ಸುದ್ದಿ

ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮದ FIR ಗೆ ಹೈಕೋರ್ಟ್ ತಡೆ: ಜೀವರಾಜ್‌ಗೆ ನಿರಾಳ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಅಂಚೆ ಮತ ಎಣಿಕೆ ಕಾರ್ಯದಲ್ಲಿ ಆಕ್ರಮಣ ನಡೆದಿರುವುದಾಗಿ ಆರೋಪಿಸಿ ದಾಖಲಾಗಿದ್ದ ಎಫ್‌ಐ‌ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಮಾಜಿ ಶಾಸಕ ಡಿ. ಎನ್. ಜೀವರಾಜ್, ಆಗಿನ ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಮತ್ತು ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚುನಾವಣಾ ಅಕ್ರಮದ ಹಿನ್ನೆಲೆ ಕಾನೂನು ಕ್ರಮ ಜರುಗಿಸಲಾಗಿತ್ತು. ಸದ್ಯ ಹೈಕೋರ್ಟ್ ಈ ಪ್ರಕರಣಕ್ಕೆ ತಡೆಯಾಜ್ಞೆ […]

ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮದ FIR ಗೆ ಹೈಕೋರ್ಟ್ ತಡೆ: ಜೀವರಾಜ್‌ಗೆ ನಿರಾಳ Read More »

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ :ಪಾಂಡುರಂಗ ಪೈ ಸಿದ್ಧಾಪುರ

ಉಡುಪಿ: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ ಓದುವುದರ ಮೂಲಕ ಶಿಕ್ಷಣದಲ್ಲಿ ಯಶಸ್ಸನ್ನು ಪಡೆಯಬಹುದು. ಅವರು ಕಿರಿಯರಿಗೆ ಮಾದರಿಯಾಗಿ ಬೆಳೆಯಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಡ್ಯುಯಲ್ ಸ್ಟಾರ್ ಎಜುಕೇಶನ್ ಇನ್ಸ್ಟಿಟ್ಯೂಷನ್ ಅಮಾಸೆಬೈಲು ಇಲ್ಲಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 614 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುವ ಪೃತ್ವಿಕ್ ಶೇಖರ್ ಪೂಜಾರಿ ಅವರ ಮನೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ :ಪಾಂಡುರಂಗ ಪೈ ಸಿದ್ಧಾಪುರ Read More »

ಬಾತುಕೋಳಿ ಹಿಡಿಯಲು ಹೋದ ಮಕ್ಕಳು ನೀರುಪಾಲು

ಚಿಕ್ಕಮಗಳೂರು: ಬಾತುಕೋಳಿಗಳನ್ನು ಹಿಡಿಯಲು ಕೆರೆಗೆ ಇಳಿದ ನಾಲ್ಕು ಮಂದಿ ಮಕ್ಕಳು ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಅರಳಗುಪ್ಪೆ ಗ್ರಾಮದಲ್ಲಿ ನಡೆದಿದೆ. ಕಾರಂಜಿ ಕೆರೆಯ ಬಳಿ ಈ ದುರ್ಘಟನೆ ನಡೆದಿದೆ. ಮೃತ ಮಕ್ಕಳನ್ನು ಮಹಾದಿಯಾ, ಅರುನುಸ್, ನಾಯುಸ್, ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಈ ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮಕ್ಕಳ ಜೊತೆಗೆ ಇದ್ದ ನಾಲ್ಕು ವರ್ಷದ ಅರ್ಮಾನ್ ಪಾರಾಗಿದ್ದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ

ಬಾತುಕೋಳಿ ಹಿಡಿಯಲು ಹೋದ ಮಕ್ಕಳು ನೀರುಪಾಲು Read More »

ಕ್ಯಾನ್ಸರ್ ಗುಣಪಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಂಗನಾಮ : ದೂರು ದಾಖಲು

ಕಾರ್ಕಳ: ಕ್ಯಾನ್ಸರ್ ಚಿಕಿತ್ಸೆ ಗುಣ ಪಡಿಸುವ ಭರವಸೆ ನೀಡಿ ವ್ಯಕ್ತಿಯೊಬ್ಬರಿಗೆ 12 ಲಕ್ಷ ರೂ. ಪಂಗನಾಮ ಹಾಕಿದ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಮಣ್ಣಿನ ರೊನಾಲ್ಡ್ ರೋಡ್ರಿಗಸ್ ಅವರ ಪತ್ನಿ ಕ್ಯಾನ್ಸರ್‌ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಅವರನ್ನು ಮಾ. 23 ರಂದು ಮಣಿಪಾಲದ ‌ಕೆ. ಎಂ. ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ರೊನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಾಲಯದ ಬಳಿ ಸಿದ್ದಾರ್ಥ ಎನ್ನುವವನ ‌ಪರಿಚಯವಾಗುತ್ತದೆ. ಸಿದ್ದಾರ್ಥ ಅವರು ತನ್ನ ತಾಯಿಯೂ ಇದೇ

