ಕೇಪು ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ನಿಧನ
ವಿಟ್ಲ: ಕೇಪು ಗ್ರಾಮದ ಆಲಂಗಾರು ನಿವಾಸಿ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್(66) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇಪು ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾಗಿದ್ದ ಅವರು ಪಡಿಬಾಗಿಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷರಾಗಿದ್ದರು. ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಸ್ಥಾಪಕ ಅಧ್ಯಕ್ಷರಾಗಿ, ಜನಸಂಘ ಸ್ವಯಂಸೇವಕರಾಗಿ, ಕೇಪು ಗ್ರಾಮದಲ್ಲಿ ಬಿಜೆಪಿಯನ್ನು ಸಂಘಟಿಸಿ, ಕೇಪು ಗ್ರಾಮ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಸೀಮೆ […]