ಸುದ್ದಿ

ಸಿ ಎಂ ವಿಷಯದಲ್ಲಿ ತೀರ್ಮಾನ ಹೈಕಮಾಂಡ್‌ನದ್ದು: ಡಾ. ಜಿ. ಪರಮೇಶ್ವರ್

ಬೆಂಗಳೂರು: ಸಿ ಎಂ ಆಯ್ಕೆ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರಲ್ಲಿ ಯಾವುದೇ ರೀತಿಯಲ್ಲಿ ತಾವು ಲಾಬಿ ನಡೆಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸಿ ಎಂ ಆಗಬೇಕು ಎನ್ನುವ ಅಭಿಮಾನಿಗಳು ಕೂಗುತ್ತಿರುವ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ಯಾವ ಗೊಂದಲಕ್ಕೂ ಒಳಗಾಗಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ನವದೆಹಲಿಗೆ ಹೋಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ಕೆಲವರು ವ್ಯಕ್ತಪಡಿಸುವ ಅಭಿಪ್ರಾಯಗಳಿಗೆ ತಾವೇನೂ ಮಾಡಲು ಸಾಧ್ಯವಿಲ್ಲ. ಇಂತಹ ಚರ್ಚೆಗೆ ನಾನು […]

ಸಿ ಎಂ ವಿಷಯದಲ್ಲಿ ತೀರ್ಮಾನ ಹೈಕಮಾಂಡ್‌ನದ್ದು: ಡಾ. ಜಿ. ಪರಮೇಶ್ವರ್ Read More »

ಅಕ್ರಮ ಕೆಂಪು ಕಲ್ಲು ಸಾಗಾಟ: ಚಾಲಕರ ಸಮೇತ ಲಾರಿಗಳು ಪೊಲೀಸರ ವಶಕ್ಕೆ

ವಿಟ್ಲ: ಲೈಸನ್ಸ್ ಇಲ್ಲದೆ ಕೇರಳದಿಂದ ಕೆಂಪು ಕಲ್ಲುಗಳ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೆರುವಾಯಿ ಮಾರ್ಗವಾಗಿ ಕೇರಳದಿಂದ ‌ಲಾರಿಗಳ ಮೂಲಕ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಬಂಟ್ವಾಳ ಬೆರಿಪದವು ಪ್ರದೇಶದಲ್ಲಿ ಕಲ್ಲಿನ ಲೋಡ್ ತುಂಬಿದ್ದ ಲಾರಿಗಳನ್ನು ಪರಿಶೀಲನೆ ನಡೆಸಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕರಾದ ವಿಟ್ಲದ ಸಾಧಿಕ್ ಮತ್ತು ಮೊಹಮ್ಮದ್ ಅವರನ್ನು ವಿಚಾರಣೆ ನಡೆಸಲಾಗಿದ್ದು, ಕೇರಳದ ಧರ್ಮತ್ತಡ್ಕದಿಂದ ಕಲ್ಲುಗಳನ್ನು ತುಂಬಿ ವೇಣು ಎಂಬವರು

ಅಕ್ರಮ ಕೆಂಪು ಕಲ್ಲು ಸಾಗಾಟ: ಚಾಲಕರ ಸಮೇತ ಲಾರಿಗಳು ಪೊಲೀಸರ ವಶಕ್ಕೆ Read More »

ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ರಾಹಿಂ ಬಾತಿಸ್ ಪೊಲೀಸ್ ಬಲೆಗೆ

ವಿಟ್ಲ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲೇ ಬಂಧಿಸಿದ್ದಾರೆ. ಆರೋಪಿಯನ್ನು ಕನ್ಯಾನ ನಿವಾಸಿ ಇಬ್ರಾಹಿಂ ಬಾತಿಸ್ ಎಂದು ಗುರುತಿಸಲಾಗಿದೆ. ಐಪಿಸಿ ಕಲಂ 427, 504, 394, 341 ಹಾಗೂ 2(A) Prevention of Destruction and Loss of Property Act ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಈತ ವಿದೇಶದಿಂದ ಮರಳಿ ಬರುವಾಗ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ವಿಟ್ಲ ಪೊಲೀಸ್

ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ರಾಹಿಂ ಬಾತಿಸ್ ಪೊಲೀಸ್ ಬಲೆಗೆ Read More »

ಸ್ವಯಂ ಘೋಷಿತ ದೇವಮಾನವನ ‌ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಯಾದಗಿರಿ: ಸ್ವಯಂ ಘೋಷಿತ ದೇವ ಮಾನವ ಶಹಾಪುರದ ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ್ ಓರ್ವ ಬಾಲಕಿಯರ ಜೊತೆ ಅಸಂಬದ್ಧ ಎಂಬಂತೆ ನಡೆದುಕೊಳ್ಳುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ‌ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋ ತುಣುಕನ್ನು ಆಧಾರವಾಗಿಟ್ಟುಕೊಂಡು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ದೂರು ದಾಖಲು ಮಾಡಿಕೊಂಡಿದೆ. ಈ ವಿಡಿಯೋದ ತುಣುಕುಗಳನ್ನು ಪರಿಶೀಲನೆ ಮಾಡಿ, ಸೂಕ್ತ ಕ್ರಮದ ಬಗ್ಗೆ ಮರು ಟಪಾಲಿನಲ್ಲಿ ಮಾಹಿತಿ ಸಲ್ಲಿಸುವಂತೆ ಆಯೋಗ ಜಿಲ್ಲಾ ಪೋಲೀಸ್

ಸ್ವಯಂ ಘೋಷಿತ ದೇವಮಾನವನ ‌ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಅಪ್ರಾಪ್ತ ಹುಡುಗನ ಮೇಲೆ ಹಲ್ಲೆ, ನಿಂದನೆ: ಪ್ರಕರಣ ದಾಖಲು

ಮಂಗಳೂರು: ನಗರದ ಬಾಬುಗುಡ್ಡೆಯ ಸಮೀಪದಲ್ಲಿ ಅಪ್ರಾಪ್ತ ಬಾಲಕನೊಬ್ಬನ ಮೇಲೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಹುಡುಗ ಫೆ. 23 ರಂದು ತನ್ನ ಸ್ನೇಹಿತೆಯ ಜೊತೆಗೆ ರೈಲ್ವೆ ಟ್ರಾಕ್ ಸಮೀಪ ಕುಳಿತು ಮಾತನಾಡುತ್ತಿದ್ದ. ಈ‌ ವೇಳೆ ಅವರಿಬ್ಬರ ವಿಡಿಯೋ ಮಾಡುತ್ತಾ ಸ್ಟೀವನ್ ಮೊಂತೆರೋ ‌ಮತ್ತು ಅವರ ಪುತ್ರ ಅವಿಲ್ ಅಲ್ಲಿಗೆ ಬಂದಿದ್ದಾರೆ. ಅಪ್ರಾಪ್ತ ಹುಡುಗ ಮತ್ತು ಅವನ ಸ್ನೇಹಿತೆಗೆ ‘ನೀವಿಲ್ಲಿ ಕಿಸ್ಸಿಂಗ್ ಮಾಡುತ್ತಿದ್ದ ತೀರಾ, ನಾನು ವಿಡಿಯೋ ಮಾಡಿ ಸಾಮಾಜಿಕ

ಅಪ್ರಾಪ್ತ ಹುಡುಗನ ಮೇಲೆ ಹಲ್ಲೆ, ನಿಂದನೆ: ಪ್ರಕರಣ ದಾಖಲು Read More »

ಕೈಕಾರದಲ್ಲಿ ಭೀಕರ ಅಪಘಾತ: ಚಾಲಕ ಗಂಭೀರ

ಪುತ್ತೂರು: ಕೈಕಾರಗಲ್ಲಿ ಪಿಕಪ್ ಮತ್ತು ರಿಕ್ಷಾ ನಡುವೆ ಅಪಘಾತ ನಡೆದಿದ್ದು, ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪ್ರಕರಣದಲ್ಲಿ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು,‌ ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

ಕೈಕಾರದಲ್ಲಿ ಭೀಕರ ಅಪಘಾತ: ಚಾಲಕ ಗಂಭೀರ Read More »

