ಅಪಘಾತ

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ

ಬೆಂಗಳೂರು: ನೆಲಮಂಗಲದಲ್ಲಿರುವ ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್‌ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10 ಅಗ್ನಿಶಾಮಕ ವಾಹನ ಬಳಸಿ ರಾತ್ರಿ ಪೂರ್ತಿ […]

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ Read More »

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ

ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಒಂಟಿ ವೃದ್ಧ ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ವೃದ್ಧರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆ ಎಂಬಲ್ಲಿ ನಡೆದಿದೆ. ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (62 ವರ್ಷ) ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ. ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ Read More »

ಅಕ್ರಮ ವಲಸಿಗರ ದೋಣಿ ಮುಳುಗಡೆ : 71 ಮಂದಿ ನಾಪತ್ತೆ

ಲಿಬಿಯಾದಿಂದ ಅಕ್ರಮವಾಗಿ ಯುರೋಪ್‌ಗೆ ಹೋಗಲು ಯತ್ನಿಸಿದಾಗ ದುರಂತ ರೋಮ್ : ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಯತ್ನಿಸುತ್ತಿದ್ದ 100ಕ್ಕೂ ಅಧಿಕ ಅಕ್ರಮ ವಲಸಿಗರ ದೋಣಿ ಮುಳುಗಿದ ದುರಂತ ಘಟನೆ ಇಟಲಿ ಕರಾವಳಿಯಲ್ಲಿ ಸಂಭವಿಸಿದೆ. ದುರಂತದಲ್ಲಿ 71 ವಲಸಿಗರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ ಎದುರಾಗಿದೆ. ಲಿಬಿಯಾದಿಂದ ಯುರೋಪ್‌ಗೆ ಹೊರಟಿದ್ದ ಈ ಬೋಟ್‌ನಲ್ಲಿ ಒಟ್ಟು 105 ಜನರಿದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಈ ಪ್ರಯಾಣವನ್ನು ಮಾಡಲಾಗಿತ್ತು. ಮೆಡಿಟರೇನಿಯನ್ ಸಮುದ್ರದ ಭೀಕರ ಅಲೆಗಳು

ಅಕ್ರಮ ವಲಸಿಗರ ದೋಣಿ ಮುಳುಗಡೆ : 71 ಮಂದಿ ನಾಪತ್ತೆ Read More »

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು

ಔತಣಕೂಟದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ದುರಂತ ನಾಶಿಕ್‌: ಕಾರು ತೆರೆದ ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಶುಕ್ರವಾರ ರಾತ್ರಿ ಮಹಾರಾಷ್ಟ್ರದ ನಾಶಿಕ್‌ನಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಾಶಿಕ್‌ ಜಿಲ್ಲೆಯ ದಿಂಡೋರಿ ಪಟ್ಟಣದ ಶಿವಾಜಿ ನಗರದಲ್ಲಿ ಈ ದಾರುಣ ಅಪಘಾತ ಸಂಭವಿಸಿದೆ. ಔತಣಕೂಟದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಶಾಲವಾದ ತೆರೆದ ಬಾವಿಗೆ ಬಿದ್ದಿದೆ. ಮೃತರೆಲ್ಲ ಒಂದೇ ಕುಟುಂಬದ ಸದಸ್ಯರು ಎನ್ನಲಾಗಿದೆ. ಮಕ್ಕಳಲ್ಲಿ ಐವರು

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು Read More »

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್‌ ಅಂಡ್‌ ರನ್‌ ಪ್ರಕರಣವೆಂದು

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ Read More »

ಪಿಕಪ್‌ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು

ಬಂಟ್ವಾಳ: ಬೊಲೆರೊ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 75ರ ಕೈಕಂಬದ ಶಾಂತಿ ಅಂಗಡಿ ಎಂಬಲ್ಲಿ ನಡೆದಿದೆ. ಮಗನ ಹೊಸ ಸೈಕಲ್‌ಗೆ ಗಾಳಿ ಹಾಕಿಸಲು ಹೋಗುತ್ತಿದ್ದ ವ್ಯಕ್ತಿಗೆ ಬೊಲೆರೊ ಡಿಕ್ಕಿ ಹೊಡೆದಿದೆ. ಮೃತರನ್ನು ಶಾಂತಿ ಅಂಗಡಿ ನಿವಾಸಿ ಗಾಡ್ವಿನ್ ಪಿಂಟೊ (49) ಎಂದು ಗುರುತಿಸಲಾಗಿದೆ. ಗಾಡ್ವಿನ್ ಅವರು ಮಂಗಳವಾರವಷ್ಟೇ ತನ್ನ ಮಕ್ಕಳಿಗೆ ಹೊಸ ಸೈಕಲ್ ತಂದಿದ್ದರು. ಸೈಕಲ್ ಟೈರ್‌ನಲ್ಲಿ ಗಾಳಿ ಇಲ್ಲದ ಕಾರಣ ಬುಧವಾರ ಸಮೀಪದ ಸೈಕಲ್

ಪಿಕಪ್‌ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು Read More »

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ ಸಮೀಪ ಮಾರಿಪಳ್ಳದಲ್ಲಿ ತಡರಾತ್ರಿ ಸಂಭವಿಸಿದ ಅಪಘಾತ ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬುಧವಾರ ರಾತ್ರಿ ಸುಮಾರು 12.45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಮಾ.31ರಂದು ಬೆಳಗ್ಗೆ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಗೆ ಸಂಬಂಧಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸಿದ್ದು ನಿರ್ವಾಹಕ ಕಾಶಿನಾಥ್ ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ಸಹೋದರಿಯರಾದ

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌ Read More »

ಮೂಡುಬಿದಿರೆ : ಅಪಘಾತಕ್ಕೆ ತಾಯಿ-ಮಗ ಬಲಿ

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್‌ ಮೂಡುಬಿದಿರೆ : ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ದಾರುಣ ಘಟನೆ ಮೂಡುಬಿದಿರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ, ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ

ಮೂಡುಬಿದಿರೆ : ಅಪಘಾತಕ್ಕೆ ತಾಯಿ-ಮಗ ಬಲಿ Read More »

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು

ಚೈತ್ರ ಮಾಸದ ಕೊನೆಯ ಮಂಗಳವಾರದ ಪೂಜೆಗೆ ಸೇರಿದ್ದ ಭಕ್ತರು ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ಮಾತಾ ಮಂದಿರದಲ್ಲಿ ಇಂದು ಭೀಕರ ಕಾಲ್ತುಳಿತಸಂಭವಿಸಿ 8 ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಹಿಳೆಯರಾಗಿದ್ದಾರೆ. ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಇಂದು ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ, ದೇವಾಲಯದಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಭಾರಿ ಸಂಖ್ಯೆಯಲ್ಲಿ ಜನರಿದ್ದ ಕಾರಣ ನೂಕುನುಗ್ಗಲು

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು Read More »

error: Content is protected !!
Scroll to Top