ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ
ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ವಿವಾದ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್ ಅಂಗಳಲ್ಲಿದ್ದರೂ ಮಹಾರಾಷ್ಟ್ರ ಸರಕಾರ ಕರ್ನಾಟಕದ 860ಕ್ಕೂ ಅಧಿಕ ಹಳ್ಳಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತಿರುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳ ಮೂಲಕ ಮಹಾರಾಷ್ಟ್ರ ಸರಕಾರ ಮತ್ತು ಮುಖ್ಯಮಂತ್ರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ […]