ಅಪಘಾತ

ಮರ ಕಡಿಯುವ ವೇಳೆ ಗೆಲ್ಲು ಬಡಿದು ಮೃತ್ಯು | ತಡವಾಗಿ ಬೆಳಕಿಗೆ ಬಂದ ಪ್ರಕರಣ

ಕುಂಬ್ರ: ಮನೆ ಹಿತ್ತಲಿನ ಮರ ಕಡಿಯುವ ವೇಳೆ ಮರದ ಗೆಲ್ಲು ತಲೆಗೆ ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದರ್ಬೆತ್ತಡ್ಕದಲ್ಲಿ ಬುಧವಾರ ಸಂಜೆ ನಡೆದಿದೆ. ದರ್ಬೆತ್ತಡ್ಕದ ಗುರುಪ್ರಸಾದ್ ಮೃತಪಟ್ಟವರು. ಬುಧವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ಮರ ಕಡಿಯುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಮರ ಕಡಿಯುವ ವೇಳೆ ಗೆಲ್ಲು ಬಡಿದು ಮೃತ್ಯು | ತಡವಾಗಿ ಬೆಳಕಿಗೆ ಬಂದ ಪ್ರಕರಣ Read More »

ಆರ್ ಎಸ್‍ ಎಸ್‍ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ

ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರೊಬ್ಬರು ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಪ್ರಸ್ತುತ ಹಿಂದೂ ಜಾಗರಣಾ ವೇದಿಕೆ ವರ್ತೂರು ಭಾಗ ದೊಮ್ಮಸಂದ್ರ ನಗರ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಚಂದ್ರಶೇಖರ್ (48) ಮೃತಪಟ್ಟವರು. ಚಂದಾಪುರ ದೊಮ್ಮಸಂದ್ರ ರಸ್ತೆಯ ಕಗ್ಗಲೀಪುರ ಗೇಟ್ ಬಳಿ ನಡೆದ ರಸ್ತೆ ಅಪಘಾತ ದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುತ್ತಾರೆ, ಮೃತರು ತಾಯಿ ಪತ್ನಿ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಆರ್ ಎಸ್‍ ಎಸ್‍ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ Read More »

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ

ಮುಂಬಯಿ: ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್ನಲ್ಲಿ ಸಂಭವಿಸಿದೆ.ಆರೋಪಿ ಮನೋಜ್ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಲಿವ್ ಇನ್ ಪಾರ್ಟ್ನರ್ ಸಂಗಾತಿಯನ್ನೇ ಬರ್ಬರವಾಗಿ ಸಾಯಿಸಿದ್ದಾನೆ. ಸರಸ್ವತಿ ವೈದ್ಯ (36) ಹತ್ಯೆಯಾಗಿರುವ ಮಹಿಳೆ. ಪೊಲೀಸರು ಬಂದು ಬಾಗಿಲು ತೆರೆದು ಮನೆಯೊಳಗೆ ಹೋದಾಗ ಕೊಳೆತ ಸ್ಥಿತಿಯಲ್ಲಿದ್ದ ದೇಹದ ತುಂಡುಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿದ್ದವು. ಕೊಲೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಇದು ಹೊರಜಗತ್ತಿಗೆ ತಿಳಿದುಬಂದಿದೆ. ಮನೋಜ್

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ Read More »

ಖಾಸಗಿ ಬಸ್- ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಮೂಡಬಿದಿರೆ: ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ಸಮೀಪದ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಎಡಪದವು ರಾಜೇಶ್ವರಿ ಜ್ಯುವೆಲರ್ಸ್‌ ಚಂದ್ರಹಾಸ ಆಚಾರ್ಯ ಅವರ ಪುತ್ರ ,ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ (19) ಗುರುತಿಸಲಾಗಿದೆ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ

ಖಾಸಗಿ ಬಸ್- ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ ಗೋಪಾಲ ಕೃಷ್ಣ ರವರನ್ನು

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದ ಭೀಕರತೆ ಪರಿಶೀಲನೆ ಮಾಡಿ, ಘಟನೆಯ ಬಗ್ಗೆ ಮಾಹಿತಿ‌ ಪಡೆದುಕೊಂಡರು. ಇನ್ನೊಂದೆಡೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಗಾಯಾಳುಗಳ ಜೀವ ಉಳಿಸಲು ರಕ್ತದ ಅವಶ್ಯಕತೆಯೂ ಹೆಚ್ಚುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಸ್ಪಂದನೆ ವ್ಯಕ್ತವಾಗಿದ್ದು, ರಕ್ತದಾನ ಮಾಡಲು ಜನರು ಸಾಲಿನಲ್ಲಿ ಜನರು ನಿಂತಿರುವ ದೃಶ್ಯವೂ ಕಂಡುಬಂದಿದೆ.

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು Read More »

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲುಗಳೆರಡು ಮುಖಾಮುಖಿ ಡಿಕ್ಕಿ‌ ಹೊಡೆದಿದ್ದು, ಸಾವು – ನೋವಿನ ಪ್ರಮಾಣ ಹೆಚ್ಚಿದೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು Read More »

ಮನೆಯ ಮೇಲ್ಛಾವಣಿಯಿಂದ ಬಿದ್ದು ಆಲಂಕಾರಿನ ವ್ಯಕ್ತಿ ಮೃತ್ಯು

ಸುಬ್ರಹ್ಮಣ್ಯ  : ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣದಲ್ಲಿ  ಶುಕ್ರವಾರ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯ  ಒಂದು ಪಾರ್ಶ್ವ ಕುಸಿದ ಪರಿಣಾಮ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಹರಿಪ್ರಸಾದ್ ಅವರನ್ನು ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು  ಮೃತಪಟ್ಟಿದ್ದರು ಎನ್ನಲಾಗಿದೆ.

ಮನೆಯ ಮೇಲ್ಛಾವಣಿಯಿಂದ ಬಿದ್ದು ಆಲಂಕಾರಿನ ವ್ಯಕ್ತಿ ಮೃತ್ಯು Read More »

ಗುಂಡ್ಯ ಸಮೀಪ ಬೆಂಗಳೂರು ಬಸ್ಸಿಗೆ ತಿವಿದ ಕಾಡಾನೆ 

ಕಡಬ: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ

ಗುಂಡ್ಯ ಸಮೀಪ ಬೆಂಗಳೂರು ಬಸ್ಸಿಗೆ ತಿವಿದ ಕಾಡಾನೆ  Read More »

ವಿದ್ಯುತ್ ಆಘಾತ: ಲೈನ್ ಮ್ಯಾನ್ ಮೃತ್ಯು

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್  ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ  ಘಟನೆ ಗುರುವಾರದಂದು ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್ ಮ್ಯಾನ್  ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿತ್ತು.

ವಿದ್ಯುತ್ ಆಘಾತ: ಲೈನ್ ಮ್ಯಾನ್ ಮೃತ್ಯು Read More »

error: Content is protected !!
Scroll to Top