ಸುದ್ದಿ

ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ

ಬೆಳ್ತಂಗಡಿ : ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ ಅಂಗವಾಗಿ ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಅದ್ವಿತಿ ರಾವ್ ಬೆಳ್ತಂಗಡಿ ತಾಲೂಕಿನ ಕನ್ಯಾಡಿ  ಗ್ರಾಮದ ಶ್ರೀಮತಿ ಅಖಿಲಾ ಮತ್ತು ಶ್ರೀ ಅಶ್ವಥ್ ದಂಪತಿ ಪುತ್ರಿಯಾಗಿದ್ದು, ಉಜಿರೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ  ಶಾಲೆಯ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ಇಲ್ಲಿಯ ಭಗವದ್ಗೀತೆ ಪಾಠ ಪಠಣ ತರಗತಿಯ ಆರಂಭದ […]

ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ Read More »

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?

ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲ.ರೂ. ಪರಿಹಾರ ಹೊಸದಿಲ್ಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಕೇಂದ್ರ ಸರ್ಕಾರ ಘೋಷಿಸಿದೆ.ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? Read More »

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು

ನೀರಿನಲ್ಲಿ ಯೋಗನಿದ್ರೆಯಲ್ಲಿರುವಾಗಲೇ ಬಂದ ಮೃತ್ಯು ಚಾಮರಾಜನಗರ: ನುರಿತ ಯೋಗಪಟುವೊಬ್ಬರು ನದಿಯಲ್ಲಿ ಯೋಗ ಮಾಡುತ್ತಿರುವಾಗಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಮೃತ ದುರ್ದೈವಿ. ತೀರ್ಥಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು Read More »

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ

ಅಲ್ಪಸಂಖ್ಯಾತರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂದು ಟೀಕೆ ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಪಾಕಿಸ್ಥಾನ್‌ ಜಿಂದಾಬಾದ್ ಎಂದು ಹೇಳುವವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮೈಸೂರು ಉದಯಗಿರಿ ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ Read More »

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು

ಮಹಾಕುಂಭಮೇಳಕ್ಕೆ ಹೋಗುವ ವಿಶೇಷ ರೈಲು ಹತ್ತಲು ನೂಕುನುಗ್ಗಲು ಉಂಟಾದಾಗ ಸಂಭವಿಸಿದ ದುರಂತ ಹೊಸದಿಲ್ಲಿ: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿ 11 ಜನರಿಗೆ ಗಾಯಗಳಾಗಿದ್ದು, ಅವರನ್ನು ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್​ಪಿಎಫ್ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮೃತರಲ್ಲಿ ಐವರು ಮಕ್ಕಳು, 9 ಮಹಿಳೆಯರು ಸೇರಿದ್ದಾರೆ.ನವದೆಹಲಿ ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾಕುಂಭಮೇಳಕ್ಕೆ ರೈಲ್ವೆ ಇಲಾಖೆ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು Read More »

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ | ಚಾಲಕ ದುರ್ಮರಣ | ಮೂವರು ಮಕ್ಕಳಿಗೆ ಗಾಯ

ಬಂಟ್ವಾಳ : ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೇ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯ ರಾತ್ರಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಅಪಘಾತ ನಡೆದಿದ್ದು, ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟ ಅವಿವಾಹಿತ ಯುವಕ. ಈತನ ಸಂಬಂಧಿಗಳಾದ ತುಷಾರ್, ಭವಿತ್ ಮತ್ತು ಪ್ರದೀಪ್ ಎಂಬವರು ಗಾಯಗೊಂಡ ಮಕ್ಕಳು. ಮೂಡಬಿದಿರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ಮರಳುವ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ | ಚಾಲಕ ದುರ್ಮರಣ | ಮೂವರು ಮಕ್ಕಳಿಗೆ ಗಾಯ Read More »

ಅಡಿಕೆ ತೋಟಕ್ಕೆ ಬೆಂಕಿ | ಅಡಿಕೆ ಗಿಡಗಳು ಸುಟ್ಟು ಭಸ್ಮ

ಉಪ್ಪಿನಂಗಡಿ : ಅಡಿಕೆ ತೋಟದಲ್ಲಿ ಬೆಂಕಿ ತಗುಲಿ 250 ಕ್ಕೂ ಹೆಚ್ಚಿನ ಅಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೂಟ್ಟು ಎಂಬಲ್ಲಿ ನಡೆದಿದೆ. ಸುಮಾರು 1 ಎಕರೆ ಪ್ರದೇಶದಲ್ಲಿ ಅಡಿಕೆ ತೋಟಗಳಿದ್ದು, ಪಡ್ಕೊಟ್ಟು ನಿವಾಸಿ ಯತೀಶ್ ಶೆಟ್ಟಿ ಎಂಬವರಿಗೆ ಸೇರಿದ ತೋಟ ಇದಾಗಿದೆ. ಅಡಿಕೆ ಗಿಡಗಳು ಸುಟ್ಟು ಹೋಗಿದ್ದರಿಂದ ಸಾವಿರಾರು ರುಪಾಯಿ ನಷ್ಟ ಸಂಭವಿಸಿದೆ. ಅಡಿಕೆ ಗಿಡಗಳ ಬಳಿ ವಿದ್ಯುತ್ ತಂತಿ ಹಾದು ಹೋಗಿದ್ದರಿಂದ, ಅವಘಡಕ್ಕೆ ಕಾರಣವಾಗಿದೆ ಎಂದು  ಸ್ಥಳೀಯರು ದೂರಿದ್ದಾರೆ. ಘಟನೆ ವೇಳೆ

ಅಡಿಕೆ ತೋಟಕ್ಕೆ ಬೆಂಕಿ | ಅಡಿಕೆ ಗಿಡಗಳು ಸುಟ್ಟು ಭಸ್ಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ   ಸಮುದಾಯ ಅಭಿವೃದ್ಧಿಯಿಂದ  ಪೆರ್ನೆ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರಕ್ಕೆ  ಅನುದಾನ  ಮಂಜೂರು

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರದ ನಿರ್ಮಾಣದ ಕಾಮಗಾರಿಗೆ ಮೊತ್ತವನ್ನು ಹಸ್ತಾಂತರಿಸಲಾಯಿತು. ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ತಾಲೂಕಿನ ಯೋಜನಾಧಿಕಾರಿ  ರಮೇಶ್ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯ ನವೀನ್ ಕುಮಾರ್ ಪದಬರಿ, ಒಕ್ಕೂಟದ

ಶ್ರೀ ಕ್ಷೇತ್ರ ಧರ್ಮಸ್ಥಳ   ಸಮುದಾಯ ಅಭಿವೃದ್ಧಿಯಿಂದ  ಪೆರ್ನೆ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರಕ್ಕೆ  ಅನುದಾನ  ಮಂಜೂರು Read More »

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »

error: Content is protected !!
Scroll to Top