ಅಪಘಾತ

ವೈಷ್ಣೋದೇವಿ ಮಾರ್ಗದಲ್ಲಿ ಭೀಕರ ಭೂಕುಸಿತ : 30ಕ್ಕೂ ಅಧಿಕ ಮಂದಿ ಸಾವು

ಕಣಿವೆ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಅನಾಹುತ ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೀಕರ ಭೂಕುಸಿತ ಸಂಭವಿಸಿ 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸ್ಥಳೀಯ ಪೊಲೀಸ್ ಹಾಗೂ ಎನ್‌ಡಿಆರ್‌ಎಫ್ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಚರಣೆ ನಡೆಸಿದೆ. ಭೂಕುಸಿತದಿಂದ 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 23 ಜನರು ಗಾಯಗೊಂಡಿದ್ದಾರೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಸಿಆರ್‌ಪಿಎಫ್‌ನ 6ನೇ ಬೆಟಾಲಿಯನ್ ಸೈನಿಕರು ಹಾಗೂ ರಕ್ಷಣಾ ತಂಡಗಳು […]

ವೈಷ್ಣೋದೇವಿ ಮಾರ್ಗದಲ್ಲಿ ಭೀಕರ ಭೂಕುಸಿತ : 30ಕ್ಕೂ ಅಧಿಕ ಮಂದಿ ಸಾವು Read More »

ಭೀಕರ ಅಪಘಾತ : 8 ಯಾತ್ರಿಕರು ಸ್ಥಳದಲ್ಲೇ ಸಾವು

ಯಾತ್ರಿಕರಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಲಖನೌ: ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2.10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಮಕ್ಕಳು. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ

ಭೀಕರ ಅಪಘಾತ : 8 ಯಾತ್ರಿಕರು ಸ್ಥಳದಲ್ಲೇ ಸಾವು Read More »

ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ

ಸಸಿಹಿತ್ಲು ಬೀಚ್‌ನಲ್ಲಿ ಸಂಭವಿಸಿದ ದುರಂತ ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತ ಯುವಕ ಪಡುಪಣಂಬೂರು ಕಜಕತೋಟ ನಿವಾಸಿ ದಿ.ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್

ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ Read More »

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು

ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಯತ್ನಿಸಿದಾಗ ಪಲ್ಟಿಯಾದ ಕಾರು ಕಾಪು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಕಾಪು ಸಮೀಪ ಮೂಳೂರಿನಲ್ಲಿ ಪಲ್ಟಿಯಾಗಿ ಯುವ ಡಿಜೆ ಮತ್ತು ಸಿನೆಮಾಗಳ ಛಾಯಾಗ್ರಾಹಕ ಮೃತಪಟ್ಟಿದ್ದು, ಅವರ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 28 ವರ್ಷದ ಮೃತ ಯುವಕನನ್ನು ಛಾಯಾಗ್ರಾಹಕ ಹಾಗೂ ಡಿಜೆ ಬೆಳ್ಮಣ್‌ನ ಮರ್ವಿನ್ ಮೆಂಡೊನ್ಸ (28) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಎಂಬಿಬ್ಬರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಕಾರು ಪೂರ್ತಿಯಾಗಿ

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು Read More »

ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್‍ | ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಪುತ್ತೂರು: ಶಾಲಾ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್‍ ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಬಸ್ಸಿನಲ್ಲಿ ಹಲವು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶಾಲಾ

ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್‍ | ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ Read More »

ಭೀಕರ ಬೆಂಕಿ ಅವಘಡ : ಐದು ಮಂದಿ ಸಜೀವ ದಹನ

ತಂದೆ-ತಾಯಿ ಇಬ್ಬರು ಪುಟ್ಟ ಮಕ್ಕಳ ದುರಂತ ಅಂತ್ಯ ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತ ಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ. ದುರಂತದಲ್ಲಿ ಸಜೀವ ಸುಟ್ಟುಕರಕಲಾದವರನ್ನು ಮದನ್ (38), ಅವರ ಪತ್ನಿ ಸಂಗೀತಾ (33) ಪುತ್ರರಾದ ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌

ಭೀಕರ ಬೆಂಕಿ ಅವಘಡ : ಐದು ಮಂದಿ ಸಜೀವ ದಹನ Read More »