ಇಸ್ರೇಲಿನಲ್ಲಿ ಉಗ್ರವಾದದ ‌ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ನವದೆಹಲಿ: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಲ್ಲಿನ ಸಂಸತ್ತಿನಲ್ಲಿ ಮಾತನಾಡಿದ್ದು, ಭಾರತ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಭಾರತದ ಪ್ರಧಾನಿಯಾಗಿ ಮತ್ತು ಒಂದು ಪ್ರಾಚೀನ ನಾಗರೀಕತೆಯ ಪ್ರತಿನಿಧಿಯಾಗಿ ಮತ್ತೊಂದು ನಾಗರೀಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಭಾರತ ಉಗ್ರವಾದವನ್ನು ಎಂದಿಗೂ ಸಹಿಸಲಾರದು. ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಉಗ್ರವಾದ ಬಹುದೊಡ್ಡ ಸವಾಲಾಗಿದೆ. ಇದು ಮಾನವೀಯತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಉಗ್ರಗಾಮಿತ್ವವನ್ನು ಒಪ್ಪಲು ಯಾರಿಂದಲೂ ‌ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆ. 7ರಂದು ಹಮಾಸ್

ಇಸ್ರೇಲಿನಲ್ಲಿ ಉಗ್ರವಾದದ ‌ವಿರುದ್ಧ ಗುಡುಗಿದ ಪ್ರಧಾನಿ ಮೋದಿ Read More »

ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ: ದೂರು ದಾಖಲು

ಪುತ್ತೂರು: ಪತಿಯಿಂದ ಹಲ್ಲೆಗೊಳಗಾದ ಮಹಿಳೆಯೊಬ್ಬರು ಪುತ್ತೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದು, ಘಟನೆಗೆ ಸಂಬಂಧಿಸಿದ ಹಾಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಹದಿನಾರು ವರ್ಷಗಳ ಹಿಂದೆ ಮನೋಜ್ ಎಂಬವರ ಜೊತೆಗೆ ನನ್ನ ವಿವಾಹವಾಗಿದೆ. ಒಂಬತ್ತನೇ ತರಗತಿಯ ಮಗನೂ ಇದ್ದಾನೆ. ಗಂಡ ನನಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಫೆ. 25 ರಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ: ದೂರು ದಾಖಲು Read More »

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ

ಇನ್‌ಸ್ಟಾಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್‌ ಹಾಕಿದ ಕಿಡಿಗೇಡಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುರುವಾಗಲು ಇನ್ನೆರಡು ದಿನ ಬಾಕಿಯಿರುವಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ ಮತ್ತೆ ಎದುರಾಗಿದೆ. ಫೆಬ್ರವರಿ 28ರಿಂದ ಪರೀಕ್ಷೆಗಳು ಶುರುವಾಗಲಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. ಯಾವುದಾದರೂ ಪ್ರಶ್ನೆ

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ Read More »

ಮಂಗಳೂರು : ಡಿಜಿಟಲ್‌ ಅರೆಸ್ಟ್‌ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ

ಮಂಗಳೂರು: ಮುಂಬೈಯ ಸಿಸಿಬಿ ಪೊಲೀಸ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಮಂಗಳೂರಿನ ವ್ಯಕ್ತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 41.85 ಲಕ್ಷ ರೂ. ಲಪಟಾಯಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಜ.31ರಂದು ಅಪರಿಚಿತ ವ್ಯಕ್ತಿ ನವದೆಹಲಿಯಿಂದ ಕರೆ ಮಾಡಿ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡು, ನಿಮ್ಮ ಗುರುತಿನ ಚೀಟಿ ಉಪಯೋಗಿಸಿಕೊಂಡು ಮುಂಬೈಯ ಕೆನರಾ ಬ್ಯಾಂಕ್‌ನಲ್ಲಿ ಖಾತೆಯನ್ನು ತೆರೆಯಲಾಗಿದೆ. ಅದರಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಗುರುತಿನ ಚೀಟಿಯ ನಂಬರ್ ಉಪಯೋಗಿಸಿಕೊಂಡು ಮೊಬೈಲ್ ನಂಬರ್ ಪಡೆದುಕೊಳ್ಳಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅಕ್ರಮ

ಮಂಗಳೂರು : ಡಿಜಿಟಲ್‌ ಅರೆಸ್ಟ್‌ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ Read More »

error: Content is protected !!
Scroll to Top