ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ನಗರದಲ್ಲಿ ಕೇಂದ್ರೀಯ ಮೆರಿಟೈಮ್ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಅವರಿಗೆ ಮನವಿ ಮಾಡಿದ್ದು, ಇದನ್ನು ಪರಿಶೀಲನೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾಗಿ ತಿಳಿದು ಬಂದಿದೆ. ಮಂಗಳೂರು ವಿಶಾಲವಾದ ಕಡಲ ತೀರ ಹೊಂದಿದ್ದು, ಈ ಭಾಗದಲ್ಲಿ ಮೆರಿಟೈಮ್ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದರಿಂದ ಕಡಲ ಕ್ಷೇತ್ರದ ಬಗ್ಗೆ ಅಧ್ಯಯನ, ಸಂಶೋಧನೆಗೆ ಹೆಚ್ಚು ಅವಕಾಶ ದೊರೆಯಲಿದೆ. ಈ ಭಾಗದಲ್ಲಿ ಪ್ರಮುಖ ಬಂದರುಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಭೌಗೋಳಿಕ ಅನುಕೂಲಗಳನ್ನು […]










