ಯುವಕ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.
ಯುವಕ ನೇಣು ಬಿಗಿದು ಆತ್ಮಹತ್ಯೆ Read More »
ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.
ಯುವಕ ನೇಣು ಬಿಗಿದು ಆತ್ಮಹತ್ಯೆ Read More »
ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸೌಭಾಗ್ಯ(31) ಎಂದು ಗುರುತಿಸಲಾಗಿದೆ. ಇವರ ಪುಟಾಣಿ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಎರಡು ವರ್ಷದ ಹಿಂದೆ ಇವರು ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಆ ಬಳಿಕ ತೀವ್ರ ದುಃಖದಿಂದ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಸೌಭಾಗ್ಯ ಅವರು ತಮ್ಮ ಕುಟುಂಬದ ನಿರ್ವಹಣೆಗಾಗಿ ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ಡೆತ್ ನೋಟ್
ಪತಿಯ ಅಗಲಿಕೆಯಿಂದ ನೊಂದು ನೇಣಿಗೆ ಶರಣಾದ ಮಹಿಳೆ Read More »
ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯಾವುದೋ ಕಾರಣಕ್ಕೆ ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ಗೋಪಾಲ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »
300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ.
ಹಿರಿಯ ಹಾಸ್ಯನಟ ಉಮೇಶ್ ನಿಧನ Read More »
ಶಿವಮೊಗ್ಗ: ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ಭದ್ರಾ ಬಲದಂಡೆ ನಾಲೆಗೆ ಹಾರಿದ ಘಟನೆ ನಡೆದಿದೆ. ಗಂಡ ಮತ್ತು ಆತನ ಮನೆಯವರಿಂದ ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದ ಮಹಿಳೆ ನಾಲೆಗೆ ಹಾರಿರುವುದಾಗಿದೆ. ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿದ ಮಹಿಳೆ ಪತ್ತೆಯಾಗಿಲ್ಲ. ನಾಲೆಗೆ ಹಾರಿದ ಮಹಿಳೆಯನ್ನು ಲತಾ ಎಂದು ಗುರುತಿಸಲಾಗಿದೆ. ಈ ವಿಷಯ ತಿಳಿದು ಪತಿ ಗುರುರಾಜ್ ತನ್ನ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡಿದ್ದಾನೆ. ಗುರುರಾಜ್ ಸರ್ಕಾರಿ ಕೆಲಸದಲ್ಲಿದ್ದ. ಆತನಿಗೆ ಮದುವೆಯ ಸಮಯದಲ್ಲಿ ಭರ್ಜರಿ ವರದಕ್ಷಿಣೆ
ಪತಿ ಮತ್ತು ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳ: ನಾಲೆಗೆ ಹಾರಿದ ಮಹಿಳೆ Read More »
ಪುತ್ತೂರು: ಪಡ್ನೂರು ಪಂಜಿಗುಡ್ಡೆಯ ನಿವಾಸಿ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೆನರಾ ಬ್ಯಾಂಕಿನ ಪುತ್ತೂರು ಶಾಖೆಯ ಸಿಬ್ಬಂದಿ ತನಿಯಪ್ಪ ನಾಯ್ಕ್ ಎಂಬವರ ಪುತ್ರ ಗುರುರಾಜ್ (22) ಎಂಬವರೇ ಮೃತ ದುರ್ದೈವಿ. ಗುರುರಾಜ್ ಬೆಂಗಳೂರಿನ ಕಿಸ್ಕೋ ಕಂಪನಿಯಲ್ಲಿ ಎ.ಸಿ. ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪಿ.ಜಿ. ಯಲ್ಲಿ ವಾಸವಿದ್ದರು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅವರು ಕೆಲಸಕ್ಕೆ ಹೊರಡುವ ಮೊದಲು ಬಾತ್ ರೂಂಗೆ ಹೋಗಿದ್ದಾರೆ. ಅದೇ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಆದರೆ ರೂಮ್ನಲ್ಲಿ ಯಾರೂ ಇರದೇ
