ನಿಧನ

ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ

ಪುತ್ತೂರು: ಶಾಲಾ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಕಡಬ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತಪಟ್ಟ ಬಾಲಕ ಆಕಾಶ್‍ ತಂದೆ ರಿಕ್ಷಾ ಚಾಲಕ ಅನಿಲ್ ಎಂಬವರು ಕೆಲಸ ಸಮಯಗಳ ಹಿಂದೆ ನಿಧನರಾಗಿದ್ದರು. ಬಳಿಕ ಆಕಾಶ್‍ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ Read More »

ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ  ಪತಿ ರಘು ಡಿ. ಹೃದಯಾಘಾತದಿಂದ ನಿಧನ

ಪುತ್ತೂರು: ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ ಅವರ ಪತಿ ರಘು ಡಿ. (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ವರಲಕ್ಷ್ಮಿ ಅವರು ಮಂಡ್ಯ ಮೂಲದವರಾಗಿದ್ದು, ಅವರ ಪತಿ ರಘು ಅವರು ಮಂಡ್ಯದಲ್ಲಿ ಫೋಟೋಗ್ರಫಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಪುತ್ತೂರಿನ ಬನ್ನೂರಿನಲ್ಲಿರುವ ಮನೆಯಲ್ಲಿ ಎದೆನೋವು ಕಾಣಿಸಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ  ಪತಿ ರಘು ಡಿ. ಹೃದಯಾಘಾತದಿಂದ ನಿಧನ Read More »

ಎರಡನೇ ಹೆರಿಗೆ ವೇಳೆ ಮಹಿಳೆ ಮೃತ್ಯು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತಪಟ್ಟವರು. ಗಾಯತ್ರಿ ಎರಡನೇ ಹೆರಿಗೆಗಾಗಿ ಏ.3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏ.4 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ . ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು ಇದೀಗ ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

ಎರಡನೇ ಹೆರಿಗೆ ವೇಳೆ ಮಹಿಳೆ ಮೃತ್ಯು Read More »

ಮಹಿಳೆ ನೇಣು ಬಿಗಿದು ಆತ್ಮಹತ್ಯೆ  !

ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ. ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಶೀಲಾ ಅವರ ಪತಿ ಮೂರು ತಿಂಗಳ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಸುಶೀಲಾ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು, ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ನೇಣು ಬಿಗಿದು ಆತ್ಮಹತ್ಯೆ  ! Read More »

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು !

ಸುಳ್ಯ: ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ. ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟವರು. ಹೊಟ್ಟೆನೋವಿನಿಂದ ಬಳಲಿದ್ದ ಅವರನ್ನು ಕಾಣಿಯೂರು ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತರು ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್‍ ಬೂತ್ ಅಧ್ಯಕ್ಷರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ! Read More »

ಕುಂಜಾರಮ್ಮ ಕುಕ್ಕುಂದೂರು ನಿಧನ

ಸುಳ್ಯ: ಕುಂಜಾರಮ್ಮ ಕುಕ್ಕುಂದೂರು (79) ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ನಿಧನರಾಗಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಕುಂಜಾರಮ್ಮ ಕುಕ್ಕುಂದೂರು ನಿಧನ Read More »

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು !

ಬಂಟ್ವಾಳ: ಬಾಲಕನೋರ್ವ ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಎಂಬವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕ. ಆದಿಶ್ ತನ್ನ ಮನೆಯ ಮಹಡಿಯಲ್ಲಿ ಮಲಗಿದ್ದು, ಮುಂಜಾನೆ ಎದ್ದು ಮೊಬೈಲ್‍ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡಿದಾಗ ಮಹಡಿಯಿಂದ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು ! Read More »

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ (60) ಬುಧವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಅವರು ನಿಧನರಾದರು. ಹೃದಯಾಘಾತದಿಂದ ನಿಧನರಾಗಿರಬೇಕೆಂದು ಶಂಕಿಸಲಾಗಿದೆ. 1987 ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾಗಿ ಗೋಪಿನಾಥ ಶೆಟ್ಟಿ ನೇಮಕಗೊಂಡಿದ್ದು, ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಪಾಲಿಟೆಕ್ನಿಕ್ ನ್ನು ಉತ್ತಮ ಶಿಕ್ಷಣ ಸಂಸ್ಥೆಯಾಗಿ

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ Read More »

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ (93) ಇಂದು ಬೆಳಿಗ್ಗೆ ವಯೋ ಸಹಜವಾಗಿ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಆಗಿದ್ದರು. ವಿಶ್ವ ಹಿಂದೂ ಪರಿಷತ್‍ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಮೃತರು ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ Read More »

ಹೃದಯಾಘಾತದಿಂದ ಯುವಕ ಉದಯ ಮೃತ್ಯು !

ಬಂಟ್ವಾಳ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಉದಯ (36) ಮೃತಪಟ್ಟ ಯುವಕ ಉದಯ ಅವರು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಗ್ರಂಥಪಾಲಕನಾಗಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಭಾನುವಾರ ರಾತ್ರಿ ಊಟ ಮಾಡಿ ಮಲಗಿದವರನ್ನು ಇಂದು ಬೆಳಿಗ್ಗೆ ಮನೆಯರು ಎಬ್ಬಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಆಸ್ಪತ್ರೆಗೆ ಕರೆತಂದರು. ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೃದಯಾಘಾತದಿಂದ ಯುವಕ ಉದಯ ಮೃತ್ಯು ! Read More »

error: Content is protected !!
Scroll to Top