ರಸ್ತೆ ಬದಿ ನಿಂತಿದ್ದ  ಕಾರಿಗೆ ಲಾರಿ ಡಿಕ್ಕಿ

ಕುಂದಾಪುರ: ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ತೆಕ್ಕಟ್ಟೆ ಉದ್ಯಮಿ ಮತ್ತು ಅವರ ಮಗ ನಿಂತಿದ್ದ ಇನ್ನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಇಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತೆಕ್ಕಟ್ಟೆಯ ಶ್ರೀ ಗಣೇಶ್ ಸಿಲ್ಕ್ ನ ವ್ಯವಸ್ಥಾಪಕ ನಿರ್ದೇಶಕ ಅನಂತ್ ನಾಯಕ್ (57) ಮತ್ತು ಅವರ ಮಗ ಅನೂಪ್ ನಾಯಕ್ (23) ರವರು ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಭಜನತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಇನೋವಾ

ರಸ್ತೆ ಬದಿ ನಿಂತಿದ್ದ  ಕಾರಿಗೆ ಲಾರಿ ಡಿಕ್ಕಿ Read More »

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವು

ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತ ಜೈಪುರ: ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಎಂಬಲ್ಲಿ ಇಂದು ನಸುಕಿನ ಹೊತ್ತು ನಡೆದಿದೆ. ಪಿಕ್‌ಅಪ್‌ ವ್ಯಾನಿನಲ್ಲಿದ್ದವರು ಖತುಶ್ಯಾಮ್​ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ನಸುಕಿನ 3.30ರ ವೇಳೆಗೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವು Read More »

ತಾಂತ್ರಿಕ ದೋಷದಿಂದ ವಿಮಾನ ತುರ್ತು ಲ್ಯಾಂಡಿಂಗ್‌ : ಕೂದಲೆಳೆ ಅಂತರದಲ್ಲಿ ಬಚಾವಾದ ಸಂಸದರು, ಪ್ರಯಾಣಿಕರು

ಕಾಂಗ್ರೆಸ್‌ ಎಂಪಿ ಕೆ.ಸಿ.ವೇಣುಗೋಪಾಲ್‌ ಸಹಿತ ಹಲವು ಸಂಸದರು, ನೂರಾರು ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಚೆನ್ನೈ : ಕೇರಳದ ಕಾಂಗ್ರೆಸ್‌ ಸಂಸದ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರು ಮತ್ತು ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದ ಕಾರಣ ಚೆನ್ನೈಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಭಾನುವಾರ ಸಂಜೆ ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ ವಿಮಾನ AI2455ರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅಲ್ಲದೆ, ಹವಾಮಾನ ವೈಪರೀತ್ಯವೂ ತುರ್ತು ಲ್ಯಾಂಡಿಂಗ್​ಗೆ ಕಾರಣವಾಯಿತು

ತಾಂತ್ರಿಕ ದೋಷದಿಂದ ವಿಮಾನ ತುರ್ತು ಲ್ಯಾಂಡಿಂಗ್‌ : ಕೂದಲೆಳೆ ಅಂತರದಲ್ಲಿ ಬಚಾವಾದ ಸಂಸದರು, ಪ್ರಯಾಣಿಕರು Read More »

ಮಂಗಳೂರು : ಈಜು ಕೋಚ್‌ ಈಜುಕೊಳದಲ್ಲಿ ಮುಳುಗಿ ಸಾವು

ಈಜುವಾಗಲೇ ಹೃದಯಾಘಾತವಾಗಿ ಉಸಿರುಕಟ್ಟಿ ಮೃತ್ಯು ಮಂಗಳೂರು: ಈಜು ಕೋಚ್‌ ಈಜುಕೊಳದಲ್ಲೇ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಈಜುಕೊಳದ ಲೈಫ್‌ಗಾರ್ಡ್ ಕೂಡ ಆಗಿದ್ದ ಅವರು ಹೃದಯಾಘಾತದಿಂದಾಗಿ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಭಾನುವಾರ ಈಜುವಾಗಲೇ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಬಂಟ್ವಾಳ ತಾಳುಕಿನ ಕಲ್ಲಡ್ಕದ ಸಮೀಪದ ಸೂರಿಕುಮೇರಿನ ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರಿಗೆ ನೀರಿನೊಳಗೆ

ಮಂಗಳೂರು : ಈಜು ಕೋಚ್‌ ಈಜುಕೊಳದಲ್ಲಿ ಮುಳುಗಿ ಸಾವು Read More »

error: Content is protected !!
Scroll to Top