಾಗಿತ್ತು. ಆ ಸಂದರ್ಭದಲ್ಲಿ ದೇಶಕ್ಕೆ ಆಹಾರ ಒದಗಿಸುವ ಕೆಲಸ ಮಾಡಿದ್ದು ರೈತರು. ಅವರು ನಮ್ಮನ್ನು ಸ್ವಾವಲಂಬಿಯನ್ನಾಗಿ ಮಾಡಿದ್ದಾರೆ‌‌. ಹಾಗಾಗಿ ನನ್ನ ನಿರ್ಧಾರ ಅಚಲವಾಗಿದ್ದು,

ರೈತರ ಹಿತಾಸಕ್ತಿ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ Read More »

ಕೆಂಪು ಕೋಟೆಯ ಸ್ವಾತಂತ್ರ್ಯ ದಿನಕ್ಕೆ ರಾಹುಲ್, ಖರ್ಗೆ ಗೈರು

ನವದೆಹಲಿ: ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಗೆ ವಿಪಕ್ಷ ‌ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ. ಗೈರು ‌ಹಾಜರಿಯ ಬಗ್ಗೆ ಈ ಇಬ್ಬರು ನಾಯಕರು ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಕಳೆದ ವರ್ಷದ ಆಸನ ವ್ಯವಸ್ಥೆಯ ಅಸಮಾಧಾನದಿಂದ ಈ ಬಾರಿ ಗೈರಾಗಿರಬಹುದು ಎಂದು ಹೇಳಲಾಗುತ್ತಿದೆ. ಖರ್ಗೆ ‌ಮತ್ತು ರಾಹುಲ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ‌ದೇಶದ ಜನರಿಗೆ ಶುಭಾಶಯ ಕೋರಿ ಪೋಸ್ಟ್ ಮಾಡಿದ್ದಾರೆ. ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ

ಕೆಂಪು ಕೋಟೆಯ ಸ್ವಾತಂತ್ರ್ಯ ದಿನಕ್ಕೆ ರಾಹುಲ್, ಖರ್ಗೆ ಗೈರು Read More »

ರಾಹುಲ್ ಗಾಂಧಿ ವಿರುದ್ಧ ಚು. ಆಯೋಗ ಗರಂ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಮತಗಳ್ಳತನ, ಚುನಾವಣಾ ಅಕ್ರಮ ನಡೆದಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಯೋಗ ಆಕ್ರೋಶ‌ ವ್ಯಕ್ತಪಡಿಸಿದೆ. ವೋಟ್ ‌ಚೋರಿ ಮೊದಲಾದ ಕೊಳಕು ಭಾಷೆಗಳನ್ನು ಬಳಕೆ ಮಾಡುವುದಲ್ಲ. ಸುಳ್ಳು ನಿರೂಪಣೆಗಳನ್ನು ಮಾಡುವ ಬದಲು ಅದಕ್ಕೆ ಪೂರಕ ದಾಖಲೆ ಒದಗಿಸುವಂತೆ ಹೇಳಿದೆ. ಒಬ್ಬ ವ್ಯಕ್ತಿಗೆ ಒಂದು ಮತ ಎನ್ನುವ ಕಾನೂನು ಬಹಳ ಹಿಂದಿನಿಂದಲೇ ಚಾಲ್ತಿಯಲ್ಲಿದೆ. ಯಾವ ಸಾಕ್ಷ್ಯವೂ ಇಲ್ಲದ ಭಾರತದ ಮತದಾರರನ್ನು ಕಳ್ಳರು ಎಂದು ಹೇಳುವುದಲ್ಲ.

