ಅಪಘಾತ

ಅಪಘಾತದಲ್ಲಿ ಮೂವರು ಕಾರ್ಮಿಕ ಮಹಿಳೆಯರು ಸ್ಥಳದಲ್ಲೇ ಸಾವು

ಕ್ರೂಸರ್‌-ಕ್ಯಾಂಟರ್‌ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತ ಗದಗ: ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಗಜೇಂದ್ರಗಢದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ […]

ಅಪಘಾತದಲ್ಲಿ ಮೂವರು ಕಾರ್ಮಿಕ ಮಹಿಳೆಯರು ಸ್ಥಳದಲ್ಲೇ ಸಾವು Read More »

ಸ್ಕೂಟಿಗೆ ಬಸ್‌ ಡಿಕ್ಕಿ : ಸಹಸವಾರೆ ಸ್ಥಳದಲ್ಲೇ ಸಾವು

ಯುವತಿಯ ಮೇಲೆ ಹರಿದು ಹೋದ ಬಸ್ಸಿನ ಚಕ್ರ ಮಂಗಳೂರು : ನಗರದ ನಂತೂರಿನಲ್ಲಿಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ

ಸ್ಕೂಟಿಗೆ ಬಸ್‌ ಡಿಕ್ಕಿ : ಸಹಸವಾರೆ ಸ್ಥಳದಲ್ಲೇ ಸಾವು Read More »

ಸರ್ವಿಸ್‌ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲು

ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ವಿಜಯಪುರ ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಎಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ

ಸರ್ವಿಸ್‌ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲು Read More »

ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ

ಎರಡೂ ವಿಮಾನಗಳ ರೆಕ್ಕೆಗಳಿಗೆ ಹಾನಿ ಮುಂಬೈ : ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಢಿಕ್ಕಿ ಸಂಭವಿಸಿದೆ. ಇದೊಂದು ಗಂಭೀರವಾದ ನಿರ್ವಹಣಾ ಲೋಪ ಎಂದು ಪರಿಗಣಿಸಲಾಗಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ್ದರು. ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕೊಯಂಬತ್ತೂರಿಗೆ ಹಿಂದಿರುಗಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಹಾಗೂ ಹೈದರಾಬಾದ್‌ನಿಂದ ಆಗಮಿಸಿದ ಬಳಿಕ ನಿಲುಗಡೆ ಸ್ಥಳಕ್ಕೆ ಚಲಿಸುತ್ತಿದ್ದ ಇಂಡಿಗೋ ವಿಮಾನದ ನಡುವೆ ಢಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಪುತ್ತೂರು: ಕಳೆದ ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರ್ಮ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲೀಕ ಗಣೇಶ್ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲೈಟಿಂಗ್ಸ್ ‌ಸಂಬಂಧಿಸಿದ ಕೆಲಸಕ್ಕೆ ಡಿ. 6 ರಂದು ಬದಿಯಡ್ಕಕ್ಕೆ ತೆರಳಿದ್ದ ಅವರು ಸ್ಕೂಟರ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೃತರು ಪತ್ನಿ, ಇಬ್ಬರು

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು Read More »

ಚಾರ್ಮಾಡಿ ಘಾಟಿಯಲ್ಲಿ ಭೀಕರ ಕಾಡ್ಗಿಚ್ಚು

2 ಕಿ.ಮೀ. ತನಕ ವ್ಯಾಪಿಸಿದ ಬೆಂಕಿಗೆ ಹುಲ್ಲುಗಾವಲು ಭಸ್ಮ ಮಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ ತೀವ್ರವಾದ

ಚಾರ್ಮಾಡಿ ಘಾಟಿಯಲ್ಲಿ ಭೀಕರ ಕಾಡ್ಗಿಚ್ಚು Read More »

ಪಿಕಪ್ – ಸ್ಕೂಟಿ ಢಿಕ್ಕಿ: ಮಹಿಳೆ ಸಾವು

ಚಿಕ್ಕಮಗಳೂರು: ಪಿಕಪ್ ಮತ್ತು ಸ್ಕೂಟಿ ‌ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಶಿನಗುಪ್ಪೆ ಗ್ರಾಮದಲ್ಲಿ ನಡೆದಿದೆ. ಚಂದ್ರಿಕಾ (40) ಎಂಬವರೇ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಏಕಾಏಕಿ ಅವರ ಮೇಲೆ ಪಿಕಪ್ ಹರಿದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗಮಿಸಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. ಸದ್ರಿ ಅಪಘಾತ ಸಂಭವಿಸುತ್ತಿರುವ

ಪಿಕಪ್ – ಸ್ಕೂಟಿ ಢಿಕ್ಕಿ: ಮಹಿಳೆ ಸಾವು Read More »

ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ

ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಂಭೀರ ಗಾಯ Read More »

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ಕಾರಿನಲ್ಲಿದ್ದ ಯುವಕ-ಯುವತಿ ಅದೃಷ್ಟವಶಾತ್‌ ಪಾರು ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು Read More »

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ

ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಪಲಾಯನ ಮಾಡಿದ್ದ ಕಾರು ಸುಳ್ಯ: ಕೊಡಗು ಸಂಪಾಜೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನ ಸಾವಿಗೆ ಕಾರಣವಾಗಿದ್ದ ಕಾರನ್ನು ಮಡಿಕೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಿಕ್ಷಾಕ್ಕೆ ಹಿಂದಿನಿಂದ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಸುಂದರ ಸಾವಿಗೀಡಾಗಿದ್ದರು. ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ Read More »

error: Content is protected !!
Scroll to Top