ನಿಧನ

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ

ಪುತ್ತೂರು: ಅಶೋಕ್‌ ಕುಮಾರ್‌ ಸೊರಕೆ (73)  ಇಂದು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಯ ಹಿರಿಯ ಪುತ್ರನಾಗಿರುವ ಅಶೋಕ್‌ ಕುಮಾರ್‌ ಸೊರಕೆ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮತ್ತು ಮುಂಡೂರು ಸಿ ಎ ಬ್ಯಾಂಕ್ ಅಧ್ಯಕ್ಷರಾಗಿರುವ ಸುರೇಶ್‌ ಕುಮಾರ್‌ ಸೊರಕೆ, ಶರತ್‌ ಮತ್ತು ಶಶಿಕಲಾ ಅವರ ಸಹೋದರರಾಗಿದ್ದಾರೆ. ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅಶೋಕ್‌ ಕುಮಾರ್‌ ಸೊರಕೆ ನಿವೃತ್ತಿ ಬಳಿಕ ಸೊರಕೆಯಲ್ಲಿ ನೆಲೆಸಿದ್ದರು ಮೃತರು ಪತ್ನಿ, […]

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ Read More »

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ

ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಮಗಳು, ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ Read More »

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು: ಉದ್ಯಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್‍ ಕುಮಾರ್‍ ಪುತ್ತಿಲ ಅವರ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರಲ್ಲದೆ, ದುಬೈ ಮಸ್ಮತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಕಳೆದ

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ Read More »

ಪುತ್ತೂರು ಭರತ್ ವಿಧಿವಶ

ಪುತ್ತೂರು: ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ ಮತಾವು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಭರತ್ ಅವರಿಗೆ ಸುಮಾರು 46 ವರ್ಷ ವಯಸ್ಸಾಗಿದ್ದು ಬೆಂಗಳೂರಿನಲ್ಲಿ ಸಿವಿಲ್ ಬಿಲ್ದರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು. ಮೇಲೊಬ್ಬ ಮಾಯಾವಿ – ಪುತ್ತೂರು ಭರತ್ ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ

ಪುತ್ತೂರು ಭರತ್ ವಿಧಿವಶ Read More »

ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಮೃತ್ಯು

ಒಂದೇ ಕುಟುಂಬದ 6 ಮಂದಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಗುಜರಾತ್​ನ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ

ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಮೃತ್ಯು Read More »

ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ

ಸುಳ್ಯ; ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ ಹೊಂದಿರುವ ಘಟನೆ ಕನಕಮಜಲಿನಲ್ಲಿ ನಡೆದಿದೆ. ಕನಕಮಜಲು ಗ್ರಾಮದ ನೆಡಿಲು ಸೋಮಪ್ಪ ಗೌಡರು ಏ.17 ರಂದು ನಿಧನ ಹೊಂದಿದ್ದರು. ಹನ್ನೊಂದನೇ ದಿನದ ಕಾರ್ಯಕ್ರಮ ಏ. 28 ರಂದು ನಡೆಯುತ್ತಿತ್ತು. ಕಾರ್ಯಕ್ರಮ ನಡೆಯುತ್ತಿರುವಾಗಲೇ ಮಧ್ಯಾಹ್ನದ ವೇಳೆಗೆ ಪತ್ನಿ ಸುಬ್ಬಕ್ಕೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ, ಕೂಡಲೇ ಸುಳ್ಯ ಆಸ್ಪತ್ರೆಗೆ ಕರೆತಂದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ Read More »

ಕೆಎಸ್‌ಆರ್‌ಟಿಸಿ- ಬೈಕ್‍ ಡಿಕ್ಕಿ | ಬೈಕ್‍ ಸವಾರ ಮೃತ್ಯು

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಎಸ್‌ಆರ್‌ಟಿಸಿ- ಬೈಕ್‍ ಡಿಕ್ಕಿ | ಬೈಕ್‍ ಸವಾರ ಮೃತ್ಯು Read More »

ಕಾಡಾನೆ ದಾಳಿಯಿಂದ ಮಹಿಳೆ ಮೃತ್ಯು

ಪುತ್ತೂರು: ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಕಾಡಾನೆ ದಾಳಿಯಿಂದ ಮಹಿಳೆ ಮೃತ್ಯು Read More »

ಬರಗಾಲ ಸಿದ್ಧನಾಥ ಆಶ್ರಮದ ಶ್ರೀ ಮಾಧವಾನಂದ ಮಹಾರಾಜರು ಲಿಂಗೈಕ್ಯ

ಪುತ್ತೂರು: ಬರಗಾಲ ಸಿದ್ಧನಾಥ ಆಶ್ರಮ ಬ್ರಹ್ಮಗಡ್ಡಿ ಮಠ, ಮುಸ್ಟೂರು, ಕಾರಟಗಿ ತಾ. ಕೊಪ್ಪಳ ಜಿಲ್ಲೆಯ ಶ್ರೀ ಮಾಧವಾನಂದ ಮಹಾರಾಜರು ಇಂದು ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಬಳ್ಪ ಗ್ರಾಮದ ಎಣ್ಣೆಮಜಲು ಮನೆಯವರಾಗಿದ್ದು, ಸುಮಾರು 45  ವರ್ಷಗಳ ಹಿಂದೆ ಕುಟುಂಬ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಪ್ರಸ್ತುತ ಬರಗಾಲ ಸಿದ್ಧನಾಥ ಆಶ್ರಮ ಬ್ರಹ್ಮಗಡ್ಡಿ ಮಠ, ಮುಸ್ಟೂರು, ಕಾರಟಗಿ ತಾ. ಕೊಪ್ಪಳ ಜಿಲ್ಲೆ ಇಲ್ಲಿ ಸ್ವಾಮೀಜಿ ಯಾಗಿ, ಮಠದ ಮಹಾರಾಜರಾಗಿ ಸಾವಿರಾರು ಭಕ್ತರನ್ನು ಹೊಂದಿದ್ದರು. ಅವರ ಅಂತ್ಯಕ್ರಿಯೆ ನಾಳೆ (ಏ.28) ಮಧ್ಯಾಹ್ನ 11.20 ಕ್ಕೆ

ಬರಗಾಲ ಸಿದ್ಧನಾಥ ಆಶ್ರಮದ ಶ್ರೀ ಮಾಧವಾನಂದ ಮಹಾರಾಜರು ಲಿಂಗೈಕ್ಯ Read More »

ಇಂದು ವಿಜ್ಞಾನಿ ಡಾ.ಕಸ್ತೂರಿ ರಂಗನ್‌ ಅಂತ್ಯಕ್ರಿಯೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ.ಕಸ್ತೂರಿ ರಂಗನ್ ನಿನ್ನೆ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 12 ರವರೆಗೆ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಜನರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು ಎಂದು ಇಸ್ರೊ ತಿಳಿಸಿದೆ. ಡಾ. ಕಸ್ತೂರಿರಂಗನ್ ಅವರ ಹಿರಿಯ ಮಗ ಸಂಜಯ್ ರಂಜನ್

ಇಂದು ವಿಜ್ಞಾನಿ ಡಾ.ಕಸ್ತೂರಿ ರಂಗನ್‌ ಅಂತ್ಯಕ್ರಿಯೆ Read More »

error: Content is protected !!
Scroll to Top