ಪಡ್ಡಾಯೂರಿನ ಅಂಬೇಡ್ಕರ್ ವಸತಿ ಶಾಲಾ ಸ್ವಂತ ಕಟ್ಟಡಕ್ಕೆ ಪ್ರಯತ್ನ | ವಸತಿ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಪಡ್ಡಾಯೂರಿನ ಅಂಬೇಡ್ಕರ್ ವಸತಿ ಶಾಲೆಗೆ ಸ್ವಂತ ಕಟ್ಟಡ ಅಗತ್ಯವಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪಡ್ಡಾಯೂರಿನಲ್ಲಿರುವ ಉಪ್ಪಿನಂಗಡಿ ಅಂಬೇಡ್ಕರ್ ವಸತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರದ ಶಿಕ್ಷಣವನ್ನು ನೀಡಬೇಕಾದ ಅಗತ್ಯವಿದೆ. ಇಲ್ಲಿನ ಶಿಕ್ಷಣ ಮತ್ತು ಇತರ ಸೌಲಭ್ಯಗಳು ಚೆನ್ನಾಗಿರುವ ಬಗ್ಗೆ ಪೋಷಕರು ತಿಳಿಸಿದ್ದಾರೆ ಎಂದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಗೆ ಅಭಿನಂದನೆ […]