ರಾಹುಲ್ ಗಾಂಧಿ ವಿರುದ್ಧ ಚು. ಆಯೋಗ ಗರಂ Read More »

ಬಿಎಸ್‌ಎಫ್‌ನ 16 ಯೋಧರಿಗೆ ಶೌರ್ಯ ಪ್ರಶಸ್ತಿ

ನವದೆಹಲಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಅಸಾಧಾರಣ ಶೌರ್ಯ ಮೆರೆದ 16 ಮಂದಿ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿ ಘೋಷಿಸಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅಚಲ ಪರಾಕ್ರಮ ತೋರಿದ ಸಾಹಸಿ ಬಿಎಸ್‌ಎಫ್ ಯೋಧರಿಗೆ ಶೌರ್ಯ ಪ್ರಶಸ್ತಿ ಘೋಷಿಸಲಾಗಿದ್ದು, ಸ್ವಾತಂತ್ರ್ಯ ದಿನದಂದು ಪುರಸ್ಕಾರ ಪ್ರಧಾನ‌ ನಡೆಯಲಿದೆ. ಈ ಸಂಬಂಧ ಬಿಎಸ್‌ಎಫ್ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದು, ಈ ಪುರಸ್ಕಾರಗಳು ಗಡಿ ಭದ್ರತಾ ಪಡೆಯ ಮೇಲೆ ದೇಶ ಇರಿಸಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು

ಬಿಎಸ್‌ಎಫ್‌ನ 16 ಯೋಧರಿಗೆ ಶೌರ್ಯ ಪ್ರಶಸ್ತಿ Read More »

ಕೋಲಾರ: ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶಕ್ಕೆ

ಕೋಲಾರ: ಮೂರು ಮಂದಿ ಮಕ್ಕಳು ಸೇರಿದಂತೆ ಒಟ್ಟು ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು ಅವರು ನೀಡಿದ ಮಾಹಿತಿಯನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿರುವುದಾಗಿದೆ. ಬೆಂಗಳೂರು ಗ್ರಾಮಾಂತರದ ನಂದಿಗುಡಿ ‌ಸಮೀಪ ನಾಲ್ಕು ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ವಶಕ್ಕೆ ಪಡೆದಿರುವುದಾಗಿದೆ.

ಕೋಲಾರ: ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶಕ್ಕೆ Read More »

ಮರದ ಗೆಲ್ಲು ಬಿದ್ದು ಲಾರಿ ಚಾಲಕ ಸಾವು

ಬಂಟ್ವಾಳ: ಮರದ ಗೆಲ್ಲು ಮೈಮೇಲೆ ಬಿದ್ದು ಲಾರಿ ಚಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪೆರಾಜೆ ಗ್ರಾಮದ ಕುಡೋಲು ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಮೃತರು ಮೂಡಬಿದ್ರೆಯ ಫೀಡ್ ತಯಾರಿಕಾ ಸಂಸ್ಥೆಯಲ್ಲಿ ಲಾರಿ ಚಾಲಕರಾಗಿದ್ದು, ಕಾಸರಗೋಡು ಕಡೆಗೆ ಫೀಡ್ ಲೋಡ್ ಮಾಡಿ ಕೊಂಡು ಹೋಗುತ್ತಿದ್ದಾಗ ಬದಿಯಡ್ಕ ಸಮೀಪದಲ್ಲಿ ಮರದ ಗೆಲ್ಲು ಇವರ ಮೇಲೆ ಬಿದ್ದಿತ್ತು. ರಸ್ತೆ ಬದಿಯಲ್ಲಿ ಬಿದ್ದಿದ್ದ ಮರದ ಗೆಲ್ಲನ್ನು ‌ಸರಿಸುವ ವೇಳೆ ಅವರ ಮೇಲೆ ಇನ್ನೊಂದು ಗೆಲ್ಲು ಬಿದ್ದು ಗಂಭೀರ ಗಾಯಗೊಂಡಿದ್ದರು.

ಮರದ ಗೆಲ್ಲು ಬಿದ್ದು ಲಾರಿ ಚಾಲಕ ಸಾವು Read More »

error: Content is protected !!
Scroll to Top