ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ
ನೆಲ್ಯಾಡಿ: ಕಂಟೈನರ್ ಹಾಗೂ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪ ಇಂದು ನಡೆದಿದೆ. ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. […]
ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ Read More »