ಅಪಘಾತ

ಬಸ್​ಗೆ ಡಿಕ್ಕಿ ಹೊಡೆದ ಲಾರಿ : 20 ಜನರು ಸಾವು

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಬಸ್​ಗೆ ಲಾರಿ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿ 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದದ್ದು ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದೆ. ಈ ಜಾಗದಲ್ಲಿ ಅತಿ ವೇಗದಲ್ಲಿ ಬಂದ ಲಾರಿ […]

ಬಸ್​ಗೆ ಡಿಕ್ಕಿ ಹೊಡೆದ ಲಾರಿ : 20 ಜನರು ಸಾವು Read More »

ಅಫಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ : ಹಲವು ಮಂದಿ ಸಾವು

6.3 ತೀವ್ರತೆಯ ಭೂಕಂಪದಿಂದ ಅನೇಕ ಕಟ್ಟಡಗಳು ಧರಾಶಾಯಿ ಕಾಬೂಲ್ : ಆಫ್ಘಾನಿಸ್ತಾನದಲ್ಲಿ ಸೋಮವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಕಟ್ಟಡಗಳು ಧರೆಗುರುಳಿವೆ. ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ನೆಲಕ್ಕುರುಳಿವೆ. ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿ ಸುಮಾರು 150 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ಸೋಮವಾರ

ಅಫಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ : ಹಲವು ಮಂದಿ ಸಾವು Read More »

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು

ಜೋಧಪುರ್ : ರಾಜಸ್ಥಾನದ ಜೋಧಪುರ್​ನಲ್ಲಿ ಭಾನುವಾರ ರಾತ್ರಿ ನಿಂತಿದ್ದ ಟ್ರಕ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೋಧಪುರ್​ನ ಫಾಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್​ಪ್ರೆಸ್​ವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್‌ನಲ್ಲಿದ್ದವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್​ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್​ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು Read More »

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು

ಸ್ಫೋಟದ ವೇಳೆ ಬಿಡುಗಡೆಯಾದ ವಿಷಾನಿಲದಿಂದಲೂ ಹಲವರು ಮೃತ ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದಾರೆ. ಹರ್ಮೊಸಿಲ್ಲೊದ ವಾಲ್ಡೋ ಡಿಪಾರ್ಟ್‌ಮೆಂಟಲ್‌ ಸ್ಟೋರ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಟದಿಂದ ಹೆಚ್ಚಿನ ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಧಿವಿಜ್ಞಾನ ವೈದ್ಯಕೀಯ ಸೇವೆಯ ರಾಜ್ಯದ ಅಟಾರ್ನಿ ಜನರಲ್‌ ಗುಸ್ತಾವೋ ಸಲಾಸ್‌ ಮಾಹಿತಿ

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು Read More »

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು

ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತ ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಈ ಭೀಕರ ಅಪಘಾತವಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್​ಟೇಕ್​ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು Read More »

ಬಿಸಿಲೆ ಘಾಟಿಯಲ್ಲಿ ಮಿನಿಬಸ್‌ ಪಲ್ಟಿ : 20 ಜನರಿಗೆ ಗಾಯ

ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಬರುತ್ತಿದ್ದ ಬಸ್‌ 20 ಅಡಿ ಆಳಕ್ಕೆ ಪಲ್ಟಿ ಸುಬ್ರಹ್ಮಣ್ಯ: ಮದುವೆ ಸಮಾರಂಭದಲ್ಲಿ ಭಾಗವಹಿಸಲು ವನಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಬರುತ್ತಿದ್ದ 30 ಜನರಿದ್ದ ಮಿನಿ ಬಸ್‌ ಬಿಸಿಲೆ ಘಾಟ್ ಡಬಲ್ ಟರ್ನ್‌ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದ್ದಿದ್ದು, 20 ಜನರು ಗಾಯಗೊಂಡು 4 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರಿನ ಯುವಕ ಮತ್ತು ಏನೆಕಲ್ಲಿನ ಯುವತಿ ಮದುವೆ ಇಂದು ನಡೆಯಬೇಕಿತ್ತು.

ಬಿಸಿಲೆ ಘಾಟಿಯಲ್ಲಿ ಮಿನಿಬಸ್‌ ಪಲ್ಟಿ : 20 ಜನರಿಗೆ ಗಾಯ Read More »

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು

ಬಂಟ್ವಾಳ: ಕಾರ್ ಒಂದು ಪಾಣೆಮಂಗಳೂರು ಫ್ಲೈ ಓವರ್‌ನ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕುದ್ಮಾರು ‌ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಕಾರ್ತಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು Read More »

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ

ಕುಂಬಳೆಯ ಪ್ರಸಿದ್ಧ ಅನಂತಪುರ ಕ್ಷೇತ್ರದ ಸಮೀಪ ಇರುವ ಕಾರ್ಖಾನೆಯಲ್ಲಿ ದುರಂತ ಮಂಗಳೂರು : ಪಕ್ಕದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪ ಅನಂತಪುರದಲ್ಲಿ ನಿನ್ನೆ ರಾತ್ರಿ ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಡೆಕೋರ್ ಪ್ಯಾನಲ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಈ ಮಹಾದುರಂತ ಸಂಭವಿಸಿದೆ. ಅನಂತಪುರ ಕೖಗಾರಿಕಾ ಪ್ರಾಂಗಣದ ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಉಂಟಾಗಿದೆ. ಸೋಮವಾರ ರಾತ್ರಿ ಸುಮಾರು ಏಳರ ವೇಳೆಗೆ ಭಾರಿ ಸ್ಫೋಟ ಸಂಭವಿಸಿದ್ದು,

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ Read More »

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್‌ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು Read More »

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ

ಚಾಮರಾಜನಗರ: ಮೈಸೂರು – ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ -766 ರ ಬಳಿ ಇಂದು ಮುಂಜಾನೆ ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ‌ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗುವೂ ‌ಸೇರು ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬಷೀರ್, ನಸೀಮಾ ಬಷೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಷಪಿ, ಜಸೀರಾ ಮತ್ತು ಮೂರು ವರ್ಷದ ಮಗು ಅಜೈಮ್ ಅನಾನ್‌ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ Read More »

error: Content is protected !!
Scroll to Top