ಚಲಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚಿ ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ
ತಿರುವನಂತಪುರ : ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ ಏ. 07 ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಾರುಖ್ ಸೈಫಿ(24) ಎಂಬವನೇ ಆರೋಪಿ.ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಆರೋಪಿ ಶಾರುಖ್ ಸೈಫಿಯನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. ಭಾನುವಾರ ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, […]