ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಡೇಶಿವಾಲಯ ಜಾತ್ರೋತ್ಸವದ ಸಂದರ್ಭದ ಪ್ರಯುಕ್ತ ಏ.13 ಭಾನುವಾರದಂದು ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು, ವಲಯ ಮೇಲ್ವಿಚಾರಕರು, ಸಂಯೋಜಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.