ಅಪಘಾತ

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ  ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿದ್ರೆಯ ಮಂಪರಿನಿಂದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿರಾಡಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು Read More »

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು !

ವಿಟ್ಲ: ಅಡಿಕೆ ಮರ ಮುರಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ಬುಧವಾರ ನಡೆದಿದೆ. ಗುಲಾಬಿ (48) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮರ ಮುರಿದು ಗುಲಾಬಿ ಅವರ ಮೇಲೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರ ಗಾಯವಾಗಿದ್ದು, ತಕ್ಷಣ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು ! Read More »

ಕೆಂಪುಹೊಳೆಯಲ್ಲಿ ಅಪಘಾತ: ಇಬ್ಬರು ಮೃತ್ಯು

ಶಿರಾಡಿ: ಇಲ್ಲಿನ ಕೆಂಪುಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿರುವ ಘಟನೆ ಸಂಭವಿಸಿದೆ. ಮಿನಿಲಾರಿಯಲ್ಲಿದ್ದ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಮಿನಿ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದಿರುವ ವಾಹನವನ್ನು ಘನ ವಾಹನವಾಗಿರಬಹುದೆಂದು ಶಂಕಿಸಲಾಗಿದೆ. ಹಾಸನ ಭಾಗದಿಂದ ಮಂಗಳೂರಿಗೆ ಬರುತ್ತಿದ್ದ ಮಿನಿಲಾರಿಗೆ ಘನ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಂಪುಹೊಳೆಯಲ್ಲಿ ಅಪಘಾತ: ಇಬ್ಬರು ಮೃತ್ಯು Read More »

ಶಾಲಾ ಬಸ್ – ಕಾರು ಢಿಕ್ಕಿ!

ಪುತ್ತೂರು: ಶಾಲಾ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ ಘಟನೆ ಸವಣೂರು ಸಮೀಪದ ಚಾಪಲದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಖಾಸಾಗಿ ವಿದ್ಯಾಸಂಸ್ಥೆಯೊಂದರ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಲಾ ಬಸ್’ಗೆ ಸಣ್ಣ ಪುಟ್ಟ ಹಾನಿಯಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತದಿಂದ ಎರಡೂ ಬದಿಯೂ ಟ್ರಾಫಿಕ್ ಜಾಮ್ ಉಂಟಾಯಿತು. ಬೆಳಿಗ್ಗಿನ ಹೊತ್ತಾಗಿದ್ದರಿಂದ ವಾಹನಗಳ ಸರತಿ ಸಾಲು ದೊಡ್ಡದಾಗಿಯೇ ಬೆಳೆದಿತ್ತು.

ಶಾಲಾ ಬಸ್ – ಕಾರು ಢಿಕ್ಕಿ! Read More »

ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ

ಪುತ್ತೂರು: ಕಾರು ಮತ್ತು ಈಚರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಬಕ ಅಡ್ಯಲಾಯ ದೈವಸ್ಥಾನದ ಎದುರಿನಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಮಣಿಪಾಲ ಮೂಲದವರು ಎನ್ನಲಾಗಿದೆ. ಈಚರ್ ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ Read More »

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’!

ಸಕಲೇಶಪುರ: ಈ ಬಾರಿ ನಾಡಹಬ್ಬ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಅಸುನೀಗಿದೆ. ಸಕಲೇಶಪುರದಲ್ಲಿ ನಡೆದ ಕಾಡಾನೆ ಸೆರೆ ವೇಳೆ ಘಟನೆ ಸಂಭವಿಸಿದೆ. ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ, ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಗಂಭೀರ ಗಾಯಗೊಂಡ ಅರ್ಜುನ ಅಸುನೀಗಿದೆ ಎಂದು ಹೇಳಲಾಗಿದೆ. ಸಕಲೇಶಪುರದ ಯಸಲೂರಿನಲ್ಲಿ ಘಟನೆ ನಡೆದಿದೆ. ದಾಳಿ ಸಂದರ್ಭ ಮಾವುತರು ಓಡಿ ಹೋಗಿದ್ದಾರೆ. ಈ ಸಂದರ್ಭ ಹಲವರ ಪ್ರಾಣ ಉಳಿಸಲು, ಅರ್ಜುನ ತನ್ನ ಪ್ರಾಣ ಪಣವಾಗಿ ಇಟ್ಟಿದ್ದ. ಇದರಿಂದ ಅರ್ಜುನ

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’! Read More »

ಕಾರು – ಬಸ್ ಭೀಕರ ಅಪಘಾತ!

ಪುತ್ತೂರು: ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಕಾರಿನ ಡೋರ್ ಮುರಿದು ಗಾಯಾಳುಗಳನ್ನು ರಕ್ಷಿಸಲಾಯಿತು. ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು. ಇಂಡಿಕಾ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕಾರು – ಬಸ್ ಭೀಕರ ಅಪಘಾತ! Read More »

ನೀರಿನಲ್ಲಿ ಮುಳುಗಿ ಮೃತ್ಯು !

ಸುಳ್ಯ: ಸ್ನಾನಕ್ಕೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಆರಂಬೂರು ಬಳಿಯ ಪಯಸ್ವಿನಿ ನದಿಯಲ್ಲಿ ಇಂದು ನಡೆದಿದೆ. ಮಡಿಕೇರಿ ಮದೆನಾಡು ಮೂಲದ ವೆಂಕಟರಮಣ ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಮೃತದೇಹ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ನೀರಿನಲ್ಲಿ ಮುಳುಗಿ ಮೃತ್ಯು ! Read More »

ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!!

ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರಿನತ್ತ ತೆರಳುತ್ತಿದ್ದ ಕೋಳಿ ಸಾಗಾಟದ ಈ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ರಸ್ತೆಗೆ ಉರುಳಿ ಬಿದ್ದಿದ್ದ ಕೋಳಿಗಳಿದ್ದ ಬಾಕ್ಸ್ ಗಳನ್ನು ಬಳಿಕ ಬೇರೆ ವಾಹನದಲ್ಲಿ ತುಂಬಿಸಿ ಕೊಂಡೊಯ್ಯಲಾಯಿತು.

ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!! Read More »

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು

ಭತ್ತ ಕಾಯಲು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಬೀರು (32) ಹಾಗೂ ಸುರೇಶ್ (30) ಸಿಡಿಲು ಬಡಿತದಿಂದ ಮೃತಪಟ್ಟವರು ಎನ್ನಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು Read More »

error: Content is protected !!
Scroll to Top