ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್ : ಬೈಕ್ ಸವಾರ ಮೃತ್ಯು
ಪುತ್ತೂರು: ಶಾಮಿಯಾನ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುದೀಪ್ ಚೊಕ್ಕಾಡಿ ಮೃತಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡ ಸುದೀಪ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದೀಪ್ ಮುರ ಸಮೀಪ ಆಯುರ್ವೇದಿಕ್ ಔಷಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್ : ಬೈಕ್ ಸವಾರ ಮೃತ್ಯು Read More »