ಹಿರಿಯ ಲೇಖಕ, ಪತ್ರಕರ್ತ ನಾಗರಾಜ ಪೂವಣಿ ನಿಧನ
ಬೆಳ್ತಂಗಡಿ: ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (‘ನಾ’ವುಜಿರೆ) (80) ಇಂದು ಸ್ವಗೃಹದಲ್ಲಿ ನಿಧನರಾದರು. ಅಲ್ಪಕಾಲದ ಅಸೌಖ್ಯದಿಂದ ಅವರು ಇಂದು ಮುಂಜಾನೆ ನಿಧನರಾದರು. ತಾಲೂಕಿನ ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉದಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಶಿಕ್ಷಕರಾಗಿ ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಉತ್ತಮ ಪಾಂಡಿತ್ಯ ಹೊಂದಿದ್ದರು. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ತಾಲೂಕು ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. […]
ಹಿರಿಯ ಲೇಖಕ, ಪತ್ರಕರ್ತ ನಾಗರಾಜ ಪೂವಣಿ ನಿಧನ Read More »