ಆ.14 : ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 14ನೇ ವರ್ಷದ ಸ್ಥಾಪಕರ ದಿನಾಚರಣೆ “ಶೀಂಟೂರು ಸ್ಮೃತಿ-2025”
ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 14ನೇ ವರ್ಷದ ಸ್ಥಾಪಕರ ದಿನಾಚರಣೆ “ಶೀಂಟೂರು ಸ್ಮೃತಿ-2025” ಆ.14 ಗುರುವಾರ ಬೆಳಗ್ಗೆ 10 ಕ್ಕೆ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 13 ವರ್ಷಗಳಿಂದ ಈ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿದ್ದೇವೆ. ಪ್ರತೀ ವರ್ಷ ಆ.14 ರಂದು ದಿ.ಶೀಂಟೂರರ […]










