ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು: ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು. ಆ ನೆಲೆಯಲ್ಲಿ ಯೋಚಿಸುವಾಗ ನಾನಾ ಬಗೆಯ ಸ್ಪರ್ಧೆಗಳ ಅನಿವಾರ್ಯತೆ ಇದೆ. ಮನರಂಜನೆಯ ಮೂಲಕ ನಮ್ಮತನವೆಂಬುದು ವಿದ್ಯಾರ್ಥಿಗಳಲ್ಲಿ ಹಂಚಿಕೆಯಾಗುವುದಕ್ಕೆ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ದ.ಕ. ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸಹಯೋಗದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ […]