ಅಪಘಾತ

ದರ್ಬೆ: ಬೈಕುಗಳೆರಡು ಮುಖಾಮುಖಿ ಢಿಕ್ಕಿ

ಪುತ್ತೂರು: ಇಲ್ಲಿನ ದರ್ಬೆ ಬೈಪಾಸ್ ಜಂಕ್ಷನ್ ಬಳಿ ಬೈಕ್’ಗಳೆರಡು ಮುಖಾಮುಖಿ ಢಿಕ್ಕಿಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರರಿಬ್ಬರೂ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಗಾಯಾಳುಗಳನ್ನು ಉಪಚರಿಸಿದರು.

ದರ್ಬೆ: ಬೈಕುಗಳೆರಡು ಮುಖಾಮುಖಿ ಢಿಕ್ಕಿ Read More »

ಪಾಲ್ತಾಡಿ ಬಳಿ ಮದುವೆ ಟೆಂಪೋ ಪಲ್ಟಿ!!

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಮಾರ್ಗವಾಗಿ ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಪಾಲ್ತಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆದಿತ್ಯವಾರ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಟೆಂಪೋದಲ್ಲಿ ಹೆಚ್ಚಿನವರು ಮಹಿಳೆಯರಿದ್ದರು. ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪಾಲ್ತಾಡಿ ಬಳಿ ಮದುವೆ ಟೆಂಪೋ ಪಲ್ಟಿ!! Read More »

ಆಯ ತಪ್ಪಿ ಕೆರೆಗೆ ಬಿದ್ದು ಮೃತ್ಯು!

ಪುತ್ತೂರು: ಕಾಲು ಜಾರಿ ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅಕ್ಟೋಬರ್ 21ರಂದು ಅರಿಯಡ್ಕ ಗ್ರಾಮದ ಬೈರಮೂಲೆ ಎಂಬಲ್ಲಿ ನಡೆದಿದೆ. ಮೃತರನ್ನು ಬೈರಮೂಲೆ ಕನ್ನ ಪಾಟಾಳಿ ಅವರ ಪುತ್ರ ಶಿವಪ್ರಸಾದ್ (40 ವ.) ಎಂದು ಗುರುತಿಸಲಾಗಿದೆ. ಕುರಿಂಜ ಹೊಸಮನೆಯಲ್ಲಿ ಚಂದ್ರಶೇಖರ ಮಣಿಯಾಣಿ ಎಂಬವರ ತೋಟದಲ್ಲಿ ಮಿಷನ್ ಮೂಲಕ ಹುಲ್ಲು ತೆಗೆಯುತ್ತಿದ್ದರು. ಕೈಕಾಲು ತೊಳೆಯಲು ಕೆರೆಗೆ ಇಳಿದಿದ್ದು, ಆಯ ತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರಬೇಕು ಎಂದು ಹೇಳಲಾಗಿದೆ. ಪುತ್ತೂರು ಅಗ್ನಿ ಶಾಮಕ ದಳದವರು ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಗ್ರಾಮ

ಆಯ ತಪ್ಪಿ ಕೆರೆಗೆ ಬಿದ್ದು ಮೃತ್ಯು! Read More »

ಜೆಸಿಬಿ ಹೊತ್ತ ಟಿಪ್ಪರ್ – ಟೆಂಪೋ ಟ್ರಾವೆಲರ್ ಡಿಕ್ಕಿ

ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್ ಲಾರಿ ಹಾಗೂ ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಅ. 21ರಂದು ಬೆಳ್ತಂಗಡಿಯ ಗುರುವಾಯನಕೆರೆ ಬಳಿಯಲ್ಲಿ ನಡೆದಿದೆ. ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್’ಗೆ ಎದುರುಗಡೆಯಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ ವಾಹನವು ಡಿಕ್ಕಿ ಹೊಡೆದಿದೆ. ಘಟನೆಯ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಲಾರಿಯ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಘಟನೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್

ಜೆಸಿಬಿ ಹೊತ್ತ ಟಿಪ್ಪರ್ – ಟೆಂಪೋ ಟ್ರಾವೆಲರ್ ಡಿಕ್ಕಿ Read More »

