ಅಪಘಾತ

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಬೆಳ್ತಂಗಡಿ:  ಮಿನಿ ಲಾರಿಯೊಂದು ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ  ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದೆ. ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು ನಂದಿಸಿ ಲಾರಿಯನ್ನು ಉಳಿಸಿದ್ದಾರೆ. ಹಾಸನದ ಸಕಲೇಶಪುರದ ಬೈಹುಲ್ಲು ವ್ಯಾಪಾರಸ್ಥರೋರ್ವರು ಹೈನುಗಾರಿಕೆ ಮಾಡುವ ಕೃಷಿಕರ ಮನೆ ಮನೆಗೆ ಬೈಹುಲ್ಲನ್ನು ಹಾಕಲು ತನ್ನ ಮಿನಿ ಲಾರಿಯಲ್ಲಿ ಹುಲ್ಲನ್ನು ತರುವಾಗ  ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಸ್ಥಳೀಯವರೊಬ್ಬರು ಬೊಬ್ಬೆ ಹಾಕಿ ಲಾರಿ ಚಾಲಕನಿಗೆ ಮಾಹಿತಿ ನೀಡಿದರು. […]

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ Read More »

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ

ಬೆಳ್ಳಾರೆ:ಪೇಟೆಯಲ್ಲಿ ಬೈಕ್‌ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೈಕ್‌ ಸವಾರ ಪುಡ್ಕಜೆವರಾಗಿದ್ದು ಅವರಿಗೆ ತಲೆಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ Read More »

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಮಾಣಿ: ಯುವಕನೋರ್ವ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ. ವೀರಕಂಭ ಮಜಿ ಶಾಲಾ ಬಳಿ ನಿವಾಸಿ ವಿಶ್ವನಾಥ (38) ಮೃತಪಟ್ಟವರು. ಬೆಂಗಳೂರು-ಮಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬೇಕೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಕಸ್ಮಿಕವೋ, ಆತ್ಮಹತ್ಯಯೋ ಎಂದು ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.              

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಶಾರ್ಟ್‍ ಸರ್ಕ್ಯೂಟ್ ನಿಂದ ಅರಣ್ಯಕ್ಕೆ ಹತ್ತಿಕೊಂಡ ಬೆಂಕಿ | ಗಿಡಮರಗಳ ನಾಶ

ಅನಂತಾಡಿ: ಶಾರ್ಟ್ ಸೆರ್ಕ್ಯೂಟ್‌ನಿಂದ ಹೊತ್ತಿಕೊಂಡು ಬೆಂಕಿಯಿಂದಾಗಿ ಅನಂತಾಡಿ ಗ್ರಾಮದ ಆರಂಗಳ ಸುಳ್ಯಮಲೆ ಅರಣ್ಯ ಪ್ರದೇಶದಲ್ಲಿ ಗಿಡಮರಗಳು ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಬೆಂಕಿ ಹತ್ತಿಕೊಂಡ ವಿಚಾರ ತಿಳಿದ ತಕ್ಷಣ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಶ್ರಮ ಪಟ್ಟಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ತಕ್ಷಣ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳವದರ ಜತೆ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಅರಣ್ಯದಲ್ಲಿದ್ದ ಗಿಡಮರಗಳು ಸುಟ್ಟುಗೋಗಿದೆ.

ಶಾರ್ಟ್‍ ಸರ್ಕ್ಯೂಟ್ ನಿಂದ ಅರಣ್ಯಕ್ಕೆ ಹತ್ತಿಕೊಂಡ ಬೆಂಕಿ | ಗಿಡಮರಗಳ ನಾಶ Read More »

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ

ಸುಳ್ಯ: ಓಮ್ನಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಾಲೆಮಜಲು ಬಸ್ ತಂಗುದಾಣದ ಬಳಿ ಹೆದ್ದಾರಿ ತಿರುವಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಹರಿಹರದಿಂದ ಹಾಲೆಮಜಲು ಓಮ್ಮಿ ಬರುತ್ತಿದ್ದು, ಚಾಲಕ ಸೇರಿದಂತೆ ಓಮ್ಮಿಯಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ Read More »

