ಅಪಘಾತ

ಅತಿವೇಗದ ಚಾಲನೆ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

ಬೆಂಗಳೂರು: ಅತಿ ವೇಗದಿಂದ ಚಲಾಯಿಸುತ್ತಿದ್ದ ಬೈಕ್ ಸವಾರಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಬೈಕ್‌ನಲ್ಲಿ ಯುವಕರಿಬ್ಬರು ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತದೇಹಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಕುದೂರು ‌ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತಿವೇಗದ ಚಾಲನೆ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ Read More »

ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ನಿರ್ವಾಹಕನಿಗೆ ಗಾಯ

ಸುಳ್ಯ: ಇಂಟರ್‌ಲಾಕ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮುಳ್ಯದ ಯತೀಶ್ ಎಂಬವರ ಹೊಸ ಮನೆಯ ಅಂಗಳಕ್ಕೆ ಅಳವಡಿಸಲು ಇಂಟರ್‌ಲಾಕ್ ತುಂಬಿಕೊಂಡು ಹೋಗುತ್ತಿರುವಾಗ ಲಾರಿ ಪಲ್ಟಿಯಾಗಿದೆ.ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ನಿರ್ವಾಹಕನಿಗೆ ಗಾಯ Read More »

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಡೂರಿನ ಬುಕ್ಕಸಾಗರ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಿಲ್ (21) ಎಂಬವರೇ ‌ಮೃತ ದುರ್ದೈವಿ. ಮೂಲತಃ ಕೇರಳದ ಕಣ್ಣೂರಿನವರಾದ ಅನಿಸ್ ಕಡೂರಿನ ಬಟ್ಟೆ ಅಂಗಡಿಯೊಂದರಲ್ಲಿ ‌ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ದತ್ತಪೀಠಕ್ಕೆ ತೆರಳಿ ವಾಪಾಸಾಗುತ್ತಿದ್ದ ‌ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು Read More »

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು

10 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಿಸಿ ಮಹಾದುರಂತ; ಹಲವಾರು ಮನೆಗಳು ಬೆಂಕಿಗಾಹುತಿ ವಾಷಿಂಗ್ಟನ್‌: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ದುರಂತದಲ್ಲಿ ಕನಿಷ್ಠ 7 ಮಂದಿ ಸಾವು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ಸುಟ್ಟು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು Read More »

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು

10 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಿಸಿ ಮಹಾದುರಂತ; ಹಲವಾರು ಮನೆಗಳು ಬೆಂಕಿಗಾಹುತಿ ವಾಷಿಂಗ್ಟನ್‌: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ದುರಂತದಲ್ಲಿ ಕನಿಷ್ಠ 7 ಮಂದಿ ಸಾವು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ಸುಟ್ಟು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು Read More »

ತೆಲಂಗಾಣ ಅಪಘಾತದಲ್ಲಿ ಮೂವರು ಒಡಹುಟ್ಟಿದ ಸಹೋದರಿಯರು ಸಾವು

ಜಲ್ಲಿ ಸಾಗಿಸುತ್ತಿದ್ದ್‌ ಟ್ರಕ್‌ ಬಸ್ಸಿನ ಮೇಲೆ ಮಗುಚಿಬಿದ್ದು ಸಂಭವಿಸಿದ ಭೀಕರ ದುರಂತ ಹೈದರಾಬಾದ್ : ತೆಲಂಗಾಣದಲ್ಲಿ ಸೋಮವಾರ ಬೆಳಗ್ಗೆ ಜಲ್ಲಿ ಸಾಗಿಸುತ್ತಿದ್ದ ಟ್ರಕ್‌ ಬಸ್ಸಿನ ಮೇಲೆ ಮಗುಚಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಡಹುಟ್ಟಿದ ಮೂವರು ಸಹೋದರಿಯರು ಕೂಡ ಸಾವನ್ನಪ್ಪಿದ್ದಾರೆ. ಮನೆಗೆ ಬೆಳಕಾಗಿದ್ದ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಕಳಚಿ ಬಿದ್ದಂತಾಗಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಈ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬವರ ಮೂವರು ಹೆಣ್ಣುಮಕ್ಕಳು

ತೆಲಂಗಾಣ ಅಪಘಾತದಲ್ಲಿ ಮೂವರು ಒಡಹುಟ್ಟಿದ ಸಹೋದರಿಯರು ಸಾವು Read More »

ಬಸ್​ಗೆ ಡಿಕ್ಕಿ ಹೊಡೆದ ಲಾರಿ : 20 ಜನರು ಸಾವು

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಬಸ್​ಗೆ ಲಾರಿ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿ 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದದ್ದು ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದೆ. ಈ ಜಾಗದಲ್ಲಿ ಅತಿ ವೇಗದಲ್ಲಿ ಬಂದ ಲಾರಿ

ಬಸ್​ಗೆ ಡಿಕ್ಕಿ ಹೊಡೆದ ಲಾರಿ : 20 ಜನರು ಸಾವು Read More »

ಅಫಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ : ಹಲವು ಮಂದಿ ಸಾವು

6.3 ತೀವ್ರತೆಯ ಭೂಕಂಪದಿಂದ ಅನೇಕ ಕಟ್ಟಡಗಳು ಧರಾಶಾಯಿ ಕಾಬೂಲ್ : ಆಫ್ಘಾನಿಸ್ತಾನದಲ್ಲಿ ಸೋಮವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಕಟ್ಟಡಗಳು ಧರೆಗುರುಳಿವೆ. ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ನೆಲಕ್ಕುರುಳಿವೆ. ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿ ಸುಮಾರು 150 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ಸೋಮವಾರ

ಅಫಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ : ಹಲವು ಮಂದಿ ಸಾವು Read More »

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು

ಜೋಧಪುರ್ : ರಾಜಸ್ಥಾನದ ಜೋಧಪುರ್​ನಲ್ಲಿ ಭಾನುವಾರ ರಾತ್ರಿ ನಿಂತಿದ್ದ ಟ್ರಕ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೋಧಪುರ್​ನ ಫಾಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್​ಪ್ರೆಸ್​ವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್‌ನಲ್ಲಿದ್ದವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್​ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್​ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು Read More »

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು

ಸ್ಫೋಟದ ವೇಳೆ ಬಿಡುಗಡೆಯಾದ ವಿಷಾನಿಲದಿಂದಲೂ ಹಲವರು ಮೃತ ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದಾರೆ. ಹರ್ಮೊಸಿಲ್ಲೊದ ವಾಲ್ಡೋ ಡಿಪಾರ್ಟ್‌ಮೆಂಟಲ್‌ ಸ್ಟೋರ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಟದಿಂದ ಹೆಚ್ಚಿನ ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಧಿವಿಜ್ಞಾನ ವೈದ್ಯಕೀಯ ಸೇವೆಯ ರಾಜ್ಯದ ಅಟಾರ್ನಿ ಜನರಲ್‌ ಗುಸ್ತಾವೋ ಸಲಾಸ್‌ ಮಾಹಿತಿ

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು Read More »

error: Content is protected !!
Scroll to Top