ಕೊಂಬೆಟ್ಟು ಬಳಿ ಧರೆಗುರುಳಿದ ಮರ : ವಿದ್ಯುತ್ ಕಂಬಗಳಿಗೆ ಹಾನಿ
ಪುತ್ತೂರು: ಇಂದು ಮುಂಜಾನೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಬಳಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆದ ಘಟನೆ ನಡೆದಿದೆ. ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿದೆ. ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ವೀಕ್ಷಿಸಿ ವಿದ್ಯುತ್ ಕಂಬಗಳನ್ನು ಸರಿಪಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಸೂಚನೆ ನೀಡಿದರು.
ಕೊಂಬೆಟ್ಟು ಬಳಿ ಧರೆಗುರುಳಿದ ಮರ : ವಿದ್ಯುತ್ ಕಂಬಗಳಿಗೆ ಹಾನಿ Read More »










