ಅಪಘಾತ

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ  ಮೃತ ದೇಹ ಪತ್ತೆ

ಬೆಳ್ತಂಗಡಿ :  ಧರ್ಮಸ್ಥಳ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50-55 ವರ್ಷದ ಅಪರಿಚಿತ ಗಂಡಸಿನ ಮೃತ ದೇಹ ನ.21ರಂದು ಪತ್ತೆಯಾಗಿದೆ. ನದಿಯಲ್ಲಿದ್ದ ಮೃತದೇಹವನ್ನು ಎತ್ತುವಲ್ಲಿ ಶೌರ್ಯ ವಿಪತ್ತು ತಂಡ ಸಹಕರಿಸಿದೆ. ಕಪ್ಪು ಬಣ್ಣದ ಒಳಚಡ್ಡಿ ಮಾತ್ರ ಧರಿಸಿಕೊಂಡಿದ್ದು, ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ. ಮೃತದೇಹನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಶವಗಾರದ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಪೋಲಿಸ್‍ ಠಾಣೆ: ೮೨೭೭೯೮೬೪೪೭ ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ […]

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ  ಮೃತ ದೇಹ ಪತ್ತೆ Read More »

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್

ಪುತ್ತೂರು: ಮದುವೆಗೆ ತೆರಳುತ್ತಿದ್ದ ಬಸ್ದೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಆಮ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ. ಘಟನೆಯ ಪರಿಣಾಮ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್ Read More »

ಶೇಖಮಲೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆ ಎಂಬಲ್ಲಿ ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಶೇಖಮಲೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ Read More »

ಇನೋವಾಕ್ಕೆ ಡಿಕ್ಕಿ ಹೊಡೆದ ಇನ್ಸುಲೇಟರ್ | ಇನೋವಾ ಪ್ರಯಾಣಿಕರಿಗೆ ಗಾಯ

ಉಡುಪಿ: ಇನೋವಾಕ್ಕೆ ಇನ್ಸುಲೇಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಪ್ರಯಾಣಿಕರು ಗಂಭೀರ  ಗಾಯಗೊಂಡ ಘಟನೆ ಕುಂಭಾಸಿಯಲ್ಲಿ ಇಂದು ನಡೆದಿದೆ. ಇನೋವಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲ್ಲೂರಿನಿಂದ  ಉಡುಪಿಗೆ ಹೋಗುವ ಸಂದರ್ಭ ಘಟನೆ ನಡೆದಿದ್ದು,  ಇನ್ಸುಲೇಟರ್ ಪಲ್ಟಿಯಾಗಿದ್ದು, ಇನೋವಾ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಇನೋವಾಕ್ಕೆ ಡಿಕ್ಕಿ ಹೊಡೆದ ಇನ್ಸುಲೇಟರ್ | ಇನೋವಾ ಪ್ರಯಾಣಿಕರಿಗೆ ಗಾಯ Read More »

ಕೆದಿಲ ಗ್ರಾಮದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ಭಾನುವಾರ ಸಂಜೆ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ. (14) ಸಿಡಿಲು ಬಡಿದು ಮೃತಪಟ್ಟವರು. ಈ ಕುರಿತು ಕಂದಾಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕೆದಿಲ ಗ್ರಾಮದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು Read More »

ಡಿವೈಡರ್‍ ಗೆ ಕಾರು ಡಿಕ್ಕಿ : ಪ್ರಯಾಣಿಕ ಮೃತ್ಯು

ನೆಲ್ಯಾಡಿ: ಕಾರೊಂದು ಡಿವೈಡರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಇಂದು ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ. ಮೃತಪಟ್ಟ ಕಾರು ಪ್ರಯಾಣಿಕ ಕುಂಬ್ರ ನಿವಾಸಿ ಎನ್ನಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಡಿವೈಡರ್‍ ಗೆ ಕಾರು ಡಿಕ್ಕಿ : ಪ್ರಯಾಣಿಕ ಮೃತ್ಯು Read More »

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತಪಟ್ಟವರು. ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು Read More »

ಉಚ್ಚಿಲ ರೆಸಾರ್ಟ್‍ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಮಂಗಳೂರು: ಉಚ್ಚಿಲ ಸಮುದ್ರದ ಬಳಿಕ ರೆಸಾರ್ಟ್‍ ಒಂದರ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20) ಹಾಗೂ ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತಪಟ್ಟ ಯುವತಿಯರು ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್‌ ಸ್ವಮ್ಮಿಂಗ್‌ ಫುಲ್‌ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ

ಉಚ್ಚಿಲ ರೆಸಾರ್ಟ್‍ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು Read More »

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ

ಸುಳ್ಯ : ಕೆಎಸ್‍ ಆರ್‍ ಟಿಸಿ ಬಸ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಸಹೋದರಿಯರಿಬ್ಬರು ಗಾಯಗೊಂಡು, ಒಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ತಿರುವಿನಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ Read More »

ಕೆರೆಗೆ ಬಿದ್ದು ಮೃತ್ಯು

ಪುತ್ತೂರು: ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ಇಂದು ನಡೆದಿದೆ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತಪಟ್ಟವರು. ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆರೆಗೆ ಬಿದ್ದು ಮೃತ್ಯು Read More »

error: Content is protected !!
Scroll to Top