ಕಾರುಗಳೆರಡು ಡಿಕ್ಕಿ !
ಪುತ್ತೂರು: ಎರಡು ಕಾರುಗಳು ಡಿಕ್ಕಿ ಹೊಡೆದುಕೊಂಡ ಘಟನೆ ಬೈಪಾಸ್ ರಸ್ತೆಯ ದರ್ಬೆ ಬಳಿ ಸೋಮವಾರ ನಡೆದಿದೆ. ಅಪಘಾತದ ಪರಿಣಾ ಕಾರುಗಳೆರಡು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರುಗಳೆರಡು ಡಿಕ್ಕಿ ! Read More »
ಪುತ್ತೂರು: ಎರಡು ಕಾರುಗಳು ಡಿಕ್ಕಿ ಹೊಡೆದುಕೊಂಡ ಘಟನೆ ಬೈಪಾಸ್ ರಸ್ತೆಯ ದರ್ಬೆ ಬಳಿ ಸೋಮವಾರ ನಡೆದಿದೆ. ಅಪಘಾತದ ಪರಿಣಾ ಕಾರುಗಳೆರಡು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರುಗಳೆರಡು ಡಿಕ್ಕಿ ! Read More »
ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುವಿಷ್ಣುವಿನಲ್ಲಿ ನಡೆದಿದೆ. ಹಡವಿನಕೋಣೆ ಶಿರೂರಿನ ಅಬ್ದುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಟಾಯೂಸುಫ್ (48) ಮೃತಪಟ್ಟವರು ಎಂದು ಗುರತಿಸಲಾಗಿದೆ. ಶಿರೂರು ಕಳುಹಿತ್ತುವಿನಿಂದ ಮೀನುಗಾರಿಕೆ ತೆರಳಿದ್ದ ಮೂರು ಜನ ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುವಾಗ ಮುಂಜಾನೆ ವೇಳೆಗೆ ಶಿರೂರು ಕಳುಹಿತ್ತು ಅಳಿವೆ ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಬುಡ್ಡು ಮುಖಾರ್
ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು ! Read More »
ನೆಲ್ಯಾಡಿ: ಕಾರೊಂದು ಕೆಎಸ್ ಆರ್ ಟಿಸಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಹೇಶ್ (28), ಅಭಿಷೇಕ್ (30), ಮುತ್ತುರಾಜ್ (30), ಹಾಗೂ ನವೀನ್ (29) ಗಾಯಗೊಂಡವರು. ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಗಾಯಗೊಂಡವರು ಬೆಂಗಳೂರಿನ ಬನಶಂಕರಿ ಲೇ ಔಟ್ ನಿವಾಸಿಗಳೆಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿಗೆ ಡಿಕ್ಕಿ ಹೊಡೆದ ಕಾರು | ನಾಲ್ವರಿಗೆ ಗಾಯ Read More »
ಕಾರ್ಕಳ: ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಯಶವಂತ ಮೃತಪಟ್ಟ ಸ್ಕೂಟರ್ ಸವಾರ ಎಂದು ಗುರುತಿಸಲಾಗಿದೆ. ರಸ್ತೆ ಬದಿ ಕಾರ್ ಅನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿದ್ದ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಗಮನಿಸದೇ ನಿರ್ಲಕ್ಷ್ಯತನದಿಂದ ತನ್ನ ಕಾರಿನ ಬಲಬದಿಯ ಬಾಗಿಲನ್ನು ತೆರೆದ ಪರಿಣಾಮ ಸಾಲ್ಮರ ಕಡೆಯಿಂದ ತಾಲೂಕು ಕಚೇರಿ ಬಳಿ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್ ಸವಾರನಿಗೆ ಕಾರಿನ ಬಾಗಿಲು
ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು ! Read More »
ನೆಲ್ಯಾಡಿ: ಆಕಸ್ಮಿಕ ಬೆಂಗಿ ತಗಲಿದ ಪರಿಣಾಮ ಸ್ಮೋಕ್ ಹೌಸ್ ಹಾಗೂ ಹಟ್ಟಿ ಸುಟ್ಟು ಭಸ್ಮವಾಗಿರುವ ಘಟನೆ ಇಚ್ಲಂಪಾಡಿ ನಿಡ್ಯಡ್ಕ ಎಂಬಲ್ಲಿ ನಡೆದಿದೆ. ನಿಡ್ಯಡ್ಕ ನಿವಾಸಿ, ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ನಿರ್ದೇಶಕ ಜಾರ್ಜ್ ಕುಟ್ಟಿ ಉಪದೇಶಿ ಅವರಿಗೆ ಸೇರಿದ ಸ್ಮೋಕ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡಿದೆ. ಪರಿಣಾಮ ಪಕ್ಕದ ಹಟ್ಟಿಗೂ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಈ ಸಂದರ್ಭದಲ್ಲಿ ಹಟ್ಟಿಯಲ್ಲಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ. ಘಟನೆಯಿಂದ ಸುಮಾರು 3 ಲಕ್ಷ
ಸ್ಮೋಕ್ ಹೌಸ್, ಹಟ್ಟಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ನಷ್ಟ Read More »
ಪುತ್ತೂರು: ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಬಕ ಕೂವೆಹಿತ್ತಿಲು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೈಕ್-ಬಸ್ ಅಪಘಾತ : ಬೈಕ್ ಸವಾರ ಮೃತ್ಯು Read More »
ಬೆಳ್ತಂಗಡಿ: ರಿಕ್ಷಾ-ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಂದಾರಿನ ಈಜು ತಜ್ಞ ಮುಹಮ್ಮದ್ ಓಟೆಚ್ಚಾರು ಬಟ್ಲಡ್ಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಮುಹಮ್ಮದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಬೈಕ್-ರಿಕ್ಷಾ ಡಿಕ್ಕಿ : ಈಜು ತಜ್ಞರೊಬ್ಬರಿಗೆ ಗಂಭೀರ ಗಾಯ Read More »
ಕಡಬ: ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಡಬದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಮೃತರ ವಿಕಲಚೇತನರಾಗಿದ್ದಾರೆ. ಶುಕ್ರವಾರ ಸಾಯಂಕಾಲ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು ! Read More »
ಕಡಬ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಕಡಬ ತಾಲೂಕಿನ ಕಳಾರದಲ್ಲಿ ನಡೆದಿದೆ. ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಎಂಬವರ ಪುತ್ರ ಸರಸ್ವತಿ ಶಾಲಾ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ಮೃತ ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ತಮ್ಮ ನಿವಾಸದಿಂದ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸವ
ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »
ಸುಳ್ಯ: ಪಿಕಪ್ ವಾಹನ ಚಾಲನೆ ಸಂದರ್ಭ ಚಾಲಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರಿನಲ್ಲಿ ನಡೆದಿದೆ. ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಮೃತಪಟ್ಟವರು. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ
ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು ! Read More »