ಹಾಡಹಗಲೇ ಕಾಡು ಹಂದಿ ದಾಳಿ : ಗಾಯಾಳು ಆಸ್ಪತ್ರೆಗೆ ದಾಖಲು

ಸವಣೂರು:ಹಾಡಹಗಲೇ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ಅಗರಿ ನಿವಾಸಿ ರತ್ನಾಕರ ಗಂಭೀರ ಗಾಯಗೊಂಡವರು. ಇಂದು ಮಧ್ಯಾಹ್ನ ಮನೆ ಸಮೀಪ ಹಠತ್ತನೇ ಕಾಡು ಹಂದಿಯೊಂದು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೃಷಿಕರ ಕೋವಿ ಠೇವಣಾತಿಯಿಂದಾಗಿ ಕಾಡು ಪ್ರಾಣಿಗಳಿಂದ ರಕ್ಷಣೆ ಪಡೆಯಲು ಕೃಷಿಕರಿಗೆ ಅಸಾಧ್ಯವಾಗಿದೆ. ಈ ಕುರಿತು

ಹಾಡಹಗಲೇ ಕಾಡು ಹಂದಿ ದಾಳಿ : ಗಾಯಾಳು ಆಸ್ಪತ್ರೆಗೆ ದಾಖಲು Read More »

ಲೋಕಸಭೆ ರ್ಯಾಲಿ ವೇಳೆ‌‌ ಅಪಘಾತ : ಬಿಜೆಪಿ ಕಾರ್ಯಕರ್ತ ಪ್ರಕಾಶ್ ಮೃತ್ಯು

ಬೆಂಗಳೂರು: ಉತ್ತರ  ಲೋಕಸಭಾ ಕ್ಷೇತ್ರದ  ಅಭ್ಯರ್ಥಿ ಶೋಭಾ ಕರಂದ್ಲಾಜೆ  ಅವರ ರ್ಯಾಲಿ ನಡೆಯುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಓರ್ವರು ಮೃತಪಟ್ಟ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅಪಘಾತದಿಂದ ಮೃತಪಟ್ಟವರು. ಪ್ರಕಾಶ್ ಇಂದು ಬೆಳಗ್ಗೆ ಹೋಂಡಾ ಆ್ಯಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಮುಖಂಡರೊಬ್ಬರು ಕಾರು ರಸ್ತೆಯಲ್ಲಿ ಪಾರ್ಕ್‌ ಮಾಡಿ ಹಿಂದೆ ಮುಂದೆ ನೋಡದೇ ಏಕಾಏಕಿ ಬಾಗಿಲು ತೆರೆದಿದ್ದು, ಅದು ಬೈಕ್‌ಗೆ ತಾಗಿದೆ. ಪರಿಣಾಮ ಪ್ರಕಾಶ್ ಕೆಳಗೆ ಬಿದ್ದಿದ್ದಾರೆ.

ಲೋಕಸಭೆ ರ್ಯಾಲಿ ವೇಳೆ‌‌ ಅಪಘಾತ : ಬಿಜೆಪಿ ಕಾರ್ಯಕರ್ತ ಪ್ರಕಾಶ್ ಮೃತ್ಯು Read More »

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ | ಅಪಾಯದಿಂದ ಪಾರು

ಬಂಟ್ವಾಳ:  ಕಾರೊಂದಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿಯ ರಾಯಿ ಕಂಗಿತ್ತಿಲು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಇಳಿದಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಏಳಿಂಜೆಗುತ್ತು ಕೊಲ್ಲೆಟ್ಟು ಶರತ್ ಶೆಟ್ಟಿ ಅವರಿಗೆ ಸೇರಿದ ಡಸ್ಟರ್ ಕಾರಿನಲ್ಲಿ ಶಾರ್ಟ್‍ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಗು ಸಹಿತ ನಾಲ್ಕು ಮಂದಿ ಇದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ | ಅಪಾಯದಿಂದ ಪಾರು Read More »

ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು

ಮಂಗಳೂರು: ಸುಳ್ಯ ತಾಲೂಕಿನ ಗುತ್ತಿಗಾರಿನ ಯುವಕನೋರ್ವ ಮಂಗಳೂರಿನಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಗುತ್ತಿಗಾರು ಗ್ರಾಮದ ಚನಿಲ ನಿವಾಸಿ ಸುಪ್ರೀತ್ ನಾಯ್ಕ ಮೃತ ಪಟ್ಟ ಯುವಕ. ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ !

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಮಗುಚಿ ಬಿದ್ದ ಘಟನೆ ಜೋಡುಪಾಲ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ಲಭಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ! Read More »

error: Content is protected !!
Scroll to Top