ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ
ಪುತ್ತೂರು: ಮೊಬೈಲ್ ಮಳಿಗೆ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಇಂದು ನಿಧನರಾದರು. ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಮೃತಪಟ್ಟವರು. ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಯಂಗ್ ಬ್ರಿಗೆಡ್ ನಲ್ಲಿ ತೊಡಗಿಸಿಕೊಂಡಿದ್ದರು. ಕ್ರಿಕೆಟ್ ಆಟಗಾರರಾಗಿದ್ದ ಅವರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಮೃತರು ಪತ್ನಿ, ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ Read More »