ಅಪಘಾತ

ಖಾಸಗಿ ಬಸ್’ನಡಿಗೆ ಬಿದ್ದು ವ್ಯಕ್ತಿ ಮೃತ್ಯು!!

ಬಸ್ಸಿನಡಿಗೆ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಈಶ್ವರಮಂಗಲ ಸಮೀಪದ ಗಾಳಿಮುಖದಲ್ಲಿ ಶುಕ್ರವಾರ ನಡೆದಿದೆ. ಘಟನೆಯಿಂದಾಗಿ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

ಖಾಸಗಿ ಬಸ್’ನಡಿಗೆ ಬಿದ್ದು ವ್ಯಕ್ತಿ ಮೃತ್ಯು!! Read More »

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು!

ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ – ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣ ರಾವ್ ಬಾಬುರಾವ್

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು! Read More »

ಅಡಿಕೆ ಮರದಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು!

ಪುತ್ತೂರು: ಮರದಿಂದ ಅಡಿಕೆ ಕೀಳುವ ಸಂದರ್ಭ ಆಕಸ್ಮತ್ತಾಗಿ ಮರದಿಂದ ಬಿದ್ದು ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿಯಲ್ಲಿ ನಡೆದಿದೆ. ನಿಡ್ಪಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಮೃತಪಟ್ಟವರು. ಬೆಟ್ಟಂಪಾಡಿಯ ಕೃಷಿಕರೋರ್ವರ ಮನೆಗೆ ಸಯ್ಯದ್ ಅವರು ಅಡಿಕೆ ಕೀಳಲು ತೆರಳಿದ್ದು, ಮರದಿಂದ ಆಕಸ್ಮಿಕವಾಗಿ ಮರದಿಂದ ಕಾಲುಜಾರಿ ಬಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಅಡಿಕೆ ಮರದಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು! Read More »

ವಿದೇಶದಿಂದ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಮೂಡಬಿದ್ರೆ: ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮೂಡಬಿದ್ರೆ ಮಹಾವೀರ ಕಾಲೇಜು ಬಳಿ ನಿವಾಸಿ ಪ್ರದೀಪ್ ಶೆಟ್ಟಿ (38) ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ

ವಿದೇಶದಿಂದ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು Read More »

ಖಾಸಗಿ ಬಸ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಸ್ಕೂಟರ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ನಲ್ಲಿ ನಡೆದಿದೆ. ಸ್ಕೂಟರ್ ಸವಾರ ನಾರಾಯಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಈ ಅಪಘಾತ ಸಂಭವಿಸಿದ್ದು. ಸ್ಕೂಟರ್ ಸವಾರ ನಾರಾಯಣ ಅವರು ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ

ಖಾಸಗಿ ಬಸ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ  ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿದ್ರೆಯ ಮಂಪರಿನಿಂದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿರಾಡಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು Read More »

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು !

ವಿಟ್ಲ: ಅಡಿಕೆ ಮರ ಮುರಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ಬುಧವಾರ ನಡೆದಿದೆ. ಗುಲಾಬಿ (48) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮರ ಮುರಿದು ಗುಲಾಬಿ ಅವರ ಮೇಲೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರ ಗಾಯವಾಗಿದ್ದು, ತಕ್ಷಣ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು ! Read More »

ಕೆಂಪುಹೊಳೆಯಲ್ಲಿ ಅಪಘಾತ: ಇಬ್ಬರು ಮೃತ್ಯು

ಶಿರಾಡಿ: ಇಲ್ಲಿನ ಕೆಂಪುಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿರುವ ಘಟನೆ ಸಂಭವಿಸಿದೆ. ಮಿನಿಲಾರಿಯಲ್ಲಿದ್ದ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಮಿನಿ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದಿರುವ ವಾಹನವನ್ನು ಘನ ವಾಹನವಾಗಿರಬಹುದೆಂದು ಶಂಕಿಸಲಾಗಿದೆ. ಹಾಸನ ಭಾಗದಿಂದ ಮಂಗಳೂರಿಗೆ ಬರುತ್ತಿದ್ದ ಮಿನಿಲಾರಿಗೆ ಘನ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಂಪುಹೊಳೆಯಲ್ಲಿ ಅಪಘಾತ: ಇಬ್ಬರು ಮೃತ್ಯು Read More »

ಶಾಲಾ ಬಸ್ – ಕಾರು ಢಿಕ್ಕಿ!

ಪುತ್ತೂರು: ಶಾಲಾ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ ಘಟನೆ ಸವಣೂರು ಸಮೀಪದ ಚಾಪಲದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಖಾಸಾಗಿ ವಿದ್ಯಾಸಂಸ್ಥೆಯೊಂದರ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಲಾ ಬಸ್’ಗೆ ಸಣ್ಣ ಪುಟ್ಟ ಹಾನಿಯಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತದಿಂದ ಎರಡೂ ಬದಿಯೂ ಟ್ರಾಫಿಕ್ ಜಾಮ್ ಉಂಟಾಯಿತು. ಬೆಳಿಗ್ಗಿನ ಹೊತ್ತಾಗಿದ್ದರಿಂದ ವಾಹನಗಳ ಸರತಿ ಸಾಲು ದೊಡ್ಡದಾಗಿಯೇ ಬೆಳೆದಿತ್ತು.

ಶಾಲಾ ಬಸ್ – ಕಾರು ಢಿಕ್ಕಿ! Read More »

ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ

ಪುತ್ತೂರು: ಕಾರು ಮತ್ತು ಈಚರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಬಕ ಅಡ್ಯಲಾಯ ದೈವಸ್ಥಾನದ ಎದುರಿನಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಮಣಿಪಾಲ ಮೂಲದವರು ಎನ್ನಲಾಗಿದೆ. ಈಚರ್ ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ Read More »

error: Content is protected !!
Scroll to Top