ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದರು. ಕ್ಷೇತ್ರದ ಆದಿದೈವ ದೂಮಾವತಿ ನಡೆಯಲ್ಲಿ ಪ್ರಾರ್ಥಿಸಿ, ಸತ್ಯಧರ್ಮ ಚಾವಡಿಯಲ್ಲಿ ದೇಯಿ ಬೈದೆತಿ ಸಾನಿಧ್ಯದಲ್ಲಿ ಪ್ರಸಾದ ಸ್ವೀಕರಿಸಿದರು. ಪಡುಮಲೆ ಪೂಮಾಣಿ, ಕಿನ್ನಿಮಾಣಿ, ವ್ಯಾಘ್ರ ಚಾಮುಂಡಿ ಕ್ಷೇತ್ರಕ್ಕೆ ತೆರಳಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಪಡುಮಲೆ ನಾಗ ಬೆರ್ಮೆರ್ ಗುಡಿ, ನಾಗ ಸಾನಿಧ್ಯಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಈ […]










