ರಾಜ್ಯ ಕಾನೂನು ವಿವಿ ಅಂತರ್ ಕಾಲೇಜು ಮಟ್ಟದ ಚದುರಂಗ ಸ್ಪರ್ಧೆ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ
ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ವಿಶಿಷ್ಟ ಸಾಧನೆಯನ್ನು ಮಾಡುತ್ತಿದ್ದಾರೆ. ಇದೀಗ ಅದಕ್ಕೆ ಉದಾಹರಣೆ ಎಂಬಂತೆ ಚದರಂಗ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ. ಚಿತ್ರದುರ್ಗದ ಎಸ್ ಜೆ ಎಂ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯ ಆಯೋಜಿಸಿದ ಕರ್ನಾಟಕ ಕಾನೂನು ವಿವಿ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಚದರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳೆಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. […]