ಹೊತ್ತಿ ಉರಿದ ಅಕ್ಕಿ ಸಾಗಾಟದ ಲಾರಿ: ಲಕ್ಷಾಂತರ ರೂ. ನಷ್ಟ

ಉಪ್ಪಿನಂಗಡಿ : ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‍ನಲ್ಲಿ ನಡೆದಿದೆ. ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಲಾರಿಗೆ ಬೆಂಕಿ ತಗುಲಿದ ತಕ್ಷಣ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಮೂಟೆಗಳು ಸಂಪೂರ್ಣ

ಹೊತ್ತಿ ಉರಿದ ಅಕ್ಕಿ ಸಾಗಾಟದ ಲಾರಿ: ಲಕ್ಷಾಂತರ ರೂ. ನಷ್ಟ Read More »

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸುರೇಶ್ ಮೃತ್ಯು

ಕಡಬ: ಕಡಬ ಮೂಲಕ ಯುವಕನೋರ್ವ ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ (34) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸುರೇಶ್ ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದು, ಗುರುವಾರ ರಾತ್ರಿ ರೈಲಿನಲ್ಲಿ ಊರಿಗೆ ಬರುತ್ತಿದ್ದರು. ಬರುವ ಮೊದಲು ತನ್ನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದರು. ಇಂದು ಮುಂಜಾನೆ ಮನೆಯವರು ಸುರೇಶ್ ಅವರ ಮೊಬೈಲ್‍ ಗೆ ಕರೆ ಮಾಡಿದಾಗ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ.

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸುರೇಶ್ ಮೃತ್ಯು Read More »

ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ:  ಮಹಿಳೆಗೆ ಗಂಭೀರ ಗಾಯ

ಸುಳ್ಯ: ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಚಕ್ರಕ್ಕೆ ಮಹಿಳೆಯೊಬ್ಬರ ಸೀರೆ ಸೆರಗು ಸುತ್ತಿಕೊಂಡ ಪರಿಣಾಮ ಬೈಕ್‍ನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಇಂದು ನಡೆದಿದೆ. ಎಲಿಮಲೆ ನಿವಾಸಿ ಶಾಂಭವಿ ಘಟನೆಯಿಂದ ಗಂಭೀರ ಗಾಯಗೊಂಡವರು ಬೈಕ್‍ನಲ್ಲಿ ಹಿಂಬದಿ ಕುಳಿತು ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಅವರ ಸೀರೆ ಬೈಕ್‍ ಚಕ್ರಕ್ಕೆ ಸುತ್ತಿಕೊಂಡಿದೆ. ಬೈಕ್‍ನಿಂದ ಬಿದ್ದ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿದೆ.

ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ:  ಮಹಿಳೆಗೆ ಗಂಭೀರ ಗಾಯ Read More »

ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ನಡೆದಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಅಪಘಾತದಿಂದಾಗಿ ಟ್ಯಾಂಕರ್ ನಲ್ಲಿದ್ದ ಆಯಿಲ್ ರಸ್ತೆಯಲ್ಲೆಲ್ಲಾ ಚೆಲ್ಲಿದೆ.

ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ Read More »

ಫುಟ್ ಪಾತ್ ಮೇಲೆರಗಿದ ಕಾರು: ಯುವತಿ ಸಾವು!

ಮಂಗಳೂರು: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ನಡೆದಿದೆ. ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ರೂಪಶ್ರೀ ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ

ಫುಟ್ ಪಾತ್ ಮೇಲೆರಗಿದ ಕಾರು: ಯುವತಿ ಸಾವು! Read More »

ಪಿಕಪ್ ವಾಹನ ಡಿಕ್ಕಿ : ಬಾಲಕ ಮಹಮ್ಮದ್ ರಂಝೀನ್ ಮೃತ್ಯು

ಬೆಳ್ತಂಗಡಿ: ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಬೆಳ್ತಂಗಡಿ ಲಾಯಿಲ ವೃತ್ತದ ಬಳಿ ಸಂಭವಿಸಿದೆ. ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10) ಮೃತಪಟ್ಟ ಬಾಲಕ. ಶಾಲೆಗೆ ರಜೆಯಿದ್ದರಿಂದ ಲಾಯಿಲದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ ಅಂಗಡಿಗೆ ಹೋಗಿ ಲಾಯಿಲ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಬಾಲಕನನ್ನು ಸ್ಥಳೀಯರ ಸಹಕಾರದಿಂದ

ಪಿಕಪ್ ವಾಹನ ಡಿಕ್ಕಿ : ಬಾಲಕ ಮಹಮ್ಮದ್ ರಂಝೀನ್ ಮೃತ್ಯು Read More »

error: Content is protected !!
Scroll to Top