ಮೀನುಗಾರಿಕೆ ಬೋಟ್ ಬೆಂಕಿಗಾಹುತಿ
ಮಂಗಳೂರು: ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ಸಮುದ್ರದ ಮಧ್ಯ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಸೋಮವಾರ ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು […]
ಮೀನುಗಾರಿಕೆ ಬೋಟ್ ಬೆಂಕಿಗಾಹುತಿ Read More »