ಹೃದಯಾಘಾತದಿಂದ ಪುತ್ತೂರಿನ ಯುವಕ ಬೆಂಗಳೂರಿನಲ್ಲಿ ನಿಧನ Read More »
ಕಡಬ: ಪತ್ನಿ ತನ್ನ ಗೆಳೆಯನ ಜೊತೆ ಮೊಬೈಲ್ ಸಂಪರ್ಕದಲ್ಲಿ ಇದ್ದಾಳೆಂದು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದ ಗ್ಯಾರೇಜ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕುಟ್ರುಪ್ಪಾಡಿ ನಿವಾಸಿ ರಾಕೇಶ್(36) ಎಂಬವರೇ ಮೃತ ದುರ್ದೈವಿ. ರಾಕೇಶ್ ಅವರು ಕಳಾರದಲ್ಲಿ ದ್ವಿಚಕ್ರ ವಾಹನಗಳ ಗ್ಯಾರೇಜ್ ಹೊಂದಿದ್ದರು. ರಾಕೇಶ್ ಅವರ ಪತ್ನಿಯ ಜೊತೆಗೆ ಅವರ ಸ್ನೇಹಿತ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದ ವಿಷಯ ಅವರ ಗಮನಕ್ಕೆ ಬಂದಿತ್ತು. ಈ ವಿಚಾರವಾಗಿ ತೀವ್ರವಾಗಿ ನೊಂದಿದ್ದ ಅವರು ಅಮಲು ಪದಾರ್ಥದ ಜೊತೆಗೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ
ಪತ್ನಿ ಜೊತೆ ಮೊಬೈಲ್ ಸಂಪರ್ಕದಲ್ಲಿದ್ದ ಸ್ನೇಹಿತ: ಗ್ಯಾರೇಜ್ ಮಾಲೀಕ ಆತ್ಮಹತ್ಯೆ Read More »
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 65 ವರ್ಷದ ಮಹಿಳೆಯ ಮೃತದೇಹ ಇದಾಗಿದೆ. ಇಂದು ಬೆಳಗ್ಗೆ ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಅದನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿರುವುದಾಗಿ ಬಂಟ್ವಾಳ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ Read More »
ಕಡಬ: ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿಯೊಬ್ಬರು ಮರದ ಮೇಲೆಯೇ ಮೃತಪಟ್ಟ ಘಟನೆ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ. ಮೃತದೇಹವನ್ನು ಸ್ಥಳೀಯರ ಸಹಕಾರದಿಂದ ಮರದಿಂದ ಕೆಳಕ್ಕೆ ಇಳಿಸಲಾಯಿತು ಎಂದು ತಿಳಿದು ಬಂದಿದೆ.
ಶೇಂದಿ ಇಳಿಸಲು ಹೋದ ವ್ಯಕ್ತಿ ಮರದಲ್ಲೇ ಸಾವು Read More »
ಬೆಂಗಳೂರು: ಬಿಬಿಎಂ ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಆಂಧ್ರ ಮೂಲದ ದೇವಿಶ್ರೀ (21) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪ್ರೇಮ್ವರ್ಧನ್ ಎಂದು ಗುರುತಿಸಲಾಗಿದೆ. ದೇವಿಶ್ರೀಯು ಪ್ರೇಮ್ಶೇಖರ್ ಜೊತೆಗೆ ಮತ್ತೊಬ್ಬ ಯುವತಿಯ ರೂಂಗೆ ತೆರಳಿದ್ದಳು. ಆದರೆ ರಾತ್ರಿಯಾದರೂ ಆಕೆ ಅಲ್ಲಿಂದ ಬಂದಿಲ್ಲ. ಇದರಿಂದ ಆತಂಕಗೊಂಡ ಕುಟುಂಬ ವರ್ಗ ಮತ್ತು ಆಕೆಯ ರೂಂಮೇಟ್ಸ್ ಮಾಹಿತಿ ನೀಡಿದ ನಂತರ ಪ್ರಕರಣ ದಾಖಲು ಮಾಡಲಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ
ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಂದು ಆರೋಪಿ ಪರಾರಿ Read More »