ಕ್ಯಾನ್ಸರ್ ಗುಣಪಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಂಗನಾಮ : ದೂರು ದಾಖಲು Read More »

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 21 ಮಂದಿ ಸಾವು

ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿ 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ತನಿಖೆಗೆ ಆದೇಶಿಸಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 21 ಮಂದಿ ಸಾವು Read More »

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು

ಅಂಚೆ ಮತಪತ್ರದಲ್ಲಿ ಅಕ್ರಮ ಎಸಗಿದ ಕುರಿತು ಮೂವರ ವಿರುದ್ಧ ಕೇಸ್‌ ದಾಖಲು ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿ.ಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಅಂಚೆ ಮತ ಎಣಿಕೆ ಟೇಬಲ್‌ನ ಎಜೆಂಟ್ ಆಗಿರುವ ಸುಧೀರ್ ಕುಮಾರ್ ಮುರೋಳ್ಳಿ ದೂರು ನೀಡಿದ್ದಾರೆ. ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಟ್ರಾಂಗ್ ರೂಂ ಸೀಲ್

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು Read More »

ನಡುರಸ್ತೆಯಲ್ಲಿ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ಸಮಯ ಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು

ನಡುರಸ್ತೆಯಲ್ಲಿ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್‌ Read More »

1 ಸಾವಿರ ರೂಪಾಯಿಯಿಂದ ಲಕ್ಷಾಂತರ ರೂ. ಮೌಲ್ಯದ ಬಹುಮಾನ ಗೆಲ್ಲುವ ಅವಕಾಶ

ಜನಸಾಮಾನ್ಯರ ಕನಸು ನನಸುಗೊಳಿಸುತ್ತಿದೆ ಅಸ್ತ್ರ ಗ್ರೂಪ್‌ನ ಮೆಗಾ ಗೋಲ್ಡ್‌ ಸೇವಿಂಗ್ಸ್‌ ಸ್ಕೀಮ್ ಪುತ್ತೂರು : ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ 1000 ರೂ. ಉಳಿಸಿ, 11 ತಿಂಗಳ ಅವಧಿಯಲ್ಲಿ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್‌ಟಾಪ್‌ಗಳಂತಹ ಲಕ್ಷಾಂತರ ಮೌಲ್ಯದ ಬಹುಮಾನಗಳನ್ನು ಗೆಲ್ಲುವ

1 ಸಾವಿರ ರೂಪಾಯಿಯಿಂದ ಲಕ್ಷಾಂತರ ರೂ. ಮೌಲ್ಯದ ಬಹುಮಾನ ಗೆಲ್ಲುವ ಅವಕಾಶ Read More »

ಡ್ರಗ್ಸ್‌ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರೋಪಿ ಸೆರೆ

ವಿಟ್ಲ : ಮಾದಕ ದ್ರವ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸಿದ ಮತ್ತು ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸ್ ಉಪನಿರೀಕ್ಷಕರೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಅಸ್ಬೀರ್ (26) ಎಂದು ಗುರುತಿಸಲಾಗಿದೆ. ಮೇ 3ರಂದು ಮಧ್ಯಾಹ್ನ ವಿಟ್ಲ ಪೊಲೀಸ್ ಉಪನಿರೀಕ್ಷಕ ಬಿ.ಎಸ್. ನಾಯಕ್ ಮತ್ತು ಅವರ ಸಿಬ್ಬಂದಿ ವಿಟ್ಲ ಚತುಷ್ಪಥ ರಸ್ತೆಯ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿರದ ಕಾರಣ

ಡ್ರಗ್ಸ್‌ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರೋಪಿ ಸೆರೆ Read More »

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ

ರಾತ್ರಿಯವರೆಗೂ ನಡೆದ ಎಣಿಕೆ, ತಡರಾತ್ರಿ ಸ್ಪಷ್ಟ ಫಲಿತಾಂಶ ಘೋಷಣೆ ನವದೆಹಲಿ : ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ. ನಡುರಾತ್ರಿಯವರೆಗೂ ಮತ

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ Read More »

error: Content is protected !!
Scroll to Top